Homeಮುಖಪುಟಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

- Advertisement -
- Advertisement -

ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ, ಇಬ್ಬರು ಮಹಿಳಾ ಅಧಿಕಾರಿಗಳು ಪ್ರಮುಖ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಧಿಕೃತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜೊತೆಗೆ ಆಪರೇಷನ್ ಸಿಂಧೂರ ಬಗ್ಗೆಗಿನ ಮಾಹಿತಿ ನೀಡುವ ಪತ್ರಿಕಾಗೋಷ್ಠಿಯಲ್ಲಿ ಮಹತ್ವದ ಪಾತ್ರ ವಹಿಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ತೀವ್ರವಾದ ಪ್ರತಿಕ್ರಿಯೆಯನ್ನು ನೀಡಿದೆ. ಮೇ 7 ರ ಮುಂಜಾನೆ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರ(PoJK)ದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಅನೇಕ ದಾಳಿಗಳನ್ನು ನಡೆಸಿದೆ. ಪಹಲ್ಗಾಮ್‌ನಲ್ಲಿ ಕೊಲ್ಲಲ್ಪಟ್ಟವರ ಪತ್ನಿಯರು ಮತ್ತು ಕುಟುಂಬಗಳ ಸ್ಮರಣಾರ್ಥ ಈ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ ಎಂದು ವರದಿಯಾಗಿದೆ.

ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಬಗ್ಗೆಗಿನ ಪ್ರಮುಖ ಮಾಹಿತಿ ಇಲ್ಲಿವೆ:

ಕರ್ನಲ್ ಸೋಫಿಯಾ ಖುರೇಷಿ

ಕರ್ನಲ್ ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನ ವಡೋದರಾದವರು. ಸೇನಾ ಹಿನ್ನಲೆಯ ಕುಟುಂಬದಿಂದ ಬಂದಿರುವ ಖುರೇಷಿ ಅವರ ತಾತ ಭಾರತೀಯ ಸೇನೆಯಲ್ಲಿ ಸೈನಿಕರಾಗಿದ್ದರು. ಅವರ ತಂದರೆ ಕೂಡಾ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಕೆಲಸ ಮಾಡಿದ್ದರು.

ಜೈವಿಕ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಸೋಫಿಯಾ ಖುರೇಷಿ ಅವರು 1999ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯ ಮೂಲಕ ನಿಯೋಜಿತರಾಗಿ, ಭಾರತೀಯ ಸೇನೆಯ ಪ್ರಮುಖ ಶಾಖೆಯಾದ ಕಾರ್ಪ್ಸ್ ಆಫ್ ಸಿಗ್ನಲ್ಸ್‌ಗೆ ಸೇರಿದರು.

2016 ರಲ್ಲಿ, ಕರ್ನಲ್ ಖುರೇಷಿ ಅವರು ‘ಎಕ್ಸರ್ಸೈಸ್ ಫೋರ್ಸ್ 18’ ಎಂಬ ಬಹುರಾಷ್ಟ್ರೀಯ ಮಿಲಿಟರಿ ಸಮರಾಭ್ಯಾಸದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಲಿಕೆಗೆ ಪಾತ್ರರಾದರು. ಮಾರ್ಚ್ 2 ರಿಂದ ಮಾರ್ಚ್ 8, 2016 ರವರೆಗೆ ಪುಣೆಯಲ್ಲಿ ನಡೆದ ಈ ಸಮರಾಭ್ಯಾಸದಲ್ಲಿ ಚೀನಾ, ಅಮೆರಿಕ, ರಷ್ಯಾ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ದೇಶಗಳು ಸೇರಿದಂತೆ 18 ಆಸಿಯಾನ್ ದೇಶಗಳು ಭಾಗವಹಿಸಿದ್ದವು.

ಅವರು ಶಾಂತಿಪಾಲನಾ ಕಾರ್ಯಾಚರಣೆಗಳು (ಪಿಕೆಒಗಳು) ಮತ್ತು ಮಾನವೀಯ ಗಣಿ ಕ್ರಿಯೆ (ಎಚ್‌ಎಂಎ)ಯಲ್ಲಿ ತರಬೇತಿಯ ಮೇಲೆ ಕೇಂದ್ರೀಕರಿಸಿದ 40 ಸದಸ್ಯರ ಭಾರತೀಯ ತುಕಡಿಯನ್ನು ಮುನ್ನಡೆಸಿದರು. ಆ ಸಮಯದಲ್ಲಿ ಅವರು 35 ವರ್ಷ ವಯಸ್ಸಿನವರಾಗಿದ್ದು, ಭಾಗವಹಿಸುವ ಎಲ್ಲಾ ರಾಷ್ಟ್ರಗಳ ಪೈಕಿ ಏಕೈಕ ಮಹಿಳಾ ಕಮಾಂಡರ್ ಆಗಿದ್ದರು.

ಕರ್ನಲ್ ಖುರೇಷಿ ವಿಶೇಷವಾಗಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ಕೂಡಾ ಮಹತ್ವದ ಪಾತ್ರ ವಹಿಸಿದ್ದಾರೆ. 2006 ರಲ್ಲಿ ಅವರು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ (DRC) ಮಿಲಿಟರಿ ವೀಕ್ಷಕರಾಗಿ ಹಾರ್ಡ್ ಫೀಲ್ಡ್ ಪೋಸ್ಟಿಂಗ್‌ಗಾಗಿ ಸೇರ್ಪಡೆಗೊಂಡ ಎರಡನೇ ಬ್ಯಾಚ್ ಮಹಿಳಾ ಅಧಿಕಾರಿಗಳ ಭಾಗವಾಗಿದ್ದರು. DRC ಯಲ್ಲಿ 2006 ರ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಅವರು ಚುನಾವಣೆ ಮತ್ತು ಜೆಂಡರ್‌ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಸ್ಥಳಾಂತರಗೊಂಡ ಮಕ್ಕಳನ್ನು ಮತ್ತೆ ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2010 ರಿಂದ, ಅವರು ನವದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳ ಕೇಂದ್ರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಾಗರಿಕ ಮಿಲಿಟರಿ ಸಮನ್ವಯದ ಕುರಿತು ಮಹಿಳೆಯರಿಗೆ ತರಬೇತಿ ನೀಡಿದ್ದಕ್ಕಾಗಿ ಶಾಂತಿಪಾಲನಾ ಕಾರ್ಯಾಚರಣೆಗಳ ಇಲಾಖೆಯಿಂದ ಅವರನ್ನು ಮೊದಲ ಮಹಿಳಾ ಬೋಧಕರಾಗಿ ನಾಮನಿರ್ದೇಶನ ಮಾಡಲಾಯಿತು.

ಅಲ್ಲದೆ, ಅವರು ವಿಶ್ವಸಂಸ್ಥೆಯ ತರಬೇತಿ ತಂಡದೊಂದಿಗೆ ಮೊದಲ ಮಹಿಳಾ ಬೋಧಕರಾಗಿ ಸೇವೆ ಸಲ್ಲಿಸಿದದಾರೆ. ಕಾಂಬೋಡಿಯನ್ ಸೈನ್ಯ ಮತ್ತು ಪೊಲೀಸರಿಗೆ ವಿಶ್ವಸಂಸ್ಥೆಗಳ ಅಂಶಗಳ ಕುರಿತು ತರಬೇತಿ ನೀಡಿದ್ದ ಅವರಿಗೆ ಕಾಂಬೋಡಿಯನ್ ಸೈನ್ಯ ಎಕ್ಸಲೆನ್ಸ್‌ ಪ್ರಮಾಣಪತ್ರ ನೀಡಿದೆ.

ಕರ್ನಲ್ ಖುರೇಷಿ ಭಾರತದೊಳಗೆ ಕೂಡಾ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದರು. ಪಂಜಾಬ್ ಗಡಿಯಲ್ಲಿ ನಡೆದ ಆಪರೇಷನ್ ಪರಾಕ್ರಮ್‌ನಲ್ಲಿ ಅವರು ಭಾಗವಹಿಸಿದ್ದರು. ಇದಕ್ಕಾಗಿ ಅವರು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಅವರಿಂದ ಪ್ರಶಂಸಾ ಪತ್ರವನ್ನು ಪಡೆದಿದ್ದರು.

ಈಶಾನ್ಯ ಭಾರತದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಸಮಯದಲ್ಲಿ, ಸಂವಹನ ಕ್ಷೇತ್ರದಲ್ಲಿನ ಅವರ ಶ್ಲಾಘನೀಯ ಕೆಲಸಕ್ಕಾಗಿ ಅವರಿಗೆ SO-in-C (ಸಿಗ್ನಲ್ ಆಫೀಸರ್-ಇನ್-ಚೀಫ್) ಪ್ರಶಂಸಾ ಪತ್ರ ಗಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ನಡೆದ ಆಪರೇಷನ್ ಸದ್ಭಾವನಾದ ಭಾಗವಾಗಿದ್ದರು. ಸೈನ್ಯವು ಆಯೋಜಿಸಿದ್ದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಉಪನ್ಯಾಸಗಳನ್ನು ನೀಡಿರುವ ಅವರು, ಸಮುದಾಯಿಕ ತೊಡಗಿಸಿಕೊಳ್ಳುವಿಕೆ ಮತ್ತು ಜಾಗೃತಿಗೂ ಕೊಡುಗೆ ನೀಡಿದ್ದಾರೆ.

ಕರ್ನಲ್ ಖುರೇಷಿ ಅವರು ಮೆಕನೈಸ್ಡ್ ಇನ್‌ಫೆಂಟ್ರಿಯ ಅಧಿಕಾರಿ ಮೇಜರ್ ತಾಜುದ್ದೀನ್ ಖುರೇಷಿ ಅವರನ್ನು ವಿವಾಹವಾಗಿದ್ದು, ಅವರಿಗೆ ಒಬ್ಬ ಮಗ ಇದ್ದಾರೆ.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ ‘ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಐಎಎಫ್‌ನ ಹೆಲಿಕಾಪ್ಟರ್ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಹಾರಾಟ ನಡೆಸುವ ಕನಸಿದ್ದ ಅಧಿಕಾರಿಯಾಗಿದ್ದಾರೆ. “ವ್ಯೋಮಿಕಾ” ಎಂಬ ಹೆಸರಿನ ಅರ್ಥವೇ “ಆಕಾಶದ ಮಗಳು” ಎಂಬ ಅರ್ಥವು ಹಾರಾಟದ ಕಲೆಯ ಬಗ್ಗೆ ಅವರಲ್ಲಿ ಸಹಜ ಉತ್ಸಾಹವನ್ನು ಹುಟ್ಟುಹಾಕಿತ್ತು.

ತನ್ನ ಕನಸನ್ನು ಈಡೇರಿಸಲು ಅವರು ತಮ್ಮ ಶಾಲಾ ಜೀವನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಗೆ ಸೇರಿದ್ದರು. ನಂತರ ಎಂಜಿನಿಯರಿಂಗ್ ಪದವಿಯನ್ನು ಪಡೆದರು. ಅವರ ಕುಟುಂಬದಲ್ಲಿ ಮೊದಲಿಗರಾಗಿ ಸಶಸ್ತ್ರ ಪಡೆಯನ್ನು ಸೇರಿದರು. ಡಿಸೆಂಬರ್ 18, 2019 ರಂದು ಭಾರತೀಯ ವಾಯು ಪಡೆಯಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ನಿಯೋಜಿಸಲಾಯಿತು.

ಅವರು ಈಗ ಅನುಭವಿ ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಜಮ್ಮು ಕಾಶ್ಮೀರ ಮತ್ತು ಈಶಾನ್ಯ ಸೇರಿದಂತೆ ಕೆಲವು ಕಠಿಣ ಭೂಪ್ರದೇಶಗಳಲ್ಲಿ ಅವರು 2,500 ಗಂಟೆಗಳ ಹಾರಾಟವನ್ನು ಮಾಡಿದ್ದಾರೆ. ಅವರು ಬಹು ರಕ್ಷಣಾ ಕಾರ್ಯಾಚರಣೆಗಳಲ್ಲಿ ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ.

2020 ರ ನವೆಂಬರ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹದ ಪರಿಹಾರ ಕಾರ್ಯಾಚರಣೆ ಅವರ ಭಾಗವಹಿಸುವಿಕೆಯಲ್ಲಿ ನಡೆಯಿತು. ಈ ಕಾರ್ಯಾಚರಣೆಗಳನ್ನು ಎತ್ತರದ ಪ್ರದೇಶಗಳಲ್ಲಿ, ಕಠಿಣ ಹವಾಮಾನದಲ್ಲಿ ಮತ್ತು ಜೀವಗಳನ್ನು ಉಳಿಸಲು ವಾಯು ಬೆಂಬಲ ನಿರ್ಣಾಯಕವಾಗಿರುವ ದೂರದ ಸ್ಥಳಗಳಲ್ಲಿ ನಡೆಸಲಾಗಿತ್ತು.

ಮೇ 7, 2025 ರಂದು ಕರ್ನಲ್ ಖುರೇಷಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರೊಂದಿಗೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ’ನ ಅಧಿಕೃತ ಪತ್ರಿಕಾಗೋಷ್ಠಿ ತಂಡದ ಭಾಗವಾಗಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...