Homeಮುಖಪುಟಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

- Advertisement -
- Advertisement -

ಮೇ 9 ಮತ್ತು 10ರ ನಡುವೆ ರಾತ್ರಿ ಭಾರತದ ಜಮ್ಮು ಕಾಶ್ಮೀರದಿಂದ ಗುಜರಾತ್‌ವರೆಗಿನ ವಿಮಾನ ನಿಲ್ದಾಣ, ಸೇನಾ ನೆಲೆಗಳು ಸೇರಿದಂತೆ 26 ಪ್ರಮುಖ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಯತ್ನಿಸಿದೆ. ಎಲ್ಲಾ ಪ್ರಯತ್ನಗಳನ್ನು ನಮ್ಮ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇಂದು (ಮೇ.10) ಮತ್ತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಪಾಕಿಸ್ತಾನ ಮೇ.9-10 ನಡುವೆ ರಾತ್ರಿ ಭಾರತದ ಮೇಲೆ ದಾಳಿ ಮಾಡಲು ವಿಫಲ ಯತ್ನ ನಡೆಸಿರುವ ಬಗ್ಗೆ ಮಾಹಿತಿ ಹಂಚಿಕೊಂಡರು.

ಜಮ್ಮು ಕಾಶ್ಮೀರದ ಶ್ರೀನಗರ, ಅವಂತಿಪೊರ ಮತ್ತು ಉಧಮ್‌ಪುರ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿದೆ. ಇದು ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವ ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಬಾರಾಮುಲ್ಲಾ, ಶ್ರೀನಗರ, ಅವಂತಿಪೊರ, ನಗ್ರೋಟಾ, ಜಮ್ಮು, ಫಿರೋಝ್‌ಪುರ, ಪಠಾಣ್‌ಕೋಟ್, ಫಾಝಿಲ್ಕಾ, ಲಾಲಗರ್ ಜಟ್ಟಾ, ಜೈಸಲ್ಮೇರ್, ಬಾರ್ಮರ್, ಭುಜ್, ಕುರ್ಬೆಟ್, ಲಖಿ ನಲಾ ಸೇರಿದಂತೆ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿ ಮಾಡಿದೆ ಎಂದು ಖುರೇಷಿ ತಿಳಿಸಿದರು.

ಶನಿವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಪಾಕಿಸ್ತಾನ ಹಾರಿಸಿದ ಹಲವು ಡ್ರೋನ್‌ಗಳನ್ನು ಪಂಜಾಬ್‌ನ ಅಮೃತಸರ ಬಳಿ ತಡೆ ಹಿಡಿಯಲಾಗಿದೆ. ಈ ಮೂಲಕ ದಾಳಿ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದರು.

ಪ್ರಮುಖವಾಗಿ ಭಾರತೀಯ ವಾಯುನೆಲೆಗಳನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿತ್ತು. ಆದರೆ ಸೀಮಿತ ಹಾನಿ ಮಾತ್ರ ಸಂಭವಿಸಿದೆ. ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭಾರೀ ಗುಂಡಿನ ದಾಳಿ ನಡೆದ ಬಗ್ಗೆ ವರದಿಯಾಗಿದೆ. ಇದು ಈ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆಯನ್ನು ಸೂಚಿಸುತ್ತದೆ. ಜನವಸತಿ ಪ್ರದೇಶಗಳು ಮತ್ತು ಮಿಲಿಟರಿ ಮೂಲಸೌಕರ್ಯಗಳನ್ನು ಗುರಿಯಾಗಿಸಲು ಪಾಕಿಸ್ತಾನ ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ವಿಮಾನಗಳನ್ನು ಬಳಸಿದೆ ಎಂದು ಖುರೇಷಿ ತಿಳಿಸಿದರು.

ಉಧಮ್‌ಪುರ, ಪಠಾಣ್‌ಕೋಟ್, ಆದಮ್‌ಪುರ, ಭುಜ್‌ನಲ್ಲಿ ಭಾರತೀಯ ವಾಯುನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿ ನಡೆಸಿದೆ ಎಂದು ವಿವರಿಸಿದರು.

ಪಾಕಿಸ್ತಾನದ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸಿವೆ. ಆದರೂ, ಉಧಮ್‌ಪುರ, ಪಠಾಣ್‌ಕೋಟ್, ಆದಮ್‌ಪುರ, ಭುಜ್ ಮತ್ತು ಬಟಿಂಡಾದಲ್ಲಿನ ವಾಯುನೆಲೆಗಳು ಹಾನಿಗೊಳಗಾಗಿವೆ ಮತ್ತು ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ. ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ಬೆಳಗಿನ ಜಾವ 1:40ಕ್ಕೆ ಅತಿ ವೇಗದ ಕ್ಷಿಪಣಿಯನ್ನು ಉಡಾಯಿಸಿತ್ತು. ಶ್ರೀನಗರ, ಅವಂತಿಪೊರ ಮತ್ತು ಉಧಮ್‌ಪುರದಲ್ಲಿನ ವಾಯುನೆಲೆಗಳಲ್ಲಿನ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಪಾಕಿಸ್ತಾನದ ಈ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಸೋಫಿಯಾ ಖುರೇಷಿ ಹೇಳಿದರು.

ಪಾಕಿಸ್ತಾನದ ಕ್ರಮಗಳಿಗೆ ಸೂಕ್ತ ಪ್ರತ್ಯುತ್ತರವಾಗಿ ಭಾರತವು ಅಲ್ಲಿನ ಸುಮಾರು ಆರು ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಮುರಿಯದ್ ವಾಯುನೆಲೆ, ರಫೀಕಿ ವಾಯುನೆಲೆ, ನೂರ್ ಖಾನ್ (ಚಕ್ಲಾಲಾ) ವಾಯುನೆಲೆ, ರಹಿಮ್ಯಾರ್, ಸುಕ್ಕೂರ್ (ಭೋಲಾರಿ) ಮತ್ತು ಚುನಿಯನ್ ವಾಯುನೆಲೆಗಳನ್ನು ಭಾರತ ಗುರಿಯಾಗಿಸಿದೆ ಎಂದು ಖುರೇಷಿ ತಿಳಿಸಿದರು.

ಪತ್ರಿಕಾ ಸಂಪಾದಕರನ್ನು ಭೇಟಿಯಾದ ಸಚಿವ ಅಶ್ವಿನಿ ವೈಷ್ಣವ್: ಭಾರತ-ಪಾಕಿಸ್ತಾನ ಸಂಘರ್ಷ ಕುರಿತು ವಾಸ್ತವ ವರದಿ ಪ್ರಕಟಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...