Homeಮುಖಪುಟಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ...

ಆಪರೇಷನ್ ಸಿಂಧೂರ| ಐದು ದೇಶಗಳಿಗೆ ಮಾಹಿತಿ ನೀಡಿದ ಭಾರತ; ನಾಗರಿಕರು, ಆರ್ಥಿಕ, ಮಿಲಿಟರಿ ನೆಲೆ ಗುರಿ ಮಾಡಿಲ್ಲ ಎಂದು ವಿವರಣೆ

- Advertisement -
- Advertisement -

ಬುಧವಾರ (ಮೇ 7, 2025) ಬೆಳಗಿನ ಜಾವ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ವಿವಿಧ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ನಂತರ, ಭಾರತವು ಅಮೆರಿಕ, ಯುಕೆ, ಸೌದಿ ಅರೇಬಿಯಾ, ಯುಎಇ ಮತ್ತು ರಷ್ಯಾಗೆ ದಾಳಿ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

ನಿಖರವಾಗಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ತಿಳಿಸಿದೆ. ಮಾಹಿತಿ ಪಡೆದ ಎಲ್ಲಾ ಐದು ದೇಶಗಳ ನಾಯಕರು ಕಳೆದ ಎರಡು ವಾರಗಳಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ಆಪರೇಷನ್ ಸಿಂಧೂರ ಹಿನ್ನೆಲೆ, ಇಂದಿಗೆ (ಬುಧವಾರ) ನಿಗದಿಯಾಗಿದ್ದ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರ ಭಾರತ ಭೇಟಿ ಕೊಂಚ ತಡವಾಗಬಹುದು. ಆದರೆ, ಅವರು ಪ್ರವಾಸ ರದ್ದುಗೊಳಿಸಿಲ್ಲ ಎಂದು ಇಂದು ಬೆಳಿಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಆದರೆ, ಅವರು ಭಾರತಕ್ಕೆ ಆಗಮಿಸಿದ ಬಗ್ಗೆ ಮಾಹಿತಿ ದೊರೆತಿಲ್ಲ.

ಕೇಂದ್ರೀಕೃತ, ನಿಖರ ದಾಳಿ

“ನಮ್ಮ ಕ್ರಮ ನಿರ್ದಿಷ್ಟ, ನಿಖರ, ವಿವೇಚನಾಭರಿತ ಮತ್ತು ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಲ್ಲದ್ದು. ಯಾವುದೇ ಪಾಕಿಸ್ತಾನಿ ನಾಗರಿಕ, ಅವರ ಆರ್ಥಿಕ ಅಥವಾ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ. ನಿಖರವಾಗಿ ಗೊತ್ತಿದ್ದ ಭಯೋತ್ಪಾದಕ ನೆಲೆಗಳನ್ನು ಮಾತ್ರ ಗುರಿಯಾಗಿಸಲಾಗಿದೆ” ಎಂದು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆಪರೇಷನ್ ಸಿಂಧೂರ ಕುರಿತು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

“ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪಾಕಿಸ್ತಾನ ಕಳೆದ 15 ದಿನಗಳಿಂದ ಆರೋಪಗಳನ್ನು ನಿರಾಕರಿಸುತ್ತಲೇ ಬಂದಿದೆ. ಭಾರತದ ವಿರುದ್ಧ ಸುಳ್ಳು ಕಾರ್ಯಾಚರಣೆಯ ಆರೋಪಗಳನ್ನು ಮಾಡಿದೆ” ಎಂದಿದೆ.

ಭಾರತದ ಕ್ರಮಗಳ ಬಗ್ಗೆ ಎನ್‌ಎಸ್‌ಎ ಅಜಿತ್ ದೋವಲ್ ಅವರು ಅಮೆರಿಕದ ಪ್ರಭಾರ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮಾತನಾಡಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮಾರ್ಕೊ ರೂಬಿಯೊ, “ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಸಂಘರ್ಷ ಶೀಘ್ರ ಕೊನೆಗೊಳ್ಳಲಿ ಎಂದು ಆಶಿಸುತ್ತೇವೆ. ಭಾರತ-ಪಾಕಿಸ್ತಾನದ ನಾಯಕರು ಮಾತುಕತೆ ಮೂಲಕ ಇದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಿದ್ದಾರೆ” ಎಂದಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಇಂದು ನಿನ್ನೆಯದ್ದಲ್ಲ. ಆಗಾಗ ಅವರ ನಡುವೆ ಸಂಘರ್ಷ ಉಂಟಾಗುತ್ತದೆ ಮತ್ತು ಅವರು ಅದನ್ನು ಬಗೆಹರಿಸಿಕೊಂಡು ಮುಂದುವರಿಯುತ್ತಾರೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ಹೇಳಿದ್ದರು. ಅದೇ ನಮ್ಮ ನಿಲುವು ಎಂದು ಮಾರ್ಕೊ ರೂಬಿಯೊ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಬಗ್ಗೆ ಭಾರತ ಪಕ್ಕದ ಚೀನಾಗೆ ವಿವರಣೆ ನೀಡಿಲ್ಲ. ಭಾರತದ ದಾಳಿಯನ್ನು ಚೀನಾ ‘ವಿಷಾದನೀಯ’ ಎಂದಿದೆ.

“ಈಗ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ನಮಗೆ ಕಳವಳವಿದೆ. ಚೀನಾ ಭಾರತ ಮತ್ತು ಪಾಕಿಸ್ತಾನ ಎರಡಕ್ಕೂ ನೆರೆಯ ರಾಷ್ಟ್ರವಾಗಿದೆ. ಚೀನಾ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಎರಡೂ ಕಡೆಯವರು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸುವ ಕ್ರಮಗಳನ್ನು ತೆಗೆದುಕೊಳ್ಳಬಾರದು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ಬೆಳಿಗ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ | ಪತ್ರಿಕಾಗೊಷ್ಠಿಯಲ್ಲಿದ್ದ ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...