Homeಮುಖಪುಟಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಿಪಿಐ(ಎಂ) ಶಾಸಕ ಎ. ರಾಜಾ ಅನರ್ಹ ಪ್ರಕರಣ: ಕೇರಳ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದ ಸಿಪಿಐ(ಎಂ) ಶಾಸಕ ಎ. ರಾಜಾ ಅವರ ಆಯ್ಕೆಯನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಬದಿಗೆ ಸರಿಸಿದೆ.

ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಮಾರ್ಚ್ 23, 2023ರ ಕೇರಳ ಹೈಕೋರ್ಟ್ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ಹೈಕೋರ್ಟ್ ತೀರ್ಪು ಮಾತ್ರವಲ್ಲದೆ ಚುನಾವಣಾ ತಕರಾರು ಅರ್ಜಿಯನ್ನೂ ರದ್ದುಗೊಳಿಸಲಾಗಿದೆ. ಮೇಲ್ಮನವಿದಾರ (ಎ.ರಾಜಾ) ಪೂರ್ಣ ಅವಧಿಗೆ ಶಾಸನ ಸಭೆಯ ಸದಸ್ಯರಾಗಿ ಇರಲಿದ್ದು, ಅರ್ಹ ಸೌಲಭ್ಯಗಳನ್ನೆಲ್ಲ ಪಡೆಯಲಿದ್ದಾರೆ” ಎಂಬುವುದಾಗಿ ಸುಪ್ರೀಂ ಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ರಾಜಾ ಅವರ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

2021ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವಿರುದ್ದ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಡಿ.ಕುಮಾರ್ ಅವರು ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ರಾಜಾ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅರ್ಹರಲ್ಲ ಎಂದು ವಾದಿಸಿದ್ದರು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ರಾಜಾ ಮತ್ತು ಡಿ. ಕುಮಾರ್ ಪರ ಕ್ರಮವಾಗಿ ಹಿರಿಯ ವಕೀಲರಾದ ವಿ ಗಿರಿ ಮತ್ತು ನರೇಂದರ್ ಹೂಡಾ ಅವರ ವಾದಗಳನ್ನು ಆಲಿಸಿದೆ.

ಕೇರಳ ಹೈಕೋರ್ಟ್‌ನ ಮಾರ್ಚ್ 20,2023ರ ಆದೇಶದ ವಿರುದ್ಧ ರಾಜಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಡಿ.ಕುಮಾರ್ ಅವರ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದ ರಾಜಾ ಅವರು, ತಾನು ಹಿಂದೂ ಧರ್ಮದ ಪಾರಾಯಣ ಸಮುದಾಯಕ್ಕೆ ಸೇರಿದವನು ಎಂದು ವಾದಿಸಿದ್ದರು. ಅದಕ್ಕೆ ದಾಖಲೆಯಾಗಿ ದೇವಿಕುಲಂ ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದರು.

ತಾನು ಸಲ್ಲಿಸಿದ್ದ ನಾಮಪತ್ರಕ್ಕೆ ಕುಮಾರ್ ಸಲ್ಲಿಸಿದ ಆಕ್ಷೇಪಣೆಯನ್ನು ಚುನಾವಣಾಧಿಕಾರಿ ಕ್ರಮ ಬದ್ದವಾಗಿಯೇ ತಿರಸ್ಕರಿಸಿದ್ದಾರೆ ಎಂದಿದ್ದರು.

ತಾನು, ತನ್ನ ಹೆತ್ತವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ. ತಾನು ದೀಕ್ಷಾ ಸ್ನಾನವನ್ನೂ ಪಡೆದಿಲ್ಲ. ತನ್ನ ಪತ್ನಿಯೂ ಹಿಂದೂವಾಗಿದ್ದು, ನಮ್ಮ ವಿವಾಹವು ಸಾಂಪ್ರದಾಯಿಕ ದೀಪ ಬೆಳಗುವುದು ಮತ್ತು ಪತ್ನಿಯ ಕತ್ತಿಗೆ ತಾಳಿ ಕಟ್ಟುವುದು ಸೇರಿದಂತೆ ಹಿಂದೂ ವಿಧಿವಿಧಾನಗಳ ಪ್ರಕಾರ ನಡೆದಿದೆ ಎಂದು ರಾಜಾ ಹೇಳಿದ್ದರು.

ರಾಜಾ ಒಬ್ಬ ಕ್ರಿಶ್ಚಿಯನ್. ಇಡುಕ್ಕಿ ಜಿಲ್ಲೆಯ ಸಿಎಸ್ಐ ಚರ್ಚ್‌ನಲ್ಲಿ ಅವರು ದೀಕ್ಷಾಸ್ನಾನ ಪಡೆದಿದ್ದಾರೆ. ಅವರು ಎಸ್‌ಸಿ ಸಮುದಾಯಕ್ಕೆ ಸೇರಿದವರು ಎಂದು ಸಾಬೀತುಪಡಿಸಲು ನಕಲಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಕುಮಾರ್ ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.ಪಿ

2021ರ ಚುನಾವಣೆಯಲ್ಲಿ 7,848 ಮತಗಳ ಅಂತರದಿಂದ ರಾಜಾ ವಿರುದ್ದ ಸೋತಿದ್ದ ಕುಮಾರ್, ರಾಜಾ ಅವರ ಪತ್ನಿ ಕೂಡ ಕ್ರಿಶ್ಚಿಯನ್. ಅವರು ಕ್ರಿಶ್ಚಿಯನ್ ಧಾರ್ಮಿಕ ವಿಧಿಗಳಿಗೆ ಅನುಗುಣವಾಗಿ ಮದುವೆಯಾಗಿದ್ದಾರೆ ಎಂದು ಹೇಳಿಕೊಂಡಿದ್ದರು.

ಕುಮಾರ್ ಅವರ ಆರೋಪವನ್ನು ಪುರಸ್ಕರಿಸಿದ್ದ ಕೇರಳ ಹೈಕೋರ್ಟ್, ರಾಜಾ ಅವರು ತನ್ನ ಮದುವೆಯ ಕುರಿತ ಮಾಹಿತಿಯನ್ನು ಮುಚ್ಚಿಡಲು ಉದ್ದೇಶಪೂರ್ವಕ ಪ್ರಯತ್ನ ಮಾಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿತ್ತು.

ರಾಜಾ ಮತ್ತು ಅವರ ಪತ್ನಿ ಮದುವೆಯ ವೇಳೆ ಧರಿಸಿದ್ದ ವಸ್ತ್ರ ಕ್ರಿಶ್ಚಿಯನ್ ವಿವಾಹದ ಸಂಕೇತವಾಗಿದೆ ಎಂದಿತ್ತು.

ರಾಜಾ ಅವರು ನಾಮಪತ್ರ ಸಲ್ಲಿಸುವ ಮೊದಲೇ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ನಾಮಪತ್ರ ಸಲ್ಲಿಕೆಗೆ ಬಹಳ ಹಿಂದೆಯೇ ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದರು ಎಂಬುದು ಅವರು ಸಲ್ಲಿಸಿರುವ ಕೆಲವು ದಾಖಲೆಗಳು ತೋರಿಸುತ್ತವೆ ಎಂದು ಹೈಕೋರ್ಟ್ ಹೇಳಿತ್ತು.

ಮತಾಂತರದ ನಂತರ, ಅವರು ಹಿಂದೂ ಧರ್ಮೀಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಆ ದೃಷ್ಟಿಯಿಂದಲೂ, ಚುನಾವಣಾಧಿಕಾರಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕಿತ್ತು ಎಂದಿತ್ತು.

ಕೇರಳದಲ್ಲಿ ಹಿಂದೂ ಪಾರಾಯಣರನ್ನು ಎಸ್‌ಸಿ ಸಮುದಾಯ ಎಂದು ಘೋಷಿಸಿ 1950 ರಲ್ಲಿ ರಾಷ್ಟ್ರಪತಿಗಳು ಆದೇಶ ಹೊರಡಿಸುವ ಮೊದಲು, ತನ್ನ ಪೂರ್ವಜರು (ಅಜ್ಜ-ಅಜ್ಜಿ) ಕೇರಳಕ್ಕೆ ವಲಸೆ ಹೋಗಿದ್ದರು ಎಂಬುವುದನ್ನು ಸಾಭೀತುಪಡಿಸುವಲ್ಲಿ ರಾಜಾ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೈಕೋರ್ಟ್‌ ತಿಳಿಸಿತ್ತು.

“ಸಂಕ್ಷಿಪ್ತವಾಗಿ ಹೇಳುವುದಾದರೆ, ಎರಡೂ ಆಧಾರದ ಮೇಲೆ, ರಾಜಾ ಅವರು ಕೇರಳ ರಾಜ್ಯದೊಳಗಿನ ‘ಹಿಂದೂ ಪಾರಾಯಣ’ದ ಸಮುದಾಯದ ಸದಸ್ಯರಲ್ಲ ಮತ್ತು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ದೇವಿಕುಲಂ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಅರ್ಹತೆ ಹೊಂದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿತ್ತು.

ಆದ್ದರಿಂದ, 2021ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾ ಅವರ ಆಯ್ಕೆಯು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 98 ರ ಅಡಿಯಲ್ಲಿ ಅನೂರ್ಜಿತವಾಗಿದೆ ಎಂದು ಹೈಕೋರ್ಟ್ ಘೋಷಿಸಿತ್ತು. ಅಲ್ಲದೆ, ಕುಮಾರ್ ಅವರನ್ನು ಶಾಸಕ ಎಂದು ಘೋಷಿಸಲು ಸಾಧ್ಯವಿಲ್ಲ ಎಂದಿತ್ತು.

ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗಪಡಿಸಿದ ಸುಪ್ರೀಂ ಕೋರ್ಟ್‌; ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...