Homeಮುಖಪುಟಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ

ಪಾಕಿಸ್ತಾನ ಮೂಲದ ಕಂಟೆಂಟ್ ಪ್ರಸಾರ ಮಾಡದಂತೆ ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಮೂಲದ ವೆಬ್-ಸರಣಿ, ಚಲನಚಿತ್ರ, ಪಾಡ್‌ಕಾಸ್ಟ್ ಸೇರಿದಂತೆ ಎಲ್ಲ ರೀತಿಯ ಕಂಟೆಂಟ್‌ಗಳನ್ನು ತಕ್ಷಣವೇ ನಿಲ್ಲಿಸುವಂತೆ ಒಟಿಟಿ ವೇದಿಕೆಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಐ & ಬಿ) ಗುರುವಾರ ಆದೇಶಿಸಿದೆ.

ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಒಟಿಟಿ ವೇದಿಕೆಗಳು, ಮಾಧ್ಯಮ ಸ್ಟ್ರೀಮಿಂಗ್ ವೇದಿಕೆಗಳು, ಮಧ್ಯವರ್ತಿಗಳ ವೆಬ್-ಸಿರೀಸ್, ಚಲನಚಿತ್ರ, ಹಾಡುಗಳು, ಪಾಡ್‌ಕಾಸ್ಟ್‌ಗಳು ಸೇರಿದಂತೆ ಪಾಕ್ ಮೂಲದ ವಿಷಯಗಳ ಪ್ರಸಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಪ ನಿರ್ದೇಶಕ (ಡಿಜಿಟಲ್ ಮಾಧ್ಯಮ) ಕ್ಷಿತಿಜ್ ಅಗರ್ವಾಲ್ ಹೊರಡಿಸಿದ ಆದೇಶದಲ್ಲಿ, ಭಾರತದಲ್ಲಿ ನಡೆದ ಹಲವಾರು ಭಯೋತ್ಪಾದಕ ದಾಳಿಗಳು ಪಾಕಿಸ್ತಾನ ಮೂಲದ ಸರ್ಕಾರ ಮತ್ತು ಸರ್ಕಾರೇತರ ಸಂಪರ್ಕವನ್ನು ಹೊಂದಿವೆ ಆರೋಪಿಸಲಾಗಿದೆ.

ಆದೇಶದಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆಗೈದಿದ್ದರು. ಅದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಮೇ.7ರಂದು ತಡರಾತ್ರಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ.

ಇಂದು ಭಾರತದ ಇಸ್ರೇಲ್ ನಿರ್ಮಿತ 13 ‘ಹರೋಪ್ ಡ್ರೋನ್‌’ಗಳನ್ನು ಹೊಡೆದುರುಳಿಸಿದ್ದೇವೆ: ಪಾಕಿಸ್ತಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...