Homeಮುಖಪುಟವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ...

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

- Advertisement -
- Advertisement -

ಎರಡು ಸಂಸ್ಥೆಗಳ (ವಿಕಿಮೀಡಿಯ-ಎಎನ್‌ಐ) ನಡುವಿನ ಕಾನೂನು ವಿವಾದದ ಬಗ್ಗೆ ವಿವರಗಳನ್ನು ಹೊಂದಿರುವ ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದು ಹಾಕುವಂತೆ ವಿಕಿಮೀಡಿಯ ಫೌಂಡೇಶನ್‌ಗೆ ದೆಹಲಿ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಗುರುವಾರ (ಮೇ.8) ರದ್ದುಗೊಳಿಸಿದೆ ಎಂದು barandbench.com ವರದಿ ಮಾಡಿದೆ.

ದೆಹಲಿ ಹೈಕೋರ್ಟ್‌ನಲ್ಲಿ ವಿಕಿಪೀಡಿಯಾ ವಿರುದ್ಧ ಎಎನ್‌ಐ ಸುದ್ದಿ ಸಂಸ್ಥೆ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ಸೇರಿದಂತೆ ಇತರ ಮಾಹಿತಿಗಳನ್ನು ವಿವಾದಕ್ಕೀಡಾಗಿದ್ದ ವಿಕಿಪೀಡಿಯಾ ಪುಟ ಹೊಂದಿದೆ.

“ಕಳೆದ ವರ್ಷದ ಈ ಪುಟಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದ ದೆಹಲಿ ಹೈಕೋರ್ಟ್, ನ್ಯಾಯಾಲಯದ ಅವಲೋಕನಗಳ ಕುರಿತ ಚರ್ಚೆಯು ನ್ಯಾಯಾಂಗ ನಿಂದನೆಗೆ ಕಾರಣವಾಗುತ್ತದೆ” ಎಂದು ಹೇಳಿತ್ತು.

ಹೈಕೋರ್ಟ್ ವಿಕಿಪೀಡಿಯ ಪುಟ ತೆಗೆದು ಹಾಕುವಂತೆ ಹೊರಡಿಸಿದ್ದ ಆದೇಶದ ವಿರುದ್ಧ ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ನ್ಯಾಯಪೀಠ ಗುರುವಾರ ಪುರಸ್ಕರಿಸಿದೆ.

“ಹೈಕೋರ್ಟ್ ಹೊರಡಿಸಿದ ನಿರ್ದೇಶನವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಲು ನಮಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಮಾಧ್ಯಮಗಳಿಗೆ ವಿಷಯವನ್ನು ಅಳಿಸಲು ಅಥವಾ ತೆಗೆದುಹಾಕಲು ಹೇಳುವುದು ನ್ಯಾಯಾಂಗದ ಕೆಲಸವಲ್ಲ. ಅಂತಹ ಆದೇಶವನ್ನು ಸೂಕ್ತ ಕ್ರಮಗಳಲ್ಲಿ ಪ್ರಶ್ನಿಸಲು ಮಾಧ್ಯಮಗಳಿಗೆ ಮುಕ್ತ ಅವಕಾಶವಿದೆ” ಎಂದಿದೆ.

“ಉದಾರವಾದಿ ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ ಮತ್ತು ಮಾಧ್ಯಮಗಳು ಪರಸ್ಪರ ಬೆಂಬಲಿಸಬೇಕು” ಎಂದು ನ್ಯಾಯಾಲಯವು ಒತ್ತಿ ಹೇಳಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಖಿಲ್ ಸಿಬಲ್, ಟ್ರೈಲೀಗಲ್‌ನ ವಕೀಲರಾದ ನಿಖಿಲ್ ನರೇಂದ್ರನ್ ಮತ್ತು ಟೈನ್ ಅಬ್ರಹಾಂ ಜೊತೆಗೆ ಎಝೆಡ್‌ಬಿ & ಪಾರ್ಟ್‌ನರ್ಸ್‌ನ ವಕೀಲರಾದ ವಿಜಯೇಂದ್ರ ಪ್ರತಾಪ್ ಸಿಂಗ್ ಮತ್ತು ಅಭಿಜ್ಞಾನ್ ಝಾ ವಿಕಿಪೀಡಿಯಾ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ವಕೀಲ ಸಾಹಿಲ್ ತಗೋತ್ರ ಅವರೊಂದಿಗೆ ವಕೀಲ ಸಿದ್ಧಾಂತ್ ಕುಮಾರ್ ಅವರು ಎನ್‌ಎನ್‌ಐ ಪರವಾಗಿ ವಾದ ಮಂಡಿಸಿದ್ದರು.

ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಈ ಹಿಂದೆ ಟೀಕಿಸಿದ್ದ ಸುಪ್ರೀಂ ಕೋರ್ಟ್, “ನ್ಯಾಯಾಧೀಶರು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್‌ ಪ್ರಕ್ರಿಯೆಗಳ ಕುರಿತಾದ ಮಾಹಿತಿಯನ್ನು ತೆಗೆದುಹಾಕುವಂತೆ ಆದೇಶಿಸಲು ಸಾಧ್ಯವಿಲ್ಲ” ಎಂದಿತ್ತು.

ಎಎನ್‌ಐ ಕುರಿತಾದ ವಿಕಿಪೀಡಿಯಾ ಪುಟದಲ್ಲಿ, ‘ಅದು (ಎಎನ್‌ಐ) ಪ್ರಸ್ತುತ ಕೇಂದ್ರ ಸರ್ಕಾರದ ಪ್ರಚಾರ ಸಾಧನ’ ಎಂದು ಮಾಹಿತಿ ಎಡಿಟ್ ಮಾಡಲು ವಿಕಿಮೀಡಿಯಾ ಫೌಂಡೇಶನ್ ಅನುಮತಿಸಿದೆ ಎಂದು ಆರೋಪಿಸಿ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿರುವುದು ಈ ಪ್ರಕರಣದ ಮೂಲ.

ಎಎನ್‌ಐ ಹೂಡಿರುವ ಮೊಕದ್ದಮೆ ಸಂಬಂಧ ಜುಲೈ 9, 2024 ರಂದು ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಸಮನ್ಸ್ ಜಾರಿ ಮಾಡಿದ್ದ ದೆಹಲಿ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ವಿಷಯಗಳನ್ನು ಎಡಿಟ್ ಮಾಡಿದ ಮೂವರ ಮಾಹಿತಿ ಬಹಿರಂಗಪಡಿಸುವಂತೆ ಆದೇಶಿಸಿತ್ತು.

ನಂತರ, ಹೈಕೋರ್ಟ್ ಆದೇಶವನ್ನು ವಿಕಿಮೀಡಿಯಾ ಪಾಲಿಸಿಲ್ಲ ಎಂದು ಆರೋಪಿಸಿದ್ದ ಎಎನ್‌ಐ, ಹೈಕೋರ್ಟ್‌ನ ಏಕ ಸದಸ್ಯ ಪೀಠದ ಮುಂದೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಸೆಪ್ಟೆಂಬರ್ 5, 2024ರಂದು ಏಕ ಸದಸ್ಯ ಪೀಠದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ವಿಕಿಮೀಡಿಯಾದ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25ರಂದು ವಿಕಿಮೀಡಿಯಾದ ಅಧಿಕೃತ ಪ್ರತಿನಿಧಿಯೊಬ್ಬರು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಿರಬೇಕು ಎಂದು ಆದೇಶಿಸಿದ್ದರು. ನಂತರ ವಿಕಿಮೀಡಿಯಾ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ಈ ವಿಷಯ ವಿಭಾಗೀಯ ಪೀಠದ ಮುಂದೆ ಬಂದಾಗ, ಪ್ರಕರಣದ ಬಗ್ಗೆಯೇ ಒಂದು ಪುಟವನ್ನು ರಚಿಸಲಾಗಿದೆ ಎಂದು ಪೀಠ ಗಮನಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟವನ್ನು ಪ್ರಕಟಿಸಲು ಅನುಮತಿಸಿದ್ದಕ್ಕೆ ಹೈಕೋರ್ಟ್ ವಿಕಿಪೀಡಿಯಾ ವಿರುದ್ದ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಮುಖ್ಯ ನ್ಯಾಯಮೂರ್ತಿ ಮನಮೋಹನ್ (ಈಗ ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದಿದ್ದಾರೆ) ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠವು ‘ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs ವಿಕಿಮೀಡಿಯ ಫೌಂಡೇಶನ್’ ಎಂಬ ಶೀರ್ಷಿಕೆಯ ಪುಟವನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಆದೇಶಿಸಿತ್ತು.

ವಿಕಿಪೀಡಿಯಾ ಆದೇಶವನ್ನು ಪಾಲಿಸಿದರೂ, ಅದು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಈ ನಡುವೆ, ಎಎನ್‌ಐ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಎಎನ್‌ಐನ ವಿಕಿಪೀಡಿಯಾ ಪುಟದಲ್ಲಿ ಸೇರಿಸಲಾದ ಮಾನನಷ್ಟಕರ ಮಾಹಿತಿಗಳನ್ನು ತೆಗೆದು ಹಾಕುವಂತೆ ವಿಕಿಪೀಡಿಯಾಗೆ ಏಪ್ರಿಲ್ 2ರಂದು ಮಧ್ಯಂತರ ಆದೇಶ ಆದೇಶ ನೀಡಿತ್ತು.

ಈ ಆದೇಶವನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 17 ರಂದು ರದ್ದುಗೊಳಿಸಿದೆ. ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರು ಹೊಸದಾಗಿ ವಿಚಾರಣೆ ನಡೆಸಲಿದ್ದಾರೆ.

ಹೊಸ ವಿಚಾರಣೆ ಆರಂಭ

ಎಎನ್‌ಐ ಮತ್ತು ವಿಕಿಮೀಡಿಯಾ ನಡುವಿನ ಮಾನನಷ್ಟ ಪ್ರಕರಣದ ಹೊಸ ವಿಚಾರಣೆ ಗುರುವಾರ ದೆಹಲಿ ಹೈಕೋರ್ಟ್‌ನ ಏಕ ಸದಸ್ಯ ನ್ಯಾಯಾಧೀಶರ ಪೀಠ ಆರಂಭಿಸಿದೆ.

ವಿಕಿಪೀಡಿಯಾದಲ್ಲಿ ತನ್ನ ಬಗ್ಗೆ ಇರುವ ಮಾನನಷ್ಟಕರ ಮಾಹಿತಿಗೆ ಎಎನ್‌ಐ ಮಧ್ಯಂತರ ತಡೆಯಾಜ್ಞೆ ಕೋರಿದೆ. ಈ ಹಿನ್ನೆಲೆ, ವಿಕಿಪೀಡಿಯಾದ ಮಾತೃ ಸಂಸ್ಥೆ ವಿಕಿಮೀಡಿಯಾ ಫೌಂಡೇಶನ್‌ಗೆ ಶುಕ್ರವಾರ (ಮೇ.8) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಜ್ಯೋತಿ ಸಿಂಗ್ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದು, ಜುಲೈ 7ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಿದ್ದಾರೆ.

ವಿಕಿಮೀಡಿಯಾದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಖಿಲ್ ಸಿಬಲ್, ನೋಟಿಸ್‌ಗೆ ಉತ್ತರಿಸಲು ಹೆಚ್ಚಿನ ಕಾಲವಕಾಶ ಕೋರಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಿಂಗ್ ಅವರು, ಎಎನ್‌ಐ ಆರೋಪ ನಿಜವೆಂದು ಕಂಡುಬಂದರೆ ಅದರ ಪರಿಣಾಮವನ್ನು ಯಾರು ಎದುರಿಸಬೇಕು? ಎಂದು ಪ್ರಶ್ನಿಸಿದ್ದಾರೆ.

ಎಎನ್‌ಐ ಪರ ವಕೀಲ ಸಿದ್ಧಾಂತ್ ಕುಮಾರ್ ಅವರು ವಾದ ಮಂಡಿಸಿ, ವಿಕಿಪೀಡಿಯಾ ಮಧ್ಯವರ್ತಿಯಾಗಿರುವುದರಿಂದ (ಮಾಹಿತಿ ಎಡಿಟ್ ಮಾಡಿದವರು ಪಕ್ಷಕಾರರು ಎಂದರ್ಥ) ಅರ್ಹತೆಯ ಆಧಾರದ ಮೇಲೆ ಈ ವಿಷಯವನ್ನು ಪ್ರಶ್ನಿಸಲು ಯಾವುದೇ ಅರ್ಹತೆ ಇಲ್ಲ ಎಂದಿದ್ದಾರೆ.

ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...