Homeಕರ್ನಾಟಕಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

- Advertisement -
- Advertisement -

ವಿವಾದಿತ ಗಾಯಕ ಸೋನು ನಿಗಮ್ ಅವರು ಬೆಂಗಳೂರಿನ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಸೋನು ನಿಗಮ್‌ ʻʻಇದಕ್ಕೇನೇ, ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼʼ ಎಂದು ಹೇಳಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ

ಘಟನೆ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ನಾರಾಯಣ ಗೌಡ ಅವರು ಪ್ರತಿಕ್ರಿಯಿಸಿದ್ದು, ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅವರು, “ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಗಾಯಕ ಸೋನು ನಿಗಮ್‌ ʻಇದಕ್ಕೇನೇ, ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼ ಎಂದು ಹೇಳಿದ್ದಾನೆ. ಕರ್ನಾಟಕ ಪೊಲೀಸರು ಈ ಕೂಡಲೇ ಇವನ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಬೇಕು. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದರೆ ಅದು ಹೇಗೆ ಭಯೋತ್ಪಾದಕ ದಾಳಿಗೆ ಕಾರಣವಾಗಲು ಸಾಧ್ಯ?” ಎಂದು ಅವರು ಕೇಳಿದ್ದಾರೆ.

ಕನ್ನಡದ ಅನ್ನ ತಿಂದು ಕೊಬ್ಬಿರುವ ಈತ ಅದು ಹೇಗೆ ಕರ್ನಾಟಕದಲ್ಲಿ ಇನ್ನು ಮೇಲೆ ಶೋಗಳನ್ನು ನಡೆಸುತ್ತಾನೆ ನೋಡೋಣ ಎಂದು ನಾರಾಯಣ ಗೌಡ ಅವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಯಾವ ನಿರ್ಮಾಪಕರೂ ಈತನಿಂದ ಹಾಡು ಹಾಡಿಸಬಾರದು ಎಂದು ಒತ್ತಾಯಿಸಿರುವ ಅವರು, ಯಾವುದೇ ಸಂಸ್ಥೆಗಳು ಇವನ ಶೋ ನಡೆಸಲು ಮುಂದಾಗಬಾರದು. ಒಂದು ವೇಳೆ ಯಾರಾದರೂ ಈ ದುಸ್ಸಾಹಸ ಮಾಡಿದರೆ ಅವರೇ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಸೋನು ನಿಗಮ್‌ ನೀಡಿರುವ ಹೇಳಿಕೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ, ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಅವರನ್ನು ಖಳನಾಯಕರನ್ನಾಗಿ ಮಾಡುವ ಹುನ್ನಾರ ಹೊಂದಿದೆ. ಹೀಗಾಗಿ ಅವನ ಮೇಲೆ ಈ ಕೂಡಲೇ ದೂರು ದಾಖಲಾಗಬೇಕು.” ಎಂದು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತ್ತೇನೆ ಎಂದು ಹೇಳಿರುವ ಅವರು, ಇಂಥ ಕೃತಘ್ನರನ್ನು ಕರ್ನಾಟಕದ ನೆಲದಲ್ಲಿ ಅನ್ನ ಹಾಕಿ ಸಾಕುವುದನ್ನು ಇನ್ನು ಮುಂದಾದರೂ ನಾವು ಕೈಬಿಡಬೇಕು ಎಂದು ಹೇಳಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

Karnataka SSLC Result 2025 | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...