Homeಮುಖಪುಟತೆಲಂಗಾಣ| ಅನುತ್ತೀರ್ಣದ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ನೀಟ್ ಅಭ್ಯರ್ಥಿಗಳು

ತೆಲಂಗಾಣ| ಅನುತ್ತೀರ್ಣದ ಭೀತಿಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ನೀಟ್ ಅಭ್ಯರ್ಥಿಗಳು

- Advertisement -
- Advertisement -

ಇತ್ತೀಚೆಗೆ ಮುಕ್ತಾಯಗೊಂಡ ನೀಟ್ ಪರೀಕ್ಷೆಗಳಲ್ಲಿ ಅರ್ಹ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಇಬ್ಬರು ಅಭ್ಯರ್ಥಿಗಳು ಮೇ 4 ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

ಜಗ್ತಿಯಾಲ್ ಹಾಗೂ ಆದಿಲಾಬಾದ್ ಜಿಲ್ಲೆಗಳ ಜಂಗಾ ಪೂಜಾ ಮತ್ತು ರಾಯ್ ಮನೋಜ್ ಕುಮಾರ್ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂಜಾ ಅವರಿಗೆ ಇದು ಅವರ ಎರಡನೇ ಪ್ರಯತ್ನವಾಗಿತ್ತು. ಅವರು 2023 ರಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಉತ್ತಮ ಫಲಿತಾಂಶಗಳನ್ನು ಪಡೆಯಲಿಲ್ಲ. ಆಜೆಯ ಸಹೋದರನ ಪ್ರಕಾರ, ಅವರು ಈ ವರ್ಷ ತುಂಬಾ ಶ್ರಮಪಟ್ಟಿದ್ದರು. ತಮ್ಮ ಸಿದ್ಧತೆಯನ್ನು ಸುಧಾರಿಸಲು ಕೋಚಿಂಗ್ ಸೆಂಟರ್ ಅನ್ನು ಸಹ ಸೇರಿಕೊಂಡಿದ್ದರು.

ಆದರೂ, ಪರೀಕ್ಷಾ ಕೇಂದ್ರದಿಂದ ಮನೆಗೆ ಹಿಂದಿರುಗಿದ ನಂತರ ಅವರು ತಮ್ಮ ಉತ್ತರಗಳನ್ನು ಅಡ್ಡಪರಿಶೀಲಿಸಿದಾಗ, ಪೂಜಾ ಮತ್ತೆ ಅನುತ್ತೀರ್ಣರಾಗಬಹುದು ಎಂದು ಭಾವಿಸಿದ್ದು, ಆತಂಕ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿಕ್ಷಕಿಯೊಬ್ಬರ ಮಗನಾದ ಮತ್ತೊಬ್ಬ ನೀಟ್ ಅಭ್ಯರ್ಥಿ ರಾಯ್ ಮನೋಜ್ ಕುಮಾರ್, ಪರೀಕ್ಷೆಗೆ ಹಾಜರಾದ ಒಂದು ದಿನದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಮಾರ್ ಕೂಡ ಕಷ್ಟಪಟ್ಟು ಹೈದರಾಬಾದ್‌ನಲ್ಲಿ ಕೋಚಿಂಗ್ ತರಗತಿಗೆ ಸೇರಿಕೊಂಡಿದ್ದ.

ಪದವಿಪೂರ್ವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) 2025 ರ ಪದವಿಪೂರ್ವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಅನ್ನು ನಡೆಸುತ್ತದೆ. ಭಾನುವಾರ ನಡೆದ ಪರೀಕ್ಷೆಗೆ ದೇಶಾದ್ಯಂತ 500 ಕ್ಕೂ ಹೆಚ್ಚು ನಗರಗಳ 5,453 ಕೇಂದ್ರಗಳಲ್ಲಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...