ಮಂಗಳೂರಿನಲ್ಲಿ ಇತ್ತಿಚೆಗೆ ಹತ್ಯೆಯಾದ ರೌಡಿ ಸುಹಾಸ್ ಶೆಟ್ಟಿಯನ್ನು ರೌಡಿಯನ್ನಾಗಿ ಪಟ್ಟಿ ಮಾಡಿದ್ದ ಪೊಲೀಸ್ ಆದೇಶದ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಬಿಡುಗಡೆ ಮಾಡಿದ್ದಾರೆ. ರೌಡಿ ಸುಹಾಸ್‌ನನ್ನು ಇಂದು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ. ಸುಹಾಸ್ ಶೆಟ್ಟಿಯ
ಈ ಬಗ್ಗೆ ಎಕ್ಸ್‌ನಲ್ಲಿ ಅದೇಶ ಪತ್ರವನ್ನು ಪೋಸ್ಟ್ ಮಾಡಿರುವ ಗುಂಡೂರಾವ್ ಅವರು,”ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.” ಎಂದು ಅವರು ಹೇಳಿದ್ದಾರೆ.
“ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.
“ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.” ಎಂದು ಅವರು ಹೇಳಿದ್ದಾರೆ.
ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು @BJP4India… pic.twitter.com/mIc4GVEEcD
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 6, 2025
“ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?” ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.
“ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.
“ದಕ್ಷಿಣ ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ.” ಎಂದು ಅವರು ಎಚ್ಚರಿಸಿದ್ದಾರೆ. ಸುಹಾಸ್ ಶೆಟ್ಟಿಯ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು
ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

