Homeಮುಖಪುಟ'ಮುಸ್ಲಿಮರು, ಕಾಶ್ಮೀರಿಗಳ ಬಗ್ಗೆ ದ್ವೇಷ ಬೇಡ': ಪಹಲ್ಗಾಮ್ ದಾಳಿಯಲ್ಲಿ ಸಾವಿಗೀಡಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್...

‘ಮುಸ್ಲಿಮರು, ಕಾಶ್ಮೀರಿಗಳ ಬಗ್ಗೆ ದ್ವೇಷ ಬೇಡ’: ಪಹಲ್ಗಾಮ್ ದಾಳಿಯಲ್ಲಿ ಸಾವಿಗೀಡಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್ ಪತ್ನಿ ಹೇಳಿಕೆ

- Advertisement -
- Advertisement -

“ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದು ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಗುರುವಾರ (ಮೇ 1) ದಿವಗಂತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮದಿನವಾಗಿತ್ತು. ಆದರೆ, ಅವರು ಅಗಲಿರುವ ಕಾರಣ, ಸ್ಮರಣಾರ್ಥವಾಗಿ ಹರಿಯಾಣದ ಕರ್ನಾಲ್‌ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಸರ್ಕಾರೇತರ ಸಂಸ್ಥೆ ನ್ಯಾಷನಲ್ ಇಂಟರ್‌ಗ್ರೇಟೆಡ್ ಫೋರಂ ಆಫ್ ಆರ್ಟಿಸ್ಟ್ ಅಂಡ್ ಆಕ್ಟಿವಿಸ್ಟ್ (ಎನ್‌ಐಎಫ್‌ಎಎ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಹಿಮಾಂಶಿ ಅವರು, “ಈ ಘಟನೆಗೆ ಕಾರಣರಾದವರನ್ನು ಶಿಕ್ಷಿಸಬೇಕು, ಆದರೆ ದ್ವೇಷ ಇರಬಾರದು” ಎಂದಿದ್ದಾರೆ.

ವಿನಯ್ ನರ್ವಾಲ್ ಅವರ ತಾಯಿ ಮತ್ತು ಸಹೋದರಿ ಸೇರಿದಂತೆ ಅವರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಸಹೋದರಿ ಸೃಷ್ಟಿ ಮಾಧ್ಯಮಗಳೊಂದಿಗೆ ಮಾತನಾಡಿ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಜನರು ಮತ್ತು ಸರ್ಕಾರದಿಂದ ನಮಗೆ ದೊಡ್ಡ ಮಟ್ಟದ ಬೆಂಬಲ ಸಿಕ್ಕಿದೆ ಎಂದಿದ್ದಾರೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎನ್‌ಐಎಫ್‌ಎಎ ಅಧ್ಯಕ್ಷೆ ಪ್ರೀತ್ಪಾಲ್ ಸಿಂಗ್ ಪನ್ನು, “ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯುವ ಅಧಿಕಾರಿಯೊಬ್ಬರು ಭಯೋತ್ಪಾದನೆಗೆ ಬಲಿಯಾದರು. ಸೈನಿಕರು ಯುದ್ಧಭೂಮಿಯಲ್ಲಿ ರಕ್ತ ಸುರಿಸಿದರೆ, ಅವರ ನೆನಪಿಗಾಗಿ ನಾವು ಇಂದು ರಕ್ತದಾನ ಮಾಡುತ್ತಿದ್ದೇವೆ- ಜೀವಗಳನ್ನು ಉಳಿಸಲು” ಎಂದು ಹೇಳಿದ್ದಾರೆ.

ರಕ್ತದಾನ ಶಿಬಿರದಲ್ಲಿ ಸ್ಥಳೀಯ ಶಾಸಕ ಜಗಮೋಹನ್ ಆನಂದ್ ಮತ್ತು ಇತರರು ರಕ್ತದಾನ ಮಾಡಿದ್ದಾರೆ. “ಯಾವುದೇ ಗೌರವವು ಶೂನ್ಯವನ್ನು ತುಂಬಲು ಸಾಧ್ಯವಿಲ್ಲ. ವಿನಯ್ ನರ್ವಾಲ್ ಅವರ ತ್ಯಾಗವನ್ನು ಗೌರವಿಸಲು ನಾವು ಮಾಡಬಹುದಾದ ಕನಿಷ್ಠ ಕೆಲಸ ಇದು” ಎಂದು ಶಿಬಿರದಲ್ಲಿ ಪಾಲ್ಗೊಂಡವರು ಹೇಳಿದ್ದಾರೆ.

ದಲಿತ ದೌರ್ಜನ್ಯ ಪ್ರಕರಣ: ಧರ್ಮಪುರಿಯಲ್ಲಿ ಪರಿಶಿಷ್ಟ ಜಾತಿ ಬಾಲಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...