Homeಮುಖಪುಟನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ದೃಢಪಡಿಸಿದ ಆಂತರಿಕ ಸಮಿತಿ: ವರದಿ

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವುದನ್ನು ದೃಢಪಡಿಸಿದ ಆಂತರಿಕ ಸಮಿತಿ: ವರದಿ

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಮೂವರು ನ್ಯಾಯಾಧೀಶರ ಆಂತರಿಕ ಸಮಿತಿಯು ಸಿಜೆಐಗೆ ಸಲ್ಲಿಸಿದ ಗೌಪ್ಯ ವರದಿಯಲ್ಲಿ ದೃಢೀಕರಿಸಿದೆ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.

ವರದಿ ಸ್ವೀಕರಿಸಿದ ಸಿಜೆಐ ಸಂಜೀವ್ ಖನ್ನಾ ಅವರು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಂದ 48 ಗಂಟೆಗಳ ಒಳಗೆ (ಮೇ.9ರ ಒಳಗೆ) ಪ್ರತಿಕ್ರಿಯೆ ಕೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆಯಿಂದ ನ್ಯಾ. ವರ್ಮಾ ಅವರ ಮುಂದಿರುವ ಮೊದಲ ಆಯ್ಕೆ ರಾಜೀನಾಮೆ ನೀಡುವುದು. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಅವರ ವಿರುದ್ಧ ವಾಗ್ದಂಡನೆಗೆ ಶಿಫಾರಸು ಮಾಡುವ ವರದಿಯನ್ನು ರಾಷ್ಟ್ರಪತಿಗಳಿಗೆ ಕಳಿಸಲಾಗುತ್ತದೆ ಎಂದು ನ್ಯಾಯಾಂಗದ ಉನ್ನತ ಮೂಲಗಳು ತಿಳಿಸಿರುವುದಾಗಿ ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ನ್ಯಾ.ವರ್ಮಾ ಮೇಲಿನ ಆರೋಪದ ಕುರಿತು ವರದಿ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ಮಾರ್ಚ್ 22ರಂದು ಸಿಜೆಐ ರಚಿಸಿದ್ದರು. ಈ ಸಮಿತಿ ಮೇ 4 ರಂದು ಸಿಜೆಐ ಖನ್ನಾ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.

ಮಾರ್ಚ್ 25ರಂದು ತನಿಖೆ ಆರಂಭಿಸಿದ್ದ ಸಮಿತಿ ಮೇ 3 ರಂದು ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐ ಅವರಿಗೆ ಸಲ್ಲಿಸಲಾಗಿದೆ.

ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...