Homeಮುಖಪುಟಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ 'ಗನ್ ಸೆಲ್ಯೂಟ್'; ಎಫ್‌ಐಆರ್ ದಾಖಲು

ಮಣಿಪುರ ಹಿಂಸಾಚಾರ ಸಂತ್ರಸ್ತರ ಸ್ಮರಣಾರ್ಥ ‘ಗನ್ ಸೆಲ್ಯೂಟ್’; ಎಫ್‌ಐಆರ್ ದಾಖಲು

- Advertisement -
- Advertisement -

ಮಣಿಪುರ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ‘ಗನ್ ಸೆಲ್ಯೂಟ್’ ನೀಡಿರುವ ಘಟನೆ ರಾಜ್ಯದ ಕಾಂಗ್ಪೋಕ್ಪಿ ಜಿಲ್ಲೆಯ ಸೈಕುಲ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಣಿಪುರ ಹಿಂಸಾಚಾರ

ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಸಾವನ್ನಪ್ಪಿದವರ ಸ್ಮರಣಾರ್ಥ ಜನರ ಗುಂಪೊಂದು ಗನ್ ಸೆಲ್ಯೂಟ್ ನೀಡಿದೆ ಎಂದು ಹೇಳಲಾಗಿದೆ ಎಂದು TNIE ವರದಿ ಮಾಡಿದೆ. ಈ ನಡುವೆ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯದವರು ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಘರ್ಷದ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ ಎಂದು ವರದಿಯಾಗಿದೆ.

ಗನ್‌ ಸೆಲ್ಯೂಟ್ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಾಯಕರು ಮತ್ತು ಹಿರಿಯರನ್ನು ಪೊಲೀಸ್ ಠಾಣೆಗೆ ಕರೆಸಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಕಾರ್ಯಕ್ರಮದ ಆಯೋಜಕರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಹೇಳಿಕೆ ತಿಳಿಸದೆ.

ಐದು ಸಿಂಗಲ್ ಬ್ಯಾರೆಲ್ ಗನ್‌ಗಳು ಮತ್ತು ಸಮವಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದು, ಆರೋಪಿಗಳನ್ನು ಬಂಧಿಸಲು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ದಾಳಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಮೈಯೇಯಿ ಮತ್ತು ಥಡೌ ಸಮುದಾಯಗಳನ್ನು ಪ್ರತಿನಿಧಿಸುವ ಐದು ಸಂಘಟನೆಗಳು ರಾಜ್ಯದಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕಾಗಿ ಸಾಮೂಹಿಕವಾಗಿ ಧ್ವನಿ ಎತ್ತಿವೆ.

ಮೈತೆಯ್ ಹೆರಿಟೇಜ್ ಸೊಸೈಟಿ, ದೆಹಲಿ ಮಣಿಪುರಿ ಸೊಸೈಟಿ, ಮತ್ತು ನಿಂಗೋಲ್ ಯುನೈಟೆಡ್ ಪ್ರೋಗ್ರೆಸ್ಸಿವ್ ಇನಿಶಿಯೇಟಿವ್ (ಮೈತೆಯ್‌ಗಳನ್ನು ಪ್ರತಿನಿಧಿಸುತ್ತದೆ) ಮತ್ತು ಥಡೌ ಇನ್ಪಿ ಮಣಿಪುರ ಮತ್ತು ಥಡೌ ವಿದ್ಯಾರ್ಥಿ ಸಂಘ – ಇತ್ತೀಚೆಗೆ ಸಭೆ ಸೇರಿ ಮಣಿಪುರದಲ್ಲಿ ಎನ್‌ಆರ್‌ಸಿ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದವು.

ಅಕ್ರಮ ವಲಸಿಗರ ಒಳಹರಿವಿನ ಸಮಸ್ಯೆಯನ್ನು ಸರ್ಕಾರ ತುರ್ತಾಗಿ ಪರಿಹರಿಸಬೇಕೆಂದು ಈ ಗುಂಪುಗಳು ಒತ್ತಾಯಿಸಿವೆ. ಅವರ ಉಪಸ್ಥಿತಿಯು ಸ್ಥಳೀಯ ಸಮುದಾಯಗಳು ಮತ್ತು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಜನಸಂಖ್ಯಾ ಸಮಗ್ರತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಸಂಪೂರ್ಣ ಎನ್‌ಆರ್‌ಸಿ ಪ್ರಕ್ರಿಯೆಯು ಮೂಲಭೂತವಾಗಿ ಬೇಕಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...