Homeಮುಖಪುಟಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ನಂತರ ಯೂಟರ್ನ್ ಹೊಡೆದ ಬಿಜೆಪಿ, ಮೈತ್ರಿ ಪಕ್ಷಗಳ ನಾಯಕರಿವರು!

- Advertisement -
- Advertisement -

ಮುಂದಿನ ಜನಗಣತಿಯ ಜೊತೆಗೆ ಜಾತಿ ಗಣತಿ ಕೂಡಾ ನಡೆಸುವುದಾಗಿ ಕೇಂದ್ರ ಸರ್ಕಾರವು ಏಪ್ರಿಲ್ 30ರ ಬುಧವಾರ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಂಪುಟದ ರಾಜಕೀಯ ವಿಷಯಗಳ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಈ ಘೋಷಣೆಯು ದೇಶಾದ್ಯಂತ ರಾಜಕೀಯ, ಸಾಮಾಜಿಕ ಮತ್ತು ಆಡಳಿತಾತ್ಮಕ ಚರ್ಚೆಗಳಿಗೆ ನಾಂದಿ ಹಾಡಿದೆ. ಬಿಜೆಪಿ ಯೂಟರ್ನ್‌

ಜಾತಿ ಗಣತಿಯು ಚುನಾವಣೆಯ ಪ್ರಮುಖ ವಿಷಯವಾಗಿ ವಿಪಕ್ಷಗಳು ಪ್ರಚಾರ ಮಾಡುತ್ತಿದ್ದಾಗ ಬಿಜೆಪಿ ಅದಕ್ಕೆ ತದ್ವಿರುದ್ಧವಾಗಿ ತೀವ್ರ ವಿರೋಧ ಮಾಡಿ ಪ್ರಚಾರ ಕೈಗೊಂಡಿತ್ತು. ಅದರ ನಾಯಕರು ಈ ಹಿಂದಿನಿಂದಲೂ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಲೆ ಬಂದಿದ್ದಾರೆ. ಆದರೆ, ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡ ನಂತರ ಇಡೀ ಬಿಜೆಪಿ, ಅದರ ಮಿತ್ರ ಪಕ್ಷಗಳು, ಸಂಘಪರಿವಾರ ಮತ್ತು ಅದರ ಬೆಂಬಲಿಗರು ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದಾರೆ. ಈ ಹಿಂದೆ ಜಾತಿಗಣತಿಯ್ನು ವಿರೋಧ ಮಾಡಿದ್ದ ಪ್ರಮುಖ ವ್ಯಕ್ತಿಗಳ ಪಟ್ಟಿ ಕೆಳಗಿದೆ.

ಜಾತಿ ಗಣತಿ ವಿರೋಧ ಮಾಡಿದ್ದ ಪ್ರಮುಖ ನಾಯಕರು

  • ಪ್ರಧಾನಿ ನರೇಂದ್ರ ಮೋದಿ

2023 ರಲ್ಲಿ ಮಾತನಾಡಿದ್ದ ಮೋದಿ ಜಾತಿ ಗಣತಿಯನ್ನು “ಜಾತಿಯ ಆಧಾರದಲ್ಲಿ ದೇಶವನ್ನು ಒಡೆಯುವ ಪಾಪಕೃತ್ಯ” ಎಂದು ಟೀಕಿಸಿದ್ದರು. ಜಾತಿ ಗಣತಿ ಒಂದು ”ಮಾವೋವಾದಿ ಚಿಂತನೆ” ಎಂದು ಅವರು ಹೇಳಿದ್ದು, ವಿರೋಧ ಪಕ್ಷಗಳು “ನಗರ ನಕ್ಸಲ್” ಚಿಂತನೆಯ ಭಾಗವಾಗಿ ಇದನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದರು.ಇಂತಹ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ಅವರ ಸರ್ಕಾರವೇ ಜಾತಿ ಗಣತಿಯನ್ನು ಮುಂದಿನ ಜನಗಣತಿಯ ಜೊತೆಗೆ ನಡೆಸಲು ನಿರ್ಧರಿಸಿದೆ.

  • ಗೃಹ ಸಚಿವ ಅಮಿತ್ ಶಾ

ಜಾತಿ ಗಣತಿಯನ್ನು ಒಂದು ಸಂಕೀರ್ಣ ವಿಷಯವೆಂದು ಪರಿಗಣಿಸಿದ್ದ ಅಮಿತ್ ಶಾ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಲು ವಿರೋಧಿಸಿತು. 2021 ರಲ್ಲಿ, ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಜಾತಿ ಗಣತಿಯನ್ನು ವಿರೋಧಿಸಿತು, ಇದು “ರಾಜಕೀಯ ಪ್ರೇರಿತ ಫಲಿತಾಂಶಗಳಿಗೆ” ಕಾರಣವಾಗಲಿದೆ ಎಂದು ಹೇಳಿತ್ತು.

ಅಕ್ಟೋಬರ್ 2, 2023ರಂದು ಬಿಹಾರದ ಜಾತಿ ಸಮೀಕ್ಷೆಯ ಫಲಿತಾಂಶ ಬಿಡುಗಡೆಯಾದಾಗ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಅದನ್ನು “ತಪ್ಪು ರಾಜಕಾರಣ” ಎಂದು ಕರೆದಿದ್ದರು. “ಯಾದವ್ ಮತ್ತು ಮುಸ್ಲಿಂ ಸಮುದಾಯಗಳ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ” ಎಂದು ಆರೋಪಿಸಿದ್ದ ಅವರು ಇದು ನೀತಿಶ್ ಕುಮಾರ್ ಸರ್ಕಾರದ “ಅಪಾಯಕಾರಿ ರಾಜಕಾರಣ” ಎಂದು ಟೀಕಿಸಿದ್ದರು.

ಅದಗ್ಯೂ, ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಹೇಳಿಕೆಯಿಂದ ಸಂಪೂರ್ಣವಾಗಿ ಯೂಟರ್ನ್ ಮಾಡಿದ್ದು, ಜಾತಿ ಗಣತಿಯನ್ನು ಮುಂದಿನ ಜನಗಣತಿಯಲ್ಲಿ ಸೇರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಏಪ್ರಿಲ್ 30, 2025ರಂದು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ.

“ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಮೋದಿ ಸರ್ಕಾರವು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ CCPA (ಕ್ಯಾಬಿನೆಟ್ ಕಮಿಟಿ ಆನ್ ಪೊಲಿಟಿಕಲ್ ಅಫೇರ್ಸ್) ಸಭೆಯಲ್ಲಿ, ಮುಂದಿನ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ನಿರ್ಧಾರವು ಸಾಮಾಜಿಕ ಸಮಾನತೆ ಮತ್ತು ಪ್ರತಿಯೊಂದು ವರ್ಗದ ಹಕ್ಕುಗಳಿಗೆ ಬಲವಾದ ಸಂದೇಶವನ್ನು ನೀಡಿದೆ. ಈ ನಿರ್ಧಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜಾತಿಗಳನ್ನು ಸಬಲೀಕರಣಗೊಳಿಸಲಿದೆ, ಒಗ್ಗಟ್ಟನ್ನು ಉತ್ತೇಜಿಸಲಿದೆ ಮತ್ತು ವಂಚಿತರ ಉನ್ನತಿಗೆ ಹೊಸ ಮಾರ್ಗಗಳನ್ನು ತೆರೆಯಲಿದೆ.” ಎಂದು ಅಮಿತ್ ಶಾ ಹೇಳಿದ್ದಾರೆ.

  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಏಪ್ರಿಲ್ 12, 2024ರಂದು ಮಧ್ಯಪ್ರದೇಶದ ಚಿಂದ್ವಾರಾದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ನಡ್ಡಾ, “ನಾವು ಜಾತಿ ಗಣತಿಯನ್ನು ವಿರೋಧಿಸುತ್ತಿಲ್ಲ, ಆದರೆ ಕಾಂಗ್ರೆಸ್ ಈ ವಿಷಯವನ್ನು ಜನರನ್ನು ಒಡೆಯಲು ಬಳಸುತ್ತಿದೆ. ಪ್ರಧಾನಿ ಮೋದಿಯವರು ರಾಜಕೀಯವನ್ನು ಜಾತಿ, ಧರ್ಮ, ಪ್ರದೇಶದ ಆಧಾರದಿಂದ ದೂರವಿಟ್ಟು ಅಭಿವೃದ್ಧಿಯ ಕಡೆಗೆ ಕೊಂಡೊಯ್ದಿದ್ದಾರೆ.” ಎಂದು ಹೇಳಿದ್ದರು.

ಏಪ್ರಿಲ್ 30, 2025ರಂದು ಜೆ.ಪಿ. ನಡ್ಡಾ ಅವರು ಜಾತಿಗಣತಿ ನಿರ್ಧಾರವನ್ನು “ಐತಿಹಾಸಿಕ” ಎಂದು ಕೊಂಡಾಡಿದ್ದಾರೆ. “ಈ ನಿರ್ಧಾರವು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳನ್ನು ಮುಖ್ಯವಾಹಿನಿಗೆ ಕೊಂಡುಬರುವಲ್ಲಿ ಮತ್ತು ದೀರ್ಘಕಾಲದಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ಘನತೆಯನ್ನು ಮರುಸ್ಥಾಪಿಸುವಲ್ಲಿ ಅತ್ಯಂತ ಮಹತ್ವದ್ದಾಗಿದೆ.” ಎಂದು ಹೇಳಿದ್ದಾರೆ.

  • ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಯೂಟರ್ನ್‌

ಯೋಗಿ ಆದಿತ್ಯನಾಥ್ ಅವರು ಜಾತಿ ಗಣತಿಯನ್ನು ಈ ಹಿಂದೆ ವಿರೋಧಿಸಿದ್ದರು. “ಜಾತಿಗಣತಿ ಕೈಗೊಳ್ಳುವವರು ದೇಶವನ್ನು ಒಡೆಯಲು ಬಯಸುತ್ತಾರೆ” ಎಂದು ಅವರು ಹೇಳಿದ್ದರು. ಜಾತಿ ಗಣತಿಯು ಸಾಮಾಜಿಕ ಒಡಕು ಮತ್ತು ಅಶಾಂತಿಗೆ ಕಾರಣವಾಗಬಹುದು ಎಂಬ ಅವರು ಆತಂಕ ವ್ಯಕ್ತಪಡಿಸಿದ್ದರು.

ಅದಾಗ್ಯೂ, ಇದೀಗ ಆದಿತ್ಯನಾಥ್ ಅವರು ಜಾತಿಗಣತಿ ಬಗ್ಗೆಗಿನ ತಮ್ಮ ನಿಲುವನ್ನು ಸಂಪೂರ್ಣವಾಗಿ ಬದಲಾಯಿಸಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರವು “ಅಭೂತಪೂರ್ವ ನಿರ್ಧಾರ” ಎಂದು ಕರೆದಿದ್ದಾರೆ.

  • ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ ಅವರ ಜಾತಿ ಗಣತಿಯ ಬಗೆಗಿನ ನಿಲುವು ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಬದಲಾಗಿದೆ. 2024ರಲ್ಲಿ ಅವರು ಕಾಂಗ್ರೆಸ್‌ನ ಜಾತಿ ಗಣತಿಯ ಬೇಡಿಕೆಯನ್ನು ರಾಜಕೀಯ ತಂತ್ರವೆಂದು ಟೀಕಿಸಿದ್ದರು. ಆದರೆ, 2025ರಲ್ಲಿ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

2023ರ ಅಕ್ಟೋಬರ್ 31ರಂದು, “ಜಾತಿ ಆಧಾರಿತ ವಿಭಜನೆಗಳು ಸಮಾಜದ ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ. ಹಿಂದೂ ಸುಧಾರಕರು ಅವುಗಳನ್ನು ಸ್ಪಷ್ಟವಾಗಿ ಖಂಡಿಸಿದ್ದಾರೆ. ಈ ಯುಗದಲ್ಲಿ, ಜಾತಿಯ ಆಧಾರದ ಮೇಲೆ ನಮ್ಮನ್ನು ನಾವು ವಿಭಜಿಸಿಕೊಳ್ಳುವ ಬದಲು ಒಂದಾಗುವುದು ನಮ್ಮ ಕರ್ತವ್ಯವಾಗಿದೆ.” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಆದರೆ ಇದೀಗ ಅವರು ಸಂಪೂರ್ಣವಾಗಿ ಯೂಟರ್ನ್ ತೆಗೆದುಕೊಂಡಿದ್ದಾರೆ.

  • ಕೇಂದ್ರ ಬೃಹತ್ ಕೈಗಾಗರಿಕಾ ಸಚಿವ ಕುಮಾರಸ್ವಾಮಿ ಬಿಜೆಪಿ ಯೂಟರ್ನ್‌

ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜಾತಿ ಗಣತಿಯ ಬಗ್ಗೆ ತದ್ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಗೊಂದಲ ಮತ್ತು ಚರ್ಚೆಗೆ ಕಾರಣವಾಗಿದೆ. ಒಂದೆಡೆ, ಅವರು ಕರ್ನಾಟಕದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ತೀವ್ರವಾಗಿ ವಿರೋಧಿಸಿದ್ದು, ಇದನ್ನು “ದ್ವೇಷದ ಗಣತಿ” ಎಂದು ಕರೆದು ರಾಜಕೀಯ ಷಡ್ಯಂತ್ರವೆಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರವನ್ನು “ಐತಿಹಾಸಿಕ ಮತ್ತು ದೂರದೃಷ್ಟಿಯ” ಕ್ರಮವೆಂದು ಶ್ಲಾಘಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

ವಿಚಾರಣೆ ಹಂತದಲ್ಲಿ 1,700 ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು: ಇಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...