Homeಮುಖಪುಟರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

ರಾಹುಲ್ ಗಾಂಧಿಯ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಅಲಹಾಬಾದ್ ಹೈಕೋರ್ಟ್‌

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಸೋಮವಾರ (ಮೇ.5) ವಿಲೇವಾರಿ ಮಾಡಿದೆ.

ಕರ್ನಾಟಕ ಮೂಲದ ವಕೀಲ ಹಾಗೂ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್‌ ಮಸೂದಿ ಮತ್ತು ರಾಜೀವ್ ಸಿಂಗ್ ಅವರ ಪೀಠ, “ಈ ವಿಷಯವು ಎರಡು ದೇಶಗಳ ನಡುವಿನ ಸಂವಹನವಾಗಿದ್ದು, ಭಾರತ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು”ಎಂದು ನಿರ್ದೇಶಿಸಿದೆ.

ಅರ್ಜಿದಾರರ ದೂರನ್ನು ಪರಿಹರಿಸಲು ಕೇಂದ್ರ ಸರ್ಕಾರವು ಯಾವುದೇ ಕಾಲಮಿತಿಯನ್ನು ನೀಡಲು ಸಾಧ್ಯವಾಗದ ಕಾರಣ, ಅರ್ಜಿಯನ್ನು ಬಾಕಿ ಇಡಲು ಆಗುವುದಿಲ್ಲ. ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಅರ್ಜಿದಾರರು ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು. ರಾಹುಲ್ ಗಾಂಧಿಯ ಭಾರತೀಯ ಪೌರತ್ವವವನ್ನು ನಿರ್ಧರಿಸುವ ಹೊಣೆಗಾರಿಗೆ ಭಾರತ ಸರ್ಕಾರದ ಮೇಲಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆಗೆ ಒಳಪಡುತ್ತದೆ ಎಂದು ಪೀಠ ಹೇಳಿದೆ.

ರಾಹುಲ್ ಗಾಂಧಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ (ಯುಕೆ) ದ್ವಿಪೌರತ್ವವನ್ನು ಹೊಂದಿದ್ದು, ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಅನರ್ಹರು ಎಂದು ಅರ್ಜಿದಾರ ವಿಘ್ನೇಶ್ ಶಿಶಿರ್ ಹೇಳಿದ್ದರು.

ಏಪ್ರಿಲ್ 21ರಂದು ನಡೆದ ಅರ್ಜಿ ವಿಚಾರಣೆ ವೇಳೆ, ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬ ಆರೋಪದ ಬಗ್ಗೆ ವಿವರಗಳನ್ನು ಕೋರಿ ಯುಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ತಿಳಿಸಿತ್ತು. ಅಲ್ಲಿನ ಸರ್ಕಾರದಿಂದ ಮಾಹಿತಿ ಪಡೆಯಲು ಕೇಂದ್ರ ಸರ್ಕಾರ ಹೆಚ್ಚುವರಿ ಸಮಯ ಕೋರಿದ ಹಿನ್ನೆಲೆ, ನ್ಯಾಯಾಲಯವ ಗೃಹ ಸಚಿವಾಲಯಕ್ಕೆ ಮೇ 5ರವರೆಗೆ ಕಾಲಾವಕಾಶ ನೀಡಿತ್ತು.

ರಾಹುಲ್ ಗಾಂಧಿಯವರ ದ್ವಿಪೌರತ್ವದ ಬಗ್ಗೆ ಸಕ್ಷಮ ಪ್ರಾಧಿಕಾರಕ್ಕೆ ಎರಡು ಬಾರಿ ದೂರುಗಳನ್ನು ನೀಡಿದ್ದರೂ, ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

ಸುಬ್ರಮಣಿಯನ್ ಸ್ವಾಮಿ ದೂರು

2019ರಲ್ಲಿ, ಆಗಿನ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಮೇರೆಗೆ ಗೃಹ ಸಚಿವಾಲಯ ರಾಹುಲ್ ಗಾಂಧಿ ಅವರ ಪೌರತ್ವಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತ್ತು.

2003ರಲ್ಲಿ ಯುನೈಟೆಡ್ ಕಿಂಗ್‌ಡಂನಲ್ಲಿ ಬ್ಯಾಕಾಪ್ಸ್ ಲಿಮಿಟೆಡ್ ಎಂಬ ಕಂಪನಿಯನ್ನು ನೋಂದಾಯಿಸಲಾಗಿದ್ದು, ರಾಹುಲ್ ಗಾಂಧಿಯನ್ನು ಆ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿ ಪಟ್ಟಿ ಮಾಡಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದರು.

ಕಂಪನಿಯ ಅಧಿಕೃತ ದಾಖಲೆಗಳಲ್ಲಿ ರಾಹುಲ್ ಗಾಂಧಿ ತನ್ನ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು.

ಗೃಹ ಸಚಿವಾಲಯದ ನೋಟಿಸ್‌ನಲ್ಲಿ, “ಅಕ್ಟೋಬರ್ 10, 2005ಮತ್ತು ಅಕ್ಟೋಬರ್ 31, 2006ರಂದು ಸಲ್ಲಿಸಲಾದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ, ನಿಮ್ಮ ಜನ್ಮ ದಿನಾಂಕವನ್ನು ಜೂನ್ 19, 1970 ಮತ್ತು ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿಕೊಂಡಿದ್ದೀರಿ. ಫೆಬ್ರವರಿ 17, 2009ರಂದು ಕಂಪನಿಯ ವಿಸರ್ಜನೆ ಅರ್ಜಿಯಲ್ಲಿಯೂ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಉಲ್ಲೇಖಿಸಿದ್ದೀರಿ” ಎಂದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಹುಲ್ ಗಾಂಧಿಯನ್ನು ಕೇಳಿತ್ತು.

ಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ

ರಾಹುಲ್ ಗಾಂಧಿಯ ಭಾರತೀಯ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ.

ಸಾಕ್ಷ್ಯಾಧಾರವಿಲ್ಲದೆ ಆರೋಪ: ಇಡಿಗೆ ಸುಪ್ರೀಂ ಕೋರ್ಟ್ ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....