Homeಕರ್ನಾಟಕಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಪ್ಪಿನಂಗಡಿ: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ಉಂಟಾಗಿದ್ದ ಪ್ರಕ್ಷುಬ್ದತೆಯ ಕಾರಣದಿಂದಾಗಿ ಜಿಲ್ಲೆಯಲ್ಲಿ 163 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಇಂತಹ ಸಂದರ್ಭದಲ್ಲೇ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ ಸಂಬಂಧ ಶಾಸಕ‌ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ‌ ಹರೀಶ್ ಪೂಂಜ ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಗ್ರಾಮದ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜ‌ ವಿರುದ್ದ ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಎಸ್ ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು, ದೂರಿನ‌ ಅನ್ವಯ ಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ.

ಬ್ರಹ್ಮಕಲಶ ಕಾರ್ಯಕ್ರಮದ ಕೊನೆಯ ದಿನವಾದ ಶನಿವಾರ ತೆಕ್ಕಾರು ನಲ್ಲಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, “ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ” ಎಂದು ಹೇಳಿದ್ದರು. ಗ್ರಾಮದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷ ಪೂರಿತವಾಗಿ ಮಾತನಾಡಿದ ಶಾಸಕರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

“ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್ ಲೈಟ್ ಹೊಡೆದು ಹಾಕಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿದ್ದರು.

ಬಹಳ ಸೂಕ್ಷ್ಮ ಸನ್ನಿವೇಶದಲ್ಲಿ, ಶಾಸಕ ಹರೀಶ್ ಪೂಂಜಾ ಅವರು ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಎಸ್.ಎಂ.ಎಸ್.ಇಬ್ರಾಹಿಂ ಮುಸ್ಲಿಯಾರ್ ಅವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ವಿಡೀಯೋಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ ಸಮುದಾಯದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...