Homeಮುಖಪುಟಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ

ಪಾಕಿಸ್ತಾನದಿಂದ 15 ಮಿಲಿಟರಿ ಕೇಂದ್ರಗಳ ಮೇಲೆ ಡ್ರೋನ್‌, ಕ್ಷಿಪಣಿ ಮೂಲಕ ದಾಳಿಗೆ ಯತ್ನ: ಭಾರತ

- Advertisement -
- Advertisement -

ಆಪರೇಷನ್ ಸಿಂಧೂರ ದಾಳಿಯ ನಂತರ ಪಾಕಿಸ್ತಾನವು ಬುಧವಾರ ರಾತ್ರಿ 15 ಪಟ್ಟಣಗಳು ​​ಮತ್ತು ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸುವ ಪ್ರಯತ್ನ ಮಾಡಿದ್ದು, ಅವುಗಳನ್ನು ಪಡೆಗಳು ವಿಫಲಗೊಳಿಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಪಾಕಿಸ್ತಾನದಿಂದ 

ಜಮ್ಮು ಕಾಶ್ಮೀರದ ಅವಂತಿಪೋರಾ, ಜಮ್ಮು ಮತ್ತು ಶ್ರೀನಗರ, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಅದಮ್‌ಪುರ ಮತ್ತು ಬಟಿಂಡಾ, ರಾಜಸ್ಥಾನದ ಚಂಡೀಗಢ, ನಲ್, ಫಲೋಡಿ ಮತ್ತು ಉತ್ತರಲೈ ಮತ್ತು ಗುಜರಾತ್‌ನ ಭುಜ್ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಮಾನವರಹಿತ ವಿಮಾನಗಳ ಮೂಲಕ ಮತ್ತು ರಕ್ಷಣಾ ವ್ಯವಸ್ಥೆಗಳಿಂದ ನಾಶಪಡಿಸಲಾಗಿದೆ. ಜೊತೆಗೆ ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳೆಂದು ಹೇಳಲಾದ ಸ್ಥಳಗಳ ಮೇಲೆ ಬುಧವಾರ ಭಾರತೀಯ ಸೇನೆ ದಾಳಿ ನಡೆಸಿತ್ತು. ಇದರ ನಂತರ ಪಾಕಿಸ್ತಾನ ಈ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿತ್ತು.

ಜಮ್ಮು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಶೆಲ್ ದಾಳಿ ಮಾಡುವ ಮೂಲಕ ಪಾಕಿಸ್ತಾನ ಸೇನೆಯು ಪ್ರತಿದಾಳಿ ನಡೆಸಿದೆ. ಗುಂಡಿನ ದಾಳಿಯಲ್ಲಿ ಹದಿನಾರು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಗುರುವಾರ ಬೆಳಿಗ್ಗೆ ಭಾರತೀಯ ಸೇನೆಯು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಅದು ಹೇಳಿದೆ. “ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ವಿಶ್ವಾಸಾರ್ಹವಾಗಿ ತಿಳಿದುಬಂದಿದೆ.” ಎಂದು ಅದು ಹೇಳಿದೆ.

ಬುಧವಾರ ರಾತ್ರಿಯಿಂದ ತನ್ನ ವಾಯುಪ್ರದೇಶವನ್ನು ಪ್ರವೇಶಿಸಿದ 25 ಭಾರತೀಯ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. ಕರಾಚಿ ಮತ್ತು ಲಾಹೋರ್ ನಗರಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಭಾರತೀಯ ನಿರ್ಮಿತ ಇಸ್ರೇಲಿ ಹರೋಪ್ ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.

ಡ್ರೋನ್ ದಾಳಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. “ಭಾರತದ ಡ್ರೋನ್‌ಗಳನ್ನು ಪಾಕಿಸ್ತಾನ ವಾಯುಪ್ರದೇಶಕ್ಕೆ ಕಳುಹಿಸಲಾಗುತ್ತಿದೆ… [ಭಾರತ] ಈ ಆಕ್ರಮಣಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ.” ಎಂದು ಚೌಧರಿ ಹೇಳಿದ್ದಾರೆ.

ಬುಧವಾರ ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಈ ದಾಳಿಯಿಂದ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅದು ಪಾಕಿಸ್ತಾನ ಹೇಳಿದ್ದು, ಕಾರ್ಯಾಚರಣೆಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಹೇಳಿಕೊಂಡಿದೆ.

ಅದಾಗ್ಯೂ, ಭಾರತವು ಅಪರೇಷನ್ ಸಿಂಧೂರವನ್ನು “ನಮ್ಮ ಮುಗ್ಧ ವ್ಯಕ್ತಿಗಳನ್ನು ಕೊಂದವರನ್ನು ಮಾತ್ರ ಗುರಿಯಾಗಿಸಿಕೊಂಡಿವೆ” ಎಂದು ಹೇಳಿದೆ. ಇದನ್ನು ಪುನರುಚ್ಚರಿಸಿರುವ ರಕ್ಷಣಾ ಸಚಿವಾಲಯ, “ಭಾರತದಲ್ಲಿನ ಮಿಲಿಟರಿ ಗುರಿಗಳ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು” ಎಂದು ಗುರುವಾರ ಹೇಳಿದೆ.

ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯಾದ್ಯಂತ ಮೋರ್ಟಾರ್‌ಗಳು ಮತ್ತು ಭಾರೀ ಕ್ಯಾಲಿಬರ್ ಫಿರಂಗಿಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಭಾರತ ಆರೋಪಿಸಿದೆ. ಪಾಕಿಸ್ತಾನದಿಂದ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....