Homeಮುಖಪುಟನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಸುಪ್ರಿಂಕೋರ್ಟ್‌ಗೆ ಸಲ್ಲಿಕೆ

ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ವರದಿ ಸುಪ್ರಿಂಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಡೆದ ನಗದು ಪತ್ತೆ ಪ್ರಕರಣದ ತನಿಖೆಗಾಗಿ ಸುಪ್ರೀಂಕೋರ್ಟ್ ನೇಮಿಸಿದ್ದ ಮೂವರು ನ್ಯಾಯಮೂರ್ತಿಗಳ ತನಿಖಾ ಸಮಿತಿಯು ಮಾರ್ಚ್ 14 ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ ಎಂದು THIE ವರದಿ ಹೇಳಿದೆ. ಕೋರ್ಟ್ ಸಮಿತಿಯನ್ನು ರಚಿಸಿದ 40 ದಿನಗಳ ನಂತರ, ನಗದು ಪತ್ತೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿದ ನಂತರ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ ಎಂದು ಅದು ಹೇಳಿದೆ. ನ್ಯಾಯಮೂರ್ತಿ ನಿವಾಸದಲ್ಲಿ

ಸುಪ್ರೀಂಕೋರ್ಟ್ ಮಾರ್ಚ್ 25 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿತ್ತು.

ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹಾಲಿ ನ್ಯಾಯಮೂರ್ತಿಯಾಗಿರುವ ಯಶವಂತ್‌ ವರ್ಮಾ ವಿರುದ್ಧದ ಆರೋಪಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಮಿತಿಗೆ ನಿರ್ದೇಶನ ನೀಡಿತ್ತು. ತನಿಖೆಯ ಸಮಯದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯು ದೆಹಲಿಯ 30 ತುಘಲಕ್ ಕ್ರೆಸೆಂಟ್‌ನಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿತು ಎಂದು ವರದಿಯಾಗಿದೆ.

ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಮೂರ್ತಿ ವರ್ಮಾ ಅವರು ತೀವ್ರವಾಗಿ ನಿರಾಕರಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಕೊಠಡಿ ಮತ್ತು ನಗದು ಪತ್ತೆಯಾಗಿದೆ ಎಂದು ಹೇಳಲಾದ ಕೊಠಡಿ ಒಂದು ಔಟ್‌ಹೌಸ್ ಆಗಿದ್ದು, ನ್ಯಾಯಮೂರ್ತಿ ಮತ್ತು ಅವರ ಕುಟುಂಬ ವಾಸಿಸುವ ಮುಖ್ಯ ಕಟ್ಟಡವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

“ನಾನು ಅಥವಾ ನನ್ನ ಕುಟುಂಬದ ಯಾವುದೇ ಸದಸ್ಯರು ಆ ಸ್ಟೋರ್‌ರೂಮ್‌ನಲ್ಲಿ ಯಾವುದೇ ಹಣವನ್ನು ಇರಿಸಿಲ್ಲ ಎಂದು ನಾನು ನಿಸ್ಸಂದಿಗ್ಧವಾಗಿ ಹೇಳುತ್ತೇನೆ. ಆಪಾದಿತ ನಗದು ನಮಗೆ ಸೇರಿದೆ ಎಂಬ ಅರೋಪವನ್ನು ಬಲವಾಗಿ ಖಂಡಿಸುತ್ತೇನೆ. ಈ ಹಣವನ್ನು ನಾವು ಇಟ್ಟುಕೊಂಡಿದ್ದೇವೆ ಅಥವಾ ಸಂಗ್ರಹಿಸಿದ್ದೇವೆ ಎಂಬ ಕಲ್ಪನೆ ಅಥವಾ ಆರೋಪ ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಅಥವಾ ಔಟ್‌ಹೌಸ್‌ನಲ್ಲಿ ತೆರೆದ, ಮುಕ್ತವಾಗಿ ಪ್ರವೇಶಿಸಬಹುದಾದ ಮತ್ತು ಸಾಮಾನ್ಯವಾಗಿ ಬಳಸುವ ಸ್ಟೋರ್‌ರೂಮ್‌ನಲ್ಲಿ ಹಣವನ್ನು ಸಂಗ್ರಹಿಸಬೇಕು ಎಂಬ ಆರೋಪವು ನಂಬಲಾಗದ ಸಂಗತಿಯಾಗಿದೆ,” ಎಂದು ನ್ಯಾಯಮೂರ್ತಿ ವರ್ಮಾ ತಮ್ಮ ಉತ್ತರದಲ್ಲಿ ಹೇಳಿದ್ದಾರೆ.

ಇದಕ್ಕೂ ಮೊದಲು, ಮಾರ್ಚ್ 20 ಮತ್ತು 24, 2025 ರಂದು ನಡೆದ ಸಭೆಗಳಲ್ಲಿ, ಸುಪ್ರೀಂಕೋರ್ಟ್ ಕೊಲಿಜಿಯಂ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್‌ನಲ್ಲಿರುವ ಹೈಕೋರ್ಟ್ ಆಫ್ ಜ್ಯುಡಿಕೇಚರ್‌ಗೆ ವಾಪಸ್ ಕಳುಹಿಸಲು ಶಿಫಾರಸು ಮಾಡಿತ್ತು. ಈ ವಿಷಯದಲ್ಲಿ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ವರದಿಯನ್ನು ಸ್ವೀಕರಿಸಿದ ನಂತರ ಸಿಜೆಐ ತನಿಖಾ ಸಮಿತಿಯನ್ನು ರಚಿಸಿದ್ದರು.

ನಗದು ಪತ್ತೆಯ ಮಾಹಿತಿ ಪಡೆದ ನಂತರ, ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರ ವಿರುದ್ಧ ಆಂತರಿಕ ತನಿಖಾ ಪ್ರಕ್ರಿಯೆಯನ್ನು ಪ್ರಾರಂಭಿಸಿದರು ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಮಾರ್ಚ್ 14 ರಂದು ನ್ಯಾಯಮೂರ್ತಿಯ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಗ್ನಿಶಾಮಕ ದಳದವರು ಅದನ್ನು ನಂದಿಸಲು ಆಗಮಿಸಿದ್ದರು. ಈ ವೇಳೆ ಅವರ ನಿವಾಸದಲ್ಲಿ ನಗರದು ಪತ್ತೆಯಾಗಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಾರ್ಚ್ 14 ರಂದು ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದವರಿಗೆ ಈ ನಗದು ಕಂಡು ಬಂದಿತ್ತು ಎಂದು ಅದು ಹೇಳಿದೆ. ಬೆಂಕಿ ಅವಘಡ ಸಂಭವಿಸಿದಾಗ ನ್ಯಾಯಮೂರ್ತಿ ಅವರ ನಿವಾಸದಲ್ಲಿ ಇರಲಿಲ್ಲ ಎಂದು ವರದಿಯಾಗಿದೆ. ನ್ಯಾಯಮೂರ್ತಿ ನಿವಾಸದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...