Homeಮುಖಪುಟಉತ್ತರ ಪ್ರದೇಶ| ಮದುವೆ ಸಮಾರಂಭದಲ್ಲಿ ಬಾಲಕಿ ಮೇಲೆ 47 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಉತ್ತರ ಪ್ರದೇಶ| ಮದುವೆ ಸಮಾರಂಭದಲ್ಲಿ ಬಾಲಕಿ ಮೇಲೆ 47 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಸಮೀಪ ನಡೆದ ಮದುವೆ ಸಮಾರಂಭದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ಕು ದಿನಗಳ ನಂತರ ಸೋಮವಾರ 47 ವರ್ಷದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ವಿಶಾರತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ. ಅತ್ಯಾಚಾರ ಆರೋಪಿಯನ್ನು ನಂದಕಿಶೋರ್ ಎಂದು ಗುರುತಿಸಲಾಗಿದೆ.

ನಂತರ ಪೊಲೀಸರು ತನಿಖೆ ಆರಂಭಿಸಿ ಸೋಮವಾರ ವಿಶಾರತ್‌ಗಂಜ್-ಅತ್ರಾಂಚೇಡಿ ರಸ್ತೆಯಿಂದ ನಂದಕಿಶೋರ್‌ನನ್ನು ಬಂಧಿಸಿದ್ದಾರೆ ಎಂದು ಎಎಸ್‌ಪಿ ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಆತನನ್ನು ಜೈಲಿಗೆ ಕಳುಹಿಸಿತು.

ವಿಶಾರತ್‌ಗಂಜ್ ಸ್ಟೇಷನ್ ಹೌಸ್ ಆಫೀಸರ್ ಸತೀಶ್ ಕುಮಾರ್ ಅವರ ಪ್ರಕಾರ, ಏಪ್ರಿಲ್ 24 ರಂದು ಗ್ರಾಮದಲ್ಲಿ ನಡೆದ ತನ್ನ ಸಂಬಂಧಿಕರ ಮದುವೆಗೆ ಹಾಜರಾಗಲು ಅಪ್ರಾಪ್ತ ಬಾಲಕಿ ತನ್ನ ಕುಟುಂಬದೊಂದಿಗೆ ಬಂದಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಸಮಾರಂಭದ ಸಮಯದಲ್ಲಿ ಬಾಲಕಿಯನ್ನು ಆಮಿಷವೊಡ್ಡಿ ಅತ್ಯಾಚಾರ ಮಾಡಿದ್ದಾಗಿ ಅವನು ಒಪ್ಪಿಕೊಂಡಿದ್ದಾನೆ.

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರು ಕಟ್‌: ಎಸ್‌ಐಆರ್‌ ಬಳಿಕ ಅರ್ಧದಷ್ಟು ಮತದಾರರು ಪಟ್ಟಿಯಿಂದ ಹೊರಕ್ಕೆ 

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಬರೋಬ್ಬರಿ 46.88 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂದರೆ, ಎಸ್‌ಐಆರ್‌ ಆರಂಭಕ್ಕೂ ಮುನ್ನ ನಗರದಲ್ಲಿದ್ದ ಒಟ್ಟು...

ಉತ್ತರ ಪ್ರದೇಶ| ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಸಾವು ಪ್ರಕರಣ; ಎಫ್‌ಐಆರ್ ದಾಖಲು

ಅಕ್ಟೋಬರ್ 25 ರಂದು ಪ್ರತಾಪಗಢದ ಡಾ. ಸೋನೆಲಾಲ್ ಪಟೇಲ್ ವೈದ್ಯಕೀಯ ಕಾಲೇಜು ಆವರಣದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಲಿತ ಎಂಬಿಬಿಎಸ್ ವಿದ್ಯಾರ್ಥಿಯ ಕುಟುಂಬವು, ಸೋಮವಾರ ತಡರಾತ್ರಿ ಆತನ ಮೃತದೇಹವನ್ನು ಹೊತ್ತುಕೊಂಡು ತಮ್ಮ ಊರಾದ...

SIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ನಡುವೆ ಬಿಜೆಪಿ ಸದಸ್ಯ ಉದಯ್ ಕುಮಾರ್ ಹಾಗೂ ಅವರ ಪತ್ನಿ ಬಿಂದು...

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...