Homeಮುಖಪುಟಆಪರೇಷನ್ ಸಿಂಧೂರ ಹಿನ್ನೆಲೆ ಸರ್ವಪಕ್ಷ ಸಭೆ ನಡೆಸಿದ ಕೇಂದ್ರ: ಪ್ರಧಾನಿ ಮೋದಿ ಗೈರು

ಆಪರೇಷನ್ ಸಿಂಧೂರ ಹಿನ್ನೆಲೆ ಸರ್ವಪಕ್ಷ ಸಭೆ ನಡೆಸಿದ ಕೇಂದ್ರ: ಪ್ರಧಾನಿ ಮೋದಿ ಗೈರು

- Advertisement -
- Advertisement -

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಕೇಂದ್ರ ಸರ್ಕಾರ ಗುರುವಾರ (ಮೇ.8) ಎರಡನೇ ಬಾರಿಗೆ ಸರ್ವಪಕ್ಷ ಸಭೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಸಭೆಗೆ ಗೈರಾಗಿದ್ದರು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಬುಧವಾರ (ಮೇ.7) ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಈ ಸಭೆಯಲ್ಲಿ ವಿವಿಧ ಪಕ್ಷಗಳ ಪ್ರಮುಖರಿಗೆ ಮಾಹಿತಿ ನೀಡಲಾಗಿದೆ.

‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷಗಳ ನಾಯಕರಿಗೆ ಹೇಳಿದ್ದಾಗಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

“ಇದು ನಿರಂತರ ಕಾರ್ಯಾಚರಣೆ ಎಂದಿರುವ ರಕ್ಷಣಾ ಸಚಿವರು, ಭಾರತದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ದಾಳಿ ಮಾಡಿದರೆ, ಭಾರತ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂಬುವುದಾಗಿ ಹೇಳಿದ್ದಾರೆ” ಎಂದಿವೆ.

ಭಾರತದ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇಸ್ಲಾಮಾಬಾದ್ ಬುಧವಾರ ಪ್ರತಿಜ್ಞೆ ಮಾಡಿದೆ.

“ಆಪರೇಷನ್ ಸಿಂಧೂರದ ಬಗ್ಗೆ ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿಸಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ನಾಯಕರು ಪ್ರಬುದ್ದತೆ ತೋರಿದ್ದಾರೆ. ಯಾರೂ ಗದ್ದಲ ಸೃಷ್ಟಿಸಿಲ್ಲ” ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ರಾಷ್ಟ್ರೀಯ ಭದ್ರತೆ ಮತ್ತು ಎಲ್ಲಾ ಭಾರತೀಯರ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿನ ಸುರಕ್ಷತೆಯ ವಿಷಯದ ಬಗ್ಗೆ ನಾಯಕರು ತಮ್ಮ ಕಳವಳಗಳನ್ನು ಹಂಚಿಕೊಂಡಿದ್ದಾರೆ. ಆದರೆ, ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ರಾಷ್ಟ್ರವು ಒಗ್ಗಟ್ಟಾಗಿದ್ದು, ಎಲ್ಲರು ಬೆಂಬಲ ವ್ಯಕ್ತಪಡಿಸಿದ್ದಾರೆ” ಎಂದು ಕಿರಣ್ ರಿಜಿಜು ಹೇಳಿದ್ದಾರೆ.

“ನಾವು ಸರ್ಕಾರ ರಚಿಸಲು ಅಥವಾ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡುತ್ತಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿಯೂ ರಾಜಕೀಯ ಮಾಡುತ್ತೇವೆ” ಎಂದು ಸಭೆಯಲ್ಲಿ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ. ಇದು ನಿರಂತರ ಕಾರ್ಯಾಚರಣೆ ಎಂದು ತಿಳಿಸಿದ್ದಾರೆ. ಹಾಗಾಗಿ, ಭಾರತೀಯ ಸಶಸ್ತ್ರ ಪಡೆಗಳು ಪ್ರಾರಂಭಿಸಿದ ಆಪರೇಷನ್ ಸಿಂಧೂರ್‌ನ ತಾಂತ್ರಿಕ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಸಶಸ್ತ್ರ ಪಡೆಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹಾಗಾಗಿ, ಅವರು ಸರ್ವಪಕ್ಷ ಸಭೆಯಲ್ಲಿ ಹಾಜರಿರಲಿಲ್ಲ ಎಂದು ರಿಜಿಜು ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಶಸ್ತ್ರ ಪಡೆಗಳಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ. ಸರ್ಕಾರದ ಭಯೋತ್ಪಾದನಾ ವಿರೋಧಿ ಕ್ರಮವನ್ನು ಬೆಂಬಲಿಸಿದ್ದಾರೆ.

“ನಾವು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ, ಸರ್ಕಾರ ನಮ್ಮೊಂದಿಗೆ ಚರ್ಚಿಸಲು ಬಯಸದ ಕೆಲವು ವಿಷಯಗಳಿವೆ ಎಂದಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಸಭೆಯಲ್ಲಿ, ಸರ್ಕಾರ ಹೇಳಿದ್ದನ್ನು ನಾವು ಕೇಳಿದ್ದೇವೆ. ಕೆಲವು ಗೌಪ್ಯ ಮಾಹಿತಿಯನ್ನು ಹೊರಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ನಾವೆಲ್ಲರೂ ಸರ್ಕಾರದೊಂದಿಗಿದ್ದೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಖರ್ಗೆ ಹೇಳಿದ್ದಾರೆ.

ಆಪರೇಷನ್ ಸಿಂಧೂರ ನಡೆಸಿದ್ದಕ್ಕಾಗಿ ಸಶಸ್ತ್ರ ಪಡೆಗಳು ಮತ್ತು ಭಾರತ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

“ನಾವು ದಿ ರೆಸಿಸ್ಟ್‌ಟೆಂಟ್ ಫ್ರಂಟ್ (ಟಿಆರ್‌ಎಫ್) ವಿರುದ್ಧ ಅಂತಾರಾಷ್ಟ್ರೀಯ ಅಭಿಯಾನವನ್ನು ನಡೆಸಬೇಕು ಮತ್ತು ಯುಎನ್ ಸೆಕ್ಯುರಿಟಿ ಕೌನ್ಸಿಲ್ ಅದನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ನಾನು ಹೇಳಿದ್ದೇನೆ. ದೇಶದಲ್ಲಿ ಟಿಆರ್‌ಎಫ್ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಹೆಸರಿಸುವಂತೆ ನಾವು ಅಮೆರಿಕವನ್ನು ಕೇಳಬೇಕಾಗಿದೆ” ಎಂದು ಓವೈಸಿ ಪ್ರತಿಕ್ರಿಯಿಸಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಎಸ್. ಜೈಶಂಕರ್, ಜೆ.ಪಿ ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಸರ್ಕಾರವನ್ನು ಪ್ರತಿನಿಧಿಸಿದರೆ, ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್‌ನಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ.ಆರ್ ಬಾಲು ಇದ್ದರು.

ಇನ್ನುಳಿದಂತೆ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ)ಯ ಸುಪ್ರಿಯಾ ಸುಳೆ, ಬಿಜೆಡಿಯ ಸಸ್ಮಿತ್ ಪಾತ್ರ ಮತ್ತು ಸಿಪಿಐ (ಎಂ)ನ ಜಾನ್ ಬ್ರಿಟ್ಟಾಸ್ ಭಾಗವಹಿಸಿದ್ದರು.

ಜೆಡಿಯು ನಾಯಕ ಸಂಜಯ್ ಝಾ, ಕೇಂದ್ರ ಸಚಿವ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಭೆಗೆ ಗೈರಾಗಿದ್ದರು. ಏಪ್ರಿಲ್ 24ರಂದು ನಡೆದ ಸರ್ವಪಕ್ಷ ಸಭೆಯಲ್ಲೂ ಅವರು ಭಾಗವಹಿಸಿರಲಿಲ್ಲ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾಗಿದ್ದರು. ಏಪ್ರಿಲ್ 24ರಂದು ಸರ್ವಪಕ್ಷ ಸಭೆ ನಡೆಸಿದ್ದ ಕೇಂದ್ರ ಸರ್ಕಾರ ಈ ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ಇದೀಗ ಆಪರೇಷನ್ ಸಿಂಧೂರ ಬಳಿಕ ಎರಡನೇ ಬಾರಿ ಸರ್ವಪಕ್ಷ ಸಭೆ ನಡೆಸಿದೆ.

ಬಿಹಾರ| ಎನ್‌ಡಿಎ ತೊರೆದ ಇಬ್ಬರು ಹಿರಿಯ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...