Homeಮುಖಪುಟಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

ಸೋನು ನಿಗಮ್‌ಗೆ ಅಸಹಕಾರ ತೋರಲು ಕನ್ನಡ ಚಿತ್ರರಂಗ ನಿರ್ಧಾರ: ಪೊಲೀಸರಿಂದ ನೋಟಿಸ್

- Advertisement -
- Advertisement -

ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ಗೆ ಅಸಹಕಾರ ತೋರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ನಿರ್ಧರಿಸಿದೆ.

ಸೋನು ನಿಗಮ್‌ ಅವರನ್ನು ಕನ್ನಡ ಚಿತ್ರಗಳಲ್ಲಿ ಹಾಡಿಸುವುದಕ್ಕೆ ನಿರ್ಬಂಧ ವಿಧಿಸಬೇಕು. ಅವರು ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನೀಡದಂತೆ ತಡೆಯಬೇಕು ಮತ್ತು ಅವರ ವಿರುದ್ದ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿತ್ತು.

ಕನ್ನಡ ಜನತೆಯಿಂದಲೂ ಸೋನು ನಿಗಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಇಂದು ಸಭೆ ನಡೆಸಿದ ಕೆಎಫ್‌ಸಿಸಿ ಪದಾಧಿಕಾರಿಗಳು, ಸೋನು ನಿಗಮ್‌ಗೆ ಕನ್ನಡ ಚಿತ್ರಗಳಲ್ಲಿ ಹಾಡುವುದಕ್ಕೆ ಮತ್ತು ಕರ್ನಾಟಕದಲ್ಲಿ ಕಾರ್ಯಕ್ರಮ ನೀಡುವುದಕ್ಕೆ ಒಂದು ರೀತಿಯ ನಿರ್ಬಂಧ ವಿಧಿಸಿದ್ದಾರೆ.

“ಯಾರೂ ಸೋನು ನಿಗಮ್‌ ಅವರನ್ನು ಹಾಡಿಸಲು ಕರೆಯಬಾರದು, ಮ್ಯೂಸಿಕಲ್‌ ನೈಟ್‌ ಸೇರಿದಂತೆ ಅವರ ಜೊತೆಗೆ ಯಾವುದೇ ಚಟುವಟಿಕೆ ಮಾಡಕೂಡದು” ಎಂದು ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು ಎಂ. ತಿಳಿಸಿದ್ದಾರೆ.

ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ ಹೀಗೆ ಕೆಎಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ನರಸಿಂಹಲು ಪ್ರಕಟಿಸಿದ್ದಾರೆ.

“ಸೋನು ನಿಗಮ್‌ ವಿಡಿಯೋದಲ್ಲಿ ಕ್ಷಮೆ ಕೇಳಬಹುದು ಎಂದುಕೊಂಡಿದ್ದೆವು. ಆದರೆ ಅವರು ಕ್ಷಮಾಪಣೆ ಕೇಳಲಿಲ್ಲ. ಹಾಗಾಗಿ, ಕನ್ನಡ ಪರ ಸಂಘಟನೆಗಳು, ಸಂಗೀತ ನಿರ್ದೇಶಕರು, ನಿರ್ಮಾಪಕರು, ನಿರ್ದೇಶಕರ ಸಂಘ, ಹೀಗೆ ಕೆಫ್‌ಸಿಸಿಯ ಅಂಗ ಸಂಸ್ಥೆಗಳ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕ್ಷಣದಿಂದಲೇ ಅಸಹಕಾರ ತೋರಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ನರಸಿಂಹಲು ತಿಳಿಸಿದ್ದಾರೆ.

“ಚಿತ್ರರಂಗದಲ್ಲಿ ಕಲಾವಿದರನ್ನು ನಿಷೇಧ ಮಾಡುವಂತಿಲ್ಲ. ಆದರೆ, ಸ್ವಯಂ ಪ್ರೇರಣೆಯಿಂದ ನಿರ್ಮಾಪಕರು, ಸಂಗೀತ ನಿರ್ದೇಶಕರು ಗಾಯಕರನ್ನು ದೂರ ಇಡಬಹುದು. ಕಲಾವಿದರಾಗಲಿ, ಗಾಯಕರನ್ನಾಗಲಿ ಅಧಿಕೃತವಾಗಿ ನಿಷೇಧ ಮಾಡುವ ಅಧಿಕಾರ ವಾಣಿಜ್ಯ ಮಂಡಳಿಗೆ ಇರುವುದಿಲ್ಲ. ಗಾಯಕನನ್ನು ಕೆಲವು ವರ್ಷ ದೂರವಿಟ್ಟು, ಯಾರೂ ಅವಕಾಶ ಕೊಡದೆ ಬುದ್ಧಿ ಕಳುಹಿಸಬಹುದು” ಎಂದು ನರಸಿಂಹಲು ಹೇಳಿದ್ದಾರೆ.

ಪೊಲೀಸರಿಂದ ನೋಟಿಸ್

ಸೋನು ನಿಗಮ್ ಹೇಳಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಸೋನು ನಿಗಮ್‌ಗೆ ರಿಜಿಸ್ಟರ್ ಪೋಸ್ಟ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರಿಗೂ ನೋಟಿಸ್ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ವರದಿಯಾಗಿದೆ.

ಮತ್ತೊಂದು ದೂರು

ಕರವೇ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಸೋನು ನಿಗಮ್ ಬಂಧನಕ್ಕೆ ಆಗ್ರಹ

ಸೋನು ನಿಗಮ್ ಕನ್ನಡ, ಕನ್ನಡಿಗರನ್ನು ಅವಮಾನಿಸಿದ್ದಾರೆ. ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಈ ಮೂಲಕ ಕನ್ನಡಿಗರ ಶಕ್ತಿ ಅವರಿಗೆ ಗೊತ್ತಾಗಬೇಕು. ಇನ್ನುಮುಂದೆ ಕನ್ನಡಗರನ್ನು ಅವಮಾನಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಹೇಳಿದ್ದಾರೆ.

ಸೋನು ನಿಗಮ್ ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...