Homeಮುಖಪುಟಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ...

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

- Advertisement -
- Advertisement -

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿಯನ್ನು ಗುರಿಯಾಗಿಸಿ ಬಿಜೆಪಿ ಬೆಂಬಲಿಗರು ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡುತ್ತಿದ್ದು ಈ ಬಗ್ಗೆ ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಇದು ರಾಷ್ಟ್ರೀಯತೆಯೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ ರಾಜ್ಯಸಭಾ ಸಂಸದ ಗೋಖಲೆ, “ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ವಿರುದ್ಧ ಅಶ್ಲೀಲ ಮತ್ತು ದ್ವೇಷಪೂರಿತ ಹೇಳಿಕೆ ನೀಡಲಾಗುತ್ತಿರುವುದನ್ನು ಕಾಣುವುದು ಆಘಾತಕಾರಿಯಾಗಿದೆ. ವಿಷವನ್ನು ಹರಡುವ ಹೆಚ್ಚಿನ ಖಾತೆಗಳು ಬಿಜೆಪಿಗೆ ಸಂಬಂಧಿಸಿವೆ. ಏಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಅವರು ಕೋಮು ಸಾಮರಸ್ಯಕ್ಕಾಗಿ ಮನವಿ ಮಾಡಿದ ಕಾರಣ ಅವರ ಮೇಲೆ ಈ ದಾಳಿ ನಡೆಯುತ್ತಿದೆ ಎಂದು ಗೋಖಲೆ ಉಲ್ಲೇಖಿಸಿದ್ದಾರೆ.”ಐಟಿ ಸಚಿವ ಅಶ್ವಿನಿ ವೈಷ್ಣವ್ ಇದಕ್ಕೆ ಉತ್ತರಿಸಬೇಕು – ಈ ಖಾತೆಗಳನ್ನು ಏಕೆ ತೆಗೆದುಹಾಕುತ್ತಿಲ್ಲ ಅಥವಾ ನಿರ್ಬಂಧಿಸುತ್ತಿಲ್ಲ? ಹತ್ಯೆಗೀಡಾದ ಸಶಸ್ತ್ರ ಪಡೆ ಅಧಿಕಾರಿಯ ಸಂತ್ರಸ್ತ ಪತ್ನಿಯನ್ನು ಗುರಿಯಾಗಿಸಿಕೊಂಡಾಗಲೂ ನಿಮ್ಮ ಪಕ್ಷದ ಪರವಾಗಿರುವ ಟ್ರೋಲ್‌ಗಳು ಕಾನೂನಿನ ವ್ಯಾಪ್ತಿಯಿಂದ ಹೊರಗಿವೆಯೆ? ಇದು ನಿಮ್ಮ ‘ರಾಷ್ಟ್ರೀಯತೆ’ಯೇ?” ಎಂದು ಅವರು ಕೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಮೃತಪಟ್ಟ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ತಮ್ಮ ಪತಿಯ 27 ನೇ ಹುಟ್ಟುಹಬ್ಬದಂದು ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದು, ಈ ವೇಳೆ ಅವರು ಶಾಂತಿ ಮತ್ತು ಕೋಮು ಸೌಹಾರ್ದತೆಗಾಗಿ ಹೃತ್ಪೂರ್ವಕ ಮನವಿ ಮಾಡಿದ್ದರು. ಇದರ ನಂತರ ಬಿಜೆಪಿ ಬೆಂಬಲಿಗರು ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಹಿಮಾಂಶಿ ಅವರು, “ಜನರು ಮುಸ್ಲಿಮರು ಅಥವಾ ಕಾಶ್ಮೀರಿಗಳ ಮೇಲೆ ಮುಗಿಬೀಳುವುದನ್ನು ನಾವು ಬಯಸುವುದಿಲ್ಲ. ನಮಗೆ ಈಗ ಶಾಂತಿ ಮಾತ್ರ ಬೇಕಾಗಿದೆ. ಖಂಡಿತ, ನಮಗೆ ನ್ಯಾಯ ಬೇಕು, ಆದರೆ ಸರ್ಕಾರವು ನಮಗೆ ಅನ್ಯಾಯ ಎಸಗಿದವರ ವಿರುದ್ಧ ನಿಖರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದ್ದ ಅವರು, ದೇಶವು ತನ್ನ ದಿವಂಗತ ಪತಿಗಾಗಿ ಪ್ರಾರ್ಥಿಸುವಂತೆ ಒತ್ತಾಯಿಸಿದ್ದರು.

ಅವರ ಈ ಹೇಳಿಕೆಯ ನಂತರ ಬಿಜೆಪಿ ಪರವಾಗಿರುವ ಹಲವಾರು ಜನರು ಅವರ ವಿರುದ್ಧ ನಿಂದನೆಗೆ ನಿಂತಿದ್ದು, ಕೋಮು ಪ್ರತೀಕಾರ ಮಾಡದಂತೆ ಅವರು ಕರೆ ನೀಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡು ಟ್ರೋಲ್‌ಗಳನ್ನು ಮಾಡಲಾಗುತ್ತಿವೆ.

ಅದಾಗ್ಯೂ, ರಾಷ್ಟ್ರೀಯ ಮಹಿಳಾ ಆಯೋಗ (NCW) ಈ ಟ್ರೋಲಿಂಗ್ ಅನ್ನು ಖಂಡಿಸಿದ್ದು, ಇದನ್ನು “ದುರದೃಷ್ಟಕರ” ಎಂದು ಬಣ್ಣಿಸಿದೆ. ಮಹಿಳೆಯನ್ನು ಅವರ ಸೈದ್ಧಾಂತಿಕ ಅಭಿವ್ಯಕ್ತಿ ಅಥವಾ ವೈಯಕ್ತಿಕ ವಿಚಾರಕ್ಕಾಗಿ ಗುರಿಯಾಗಿಸಿಕೊಳ್ಳುವುದು ಸರಿಯಲ್ಲ ಎಂದು ಪ್ರತಿಪಾದಿಸಿದೆ.

“ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮರಣದ ನಂತರ, ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರ ಹೇಳಿಕೆಗಳಲ್ಲಿ ಒಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗುತ್ತಿರುವ ರೀತಿ ದುರದೃಷ್ಟಕರ” ಎಂದು NCW ಎಕ್ಸ್‌ನಲ್ಲಿ ತಿಳಿಸಿದೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಹಿಮಾಂಶಿ ಅವರನ್ನು ಬೆಂಬಲಿಸಿ, ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ ಮತ್ತು ದೇಶವು ಅವರ ಸಂದೇಶದಿಂದ ಸ್ಫೂರ್ತಿ ಪಡೆಯಬೇಕೆಂದು ಹೇಳಿದ್ದಾರೆ.

“ತನ್ನ ಪತಿಯ ಹುತಾತ್ಮತೆಯ ಹೊರತಾಗಿಯೂ, ಭಾರತೀಯರು ಕಾಶ್ಮೀರಿಗಳನ್ನು ಅಥವಾ ಮುಸ್ಲಿಮರನ್ನು ದೂಷಿಸಬಾರದು ಮತ್ತು ಗುರಿಯಾಗಿಸಬಾರದು ಎಂದು ಒತ್ತಾಯಿಸಿದ ಹಿಮಾಂಶಿ ನರ್ವಾಲ್ ಅವರಿಂದ ನಾವು ಸ್ಫೂರ್ತಿ ಪಡೆಯಬೇಕು” ಎಂದು ಮುಫ್ತಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ದಾಳಿಗೆ ಕೆಲವು ದಿನಗಳ ಹಿಂದೆಯಷ್ಟೆ ಹಿಮಾಂಶಿ ಅವರನ್ನು ವಿವಾಹವಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ದುರಂತ ಹತ್ಯೆಯು ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಅಂತಿಮ ವಿಧಿವಿಧಾನಗಳನ್ನು ಅವರ ಹುಟ್ಟೂರು ಹರಿಯಾಣದ ಕರ್ನಾಲ್‌ನಲ್ಲಿ ನಡೆಸಲಾಯಿತು. ನೌಕಾಪಡೆಯ ಸಿಬ್ಬಂದಿ ಗುಂಡು ಹಾರಿಸಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಿಜೆಪಿ ಟ್ರೋಲ್‌

ಬಿಜೆಪಿ ಜೊತೆ ಸಂಯೋಜಿತವಾಗಿದೆ ಎನ್ನಲಾದ ಸಾಮಾಜಿಕ ಮಾಧ್ಯಮ ಖಾತೆಗಳು ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಪತ್ನಿಯ ಮೇಲೆ ತೀವ್ರವಾಗಿ ದಾಳಿ ಮಾಡುತ್ತಿದ್ದಾರೆ. ಈ ದಾಳಿಯನ್ನು ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೈರ್ ಅವರು ಪಟ್ಟಿ ಮಾಡಿದ್ದು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ಅಪರೇಷನ್ ಕಾಗರ್ ತಕ್ಷಣ ನಿಲ್ಲಿಸಿ, ನಕ್ಸಲರೊಂದಿಗೆ ಮಾತುಕತೆ ನಡೆಸಿ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘುವುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...