Homeಕರ್ನಾಟಕಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

- Advertisement -
- Advertisement -

ಬಸವನ ಬಾಗೇವಾಡಿ ಶಾಸಕ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ರಾಜೀನಾಮೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವ ಶಿವಾನಂದ ಅವರು ಬಿಜಾಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ ಶನಿವಾರ ತನ್ನ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಸಲ್ಲಿಸಿದ್ದರು. ಯತ್ನಾಳ್ ಸವಾಲು

ಏಪ್ರಿಲ್ 30 ರಂದು ಯತ್ನಾಳ್ ಅವರು ಶಿವಾನಂದ ಅವರ ವಿರುದ್ಧ ಅಶ್ಲೀಲ ವಾಗ್ದಾಳಿ ನಡೆಸಿದ್ದರು. “ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ” ಎಂದು ಸವಾಲು ಎಸೆದಿದ್ದರು. ಏಪ್ರಿಲ್ 28 ರಂದು ವಿಜಯಪುರದಲ್ಲಿ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಯತ್ನಾಳ್ ವಿರುದ್ಧ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಶಿವಾನಂದ್ ಭಾಗವಹಿಸಿದ್ದರು.

ಈ ರ್ಯಾಲಿಯಲ್ಲಿ ಮಾತನಾಡಿದ್ದ ಶಿವಾನಂದ್ ಅವರು, ಯತ್ನಾಳ್ ಅವರನ್ನು ಸೋಲಿಸಲು ವಿಜಯಪುರಕ್ಕೆ ಬರಲು ಸಿದ್ಧ ಎಂದು ಹೇಳಿದ್ದರು. ಇದಕ್ಕೆ ಅಸಮಾಧಾನಗೊಂಡಿದ್ದ ಯತ್ನಾಳ್ ಅವರ ವಿರುದ್ಧ ಹೇಳಿಕೆ ನೀಡಿ ಅವರಿಗೆ ಸವಾಲೆಸೆದಿದ್ದರು.

ಅವರ ಸವಾಲು ಸ್ವೀಕರಿಸಿದ್ದ ಸಚಿವ ಶಿವಾನಂದ್ ಅವರು, “ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಈ ಸವಾಲನ್ನು ಸ್ವೀಕರಿಸಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಖಾದರ್ ಅವರಿಗೆ ಸಲ್ಲಿಸಿದ್ದರು.

“ಬಸನಗೌಡ ಪಾಟೀಲ್ ಯತ್ನಾಳ್‌ ಸಹ ಸವಾಲು ಸ್ವೀಕರಿಸಿ ರಾಜೀನಾಮೆ ಸಲ್ಲಿಸಿದರೆ ತಮ್ಮ ರಾಜೀನಾಮೆ ಪತ್ರವನ್ನು ಅಂಗೀಕರಿಸಿ” ಎಂದು ಸಭಾಧ್ಯಕ್ಷರಿಗೆ ಪತ್ರದಲ್ಲಿ ಹೇಳಿದ್ದರು. ಅದಾಗ್ಯೂ, ಶುಕ್ರವಾರ ಸಂಜೆ, ಸ್ಪೀಕರ್ ಖಾದರ್ ಅವರು ಶಿವಾನಂದ್ ಅವರ ಅವರ ಷರತ್ತುಬದ್ಧ ರಾಜೀನಾಮೆಯನ್ನು ತಿರಸ್ಕರಿಸಿದ್ದಾರೆ. ಯತ್ನಾಳ್ ಸವಾಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರೌಡಿ ಹತ್ಯೆಯ ಹಿಂಸಾಚಾರದ ದಿನದ ನಂತರ ಸಹಜ ಸ್ಥಿತಿಯತ್ತ ಕರಾವಳಿ

ರೌಡಿ ಹತ್ಯೆಯ ಹಿಂಸಾಚಾರದ ದಿನದ ನಂತರ ಸಹಜ ಸ್ಥಿತಿಯತ್ತ ಕರಾವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...