Homeದಲಿತ್ ಫೈಲ್ಸ್ದಲಿತ ದೌರ್ಜನ್ಯ ಪ್ರಕರಣ: ಧರ್ಮಪುರಿಯಲ್ಲಿ ಪರಿಶಿಷ್ಟ ಜಾತಿ ಬಾಲಕನ ಮೇಲೆ ಹಲ್ಲೆ

ದಲಿತ ದೌರ್ಜನ್ಯ ಪ್ರಕರಣ: ಧರ್ಮಪುರಿಯಲ್ಲಿ ಪರಿಶಿಷ್ಟ ಜಾತಿ ಬಾಲಕನ ಮೇಲೆ ಹಲ್ಲೆ

- Advertisement -
- Advertisement -

ಬುಧವಾರ ರಾತ್ರಿ ಧರ್ಮಪುರಿಯಲ್ಲಿ ನಡೆದ ಜಾತಿ ಆಧಾರಿತ ದಾಳಿಯಲ್ಲಿ 16 ವರ್ಷದ ದಲಿತ ಬಾಲಕನ ಮೇಲೆ ಗುಂಪೊಂದು ಕಬ್ಬಿಣದ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದೆ.

ಧರ್ಮಪುರಿಯ ತೆಂಕರೈಕೊಟ್ಟೈ ಗ್ರಾಮದ ಸಂತ್ರಸ್ತ ಬಾಲಕ ಶಾಲೆ ಬಿಟ್ಟ ನಂತರ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಗೋಪಾಲಪುರಂನಲ್ಲಿರುವ ಆರ್ ಸೆಲ್ವಂ (38) ಅವರ ಒಡೆತನದ ಪೆಟ್ರೋಲ್ ಬಂಕ್‌ನಲ್ಲಿ ಕೆಲವು ದಿನಗಳ ಕಾಲ ಕೆಲಸ ಮಾಡಿದ್ದೇನೆ ಎಂದು ಬಾಲಕ ಹೇಳಿಕೊಂಡಿದ್ದಾನೆ. ಎರಡು ತಿಂಗಳ ಹಿಂದೆ, ಆರು ದಿನಗಳ ಕಾಲ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸೆಲ್ವಂ ತನಗೆ ಊಟ ಖರೀದಿಸಿ ತರಲಿಲ್ಲ ಎಂದು ಥಳಿಸಿದ್ದಾರೆ ಎಂದು ಆತ ಆರೋಪಿಸಿದ್ದಾನೆ.

ಬುಧವಾರ ರಾತ್ರಿ 9.30 ರ ಸುಮಾರಿಗೆ, ಬಾಲಕ ತನ್ನ 20 ವರ್ಷದ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ತುಂಬಿಸಲು ಬಂಕ್‌ಗೆ ಭೇಟಿ ನೀಡಿದ್ದ. ಪೆಟ್ರೋಲ್ ಪಡೆದ ನಂತರ, ಬಾಲಕ ಟೈರ್‌ನಲ್ಲಿ ಗಾಳಿ ತುಂಬಲು ಪ್ರಯತ್ನಿಸಿದನು. ಆದರೆ, ಬಂಕ್ ಸಿಬ್ಬಂದಿ ಯಾವುದೋ ಕಾರಣ ನೀಡಿ ಗಾಳಿ ತುಂಬಿಸಲು ನಿರಾಕರಿಸಿದರು.

ಹುಡುಗ ತನ್ನ ಚಿಕ್ಕಪ್ಪನ ಬಗ್ಗೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಬಂಕ್ ಸಿಬ್ಬಂದಿಯೊಟ್ಟಿಗೆ ಪ್ರಶ್ನಿಸಿದನು. ಇದರಿಂದ ಕೋಪಗೊಂಡ ಸೆಲ್ವಂ ಮತ್ತು ಇತರ ನಾಲ್ವರು ಸಿಬ್ಬಂದಿ ತಕ್ಷಣ ಇಬ್ಬರನ್ನೂ ಜಾತಿ ನಿಂದನೆ ಮಾಡಿ ನಿಂದಿಸಿದರು.

“ಅವರು ಪದೇ ಪದೇ ಕಟ್ಟಿಗೆಯಿಂದ ಹೊಡೆದರು. ಮತ್ತೆ ನನ್ನನ್ನು ಎಳೆದುಕೊಂಡು ಹೋಗಿ ಕಬ್ಬಿಣದ ಕಂಬಕ್ಕೆ ಕಟ್ಟಿ ಬಿದಿರು ಮತ್ತು ಬೆಲ್ಟ್‌ನಿಂದ ತೀವ್ರವಾಗಿ ಹೊಡೆದರು. ನನ್ನ ಕೈಗಳು, ಕಾಲುಗಳು ಮತ್ತು ತಲೆಗೆ ತೀವ್ರ ಗಾಯಗಳಾಗಿವೆ” ಎಂದು ಹುಡುಗ ತನ್ನ ದೂರಿನಲ್ಲಿ ಹೇಳಿದ್ದಾನೆ.

ಅವನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿದ ಮತ್ತೊಬ್ಬ ಯುವಕ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಅವರು ಬಂದು ಬಾಲಕನನ್ನು ಚಿಕಿತ್ಸೆಗಾಗಿ ಹರೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ದೂರಿನ ಆಧಾರದ ಮೇಲೆ, ಹರೂರು ಪೊಲೀಸರು ಐದು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಗುರುವಾರ ಪೊಲೀಸರು ಬಂಕ್ ಮಾಲೀಕ ಆರ್ ಸೆಂಥಿಲ್ (43) ಮತ್ತು ವಿ ಸೆಲ್ವರಾಜ್ (32) ಅವರನ್ನು ಬಂಧಿಸಿದ್ದಾರೆ, ಟಿ ಸೆಂಥಿಲ್ (45) ಮತ್ತು ವಿ ರಾಮಕೃಷ್ಣನ್ (66) ಅವರನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ. ಅವರೆಲ್ಲರೂ ವನ್ನಿಯಾರ್ ಸಮುದಾಯದವರು; ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಉತ್ತರ ಪ್ರದೇಶ| 16 ವರ್ಷದ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...