Homeಕರ್ನಾಟಕಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಜನ ಗಣತಿಯೊಂದಿಗೆ ಜಾತಿ ಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಕಾವೇರಿ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯ ಶೇ.50ರ ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು.

ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ

ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿಯೊಂದಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಿದರೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ. ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಸಿಎಂ ಹೇಳಿದರು.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ

2015 ರಲ್ಲಿಯೇ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 192 ಕೋಟಿ ರೂಪಾಯಿ ವೆಚ್ಚ ಮಾಡಿ  1.33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದರಿಂದ ಪ್ರೇರಿತರಾಗಿ ಮತ್ತು  ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈಗ ಸಮೀಕ್ಷೆಗೆ ಮುಂದಾಗಿದೆ ಸಿಎಂ ಹೇಳಿದರು.

ಮೇ 9ಕ್ಕೆ ಸಚಿವ ಸಂಪುಟ ಸಭೆ

ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿರುವ  ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯ ಕುರಿತು ಮೇ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

ಶೇ.50 ಮೀಸಲಾತಿ ಮಿತಿಯನ್ನು ತೆಗೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15ನೇ ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಅದನ್ನೂ ಪರಿಗಣಿಸಬೇಕೆಂದು ಎಂದು ಆಗ್ರಹಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ

ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನ ಗಣತಿ, ಜಾತಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಸಚಿವರನ್ನು ಹೆದರಿಸಿ ವರದಿ ಪಡೆಯಲಿಲ್ಲ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಜಾತಿ ಗಣತಿ ಹಾಗೂ ಜನ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಾಡಿ ಹೊಗಳಿದ್ದು, ರಾಜ್ಯ ಸರ್ಕಾರದ ಸಮೀಕ್ಷೆಗೆ ಯಾವುದೇ ಪಾವಿತ್ರ್ಯತೆ ಇಲ್ಲ ಎಂದು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, “ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಜಾತಿ ಗಣತಿ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿದ ಕುಮಾರಸ್ವಾಮಿ, ವರದಿಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದರು.

ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ

ರಾಜ್ಯದ ಸಮೀಕ್ಷೆಯ ಬಗ್ಗೆ ಈ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದರು.

ನೆಹರೂ ಬಗ್ಗೆ ಅಪಪ್ರಚಾರ

ಧರ್ಮೇಂದ್ರ ಪ್ರಧಾನ್ ಅವರು ನೆಹರೂ ಅವರು ಹಿಂದೆ ಜಾತಿ ಗಣತಿಯನ್ನು ವಿರೋಧಿಸಿದ್ದರು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದೆಲ್ಲಾ ಸುಳ್ಳು ಹಾಗೂ ಅಪಪ್ರಚಾರ ಎಂದು ಹೇಳಿದರು.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...