Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...