Homeಮುಖಪುಟಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

- Advertisement -
- Advertisement -

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು.

ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ ಪತ್ನಿ ಹಿಮಾಂಶಿ, ತಂದೆ ರಾಜೇಶ್ ಕುಮಾರ್, ತಾಯಿ ಆಶಾ ದೇವಿ, ಸಹೋದರಿ ಸೃಷ್ಟಿ ಮತ್ತು ಅಜ್ಜ ಹವಾ ಸಿಂಗ್ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ರಾಹುಲ್ ಗಾಂಧಿ ಭೇಟಿ ನೀಡಿದ ವೇಳೆ ಲೆಫ್ಟಿನೆಂಟ್ ನರ್ವಾಲ್ ಅವರ ಮನೆಯಲ್ಲಿ ಕಾಂಗ್ರೆಸ್‌ನ ರೋಹ್ತಕ್ ಸಂಸದ ದೀಪೇಂದರ್ ಹೂಡಾ ಮತ್ತು ಹರಿಯಾಣ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಉದಯ್ ಭನ್ ಹಾಜರಿದ್ದರು. ಮನೆಯ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಮತ್ತು ವರದಿಗಾರರು ಜಮಾಯಿಸಿದ್ದರು, ಆದರೆ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಹೂಡಾ, “ರಾಹುಲ್ ಜಿ ನಮ್ಮ ಪ್ರೀತಿಯ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅವರು ಏನು ಹೇಳಿದರು ಎಂಬುದನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವುದಿಲ್ಲ. ನಾವು ಒಬ್ಬ ಮಗನನ್ನು, ನಮ್ಮ ರಾಷ್ಟ್ರದ ವೀರ ಸೈನಿಕನನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಹೇಳಿದ್ದಾರೆ.

ಹರಿಯಾಣದ ಬಿಜೆಪಿ ಸರ್ಕಾರ ಮೃತ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಅವರ ಸಂಪುಟ ಸಹೋದ್ಯೋಗಿಗಳು ಮತ್ತು ಹಲವಾರು ಹಿರಿಯ ಬಿಜೆಪಿ ನಾಯಕರು ನರ್ವಾಲ್ ಅವರ ಹುಟ್ಟೂರು ಕರ್ನಾಲ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕೇವಲ ಏಳು ದಿನಗಳ ಮೊದಲು ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿ ಅವರು ಮದುವೆಯಾಗಿದ್ದರು. ಏಪ್ರಿಲ್ 21ರಂದು ಹನಿಮೂನ್‌ಗಾಗಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಏಪ್ರಿಲ್ 22ರಂದು ನಡೆದ ದಾಳಿಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ಮೊದಲ ಕ್ಲಿಪ್ ಹಿಮಾಂಶಿ ಅವರದ್ದಾಗಿತ್ತು. ಅದರಲ್ಲಿ ಅವರು “ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸುವ ಮೊದಲು ಅವರ ಧರ್ಮದ ಬಗ್ಗೆ ಕೇಳಿದ್ದಾರೆ” ಎಂದು ಹೇಳಿದ್ದರು.

ಅವರ ಈ ಹೇಳಿಕೆಯನ್ನು ಮುಂದಿಟ್ಟಕೊಂಡು ಹಲವು ಮಾಧ್ಯಮಗಳು ದೇಶದ ಮುಸ್ಲಿಮರು, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರ ವಿರುದ್ಧ ದ್ವೇಷ ಹರಡುವ, ಮುಸ್ಲಿಮರನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡಿತು.

ಆದರೆ, ಮೇ 1ರಂದು ಮೃತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಹರಿಯಾಣದ ಕರ್ನಾಲ್‌ನಲ್ಲಿ ಅಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದ್ದ ಪತ್ನಿ ಹಿಮಾಂಶಿ, “ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದಿದ್ದರು.

ಹಿಮಾಂಶಿ ಅವರು ದೇಶದ ಸಾಮರಸ್ಯದ ಪರ ನೀಡಿದ ಈ ಹೇಳಿಕೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಹಿಮಾಂಶಿ ಅವರ ವೈಯುಕ್ತ ವಿಚಾರಗಳನ್ನು ಎಳೆದು ತಂದು ಅವರನ್ನು ತೇಜೋವಧೆ ಮಾಡಲಾಗುತ್ತಿದೆ.

ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರು ಸಾವಿಗೂ ಮುನ್ನ ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. ಏಪ್ರಿಲ್ 19ರಂದು ಮಸ್ಸೂರಿಯಲ್ಲಿ ಅವರ ಮದುವೆ ನಡೆದಿತ್ತು ಈ ಹಿನ್ನೆಲೆ ಅವರು ಮಾರ್ಚ್ 28ರಿಂದ ರಜೆಯ ಮೇಲೆ ಮನೆಗೆ ತೆರಳಿದ್ದರು. ಏಪ್ರಿಲ್ 20ರಂದು, ಕರ್ನಾಲ್‌ನಲ್ಲಿ ಮದುವೆಯ ಆರತಕ್ಷತೆ ಬಳಿಕ, ನವ ದಂಪತಿ ಗುರುಗಾಂವ್‌ನ ಹಿಮಾಂಶಿ ಅವರ ಮನೆಗೆ ಹೋಗಿದ್ದರು. ಅಲ್ಲಿಂದ ಏಪ್ರಿಲ್ 21ರಂದು ಶ್ರೀನಗರಕ್ಕೆ ವಿಮಾನ ಹತ್ತಿದ್ದರು.

ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...