Homeಮುಖಪುಟಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಮಂಗಳವಾರ (ಮೇ 13) ಜೀವಾವಧಿ ಶಿಕ್ಷೆ ವಿಧಿಸಿದೆ.

ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ತೀರ್ಪನ್ನು ನ್ಯಾಯಾಧೀಶೆ ಆರ್. ನಂದಿನಿ ದೇವಿ ಪ್ರಕಟಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಒಟ್ಟು 85 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

ಪ್ರಕರಣದ ಆರೋಪಿಗಳಾಗಿದ್ದ ಕೆ. ತಿರುನಾವುಕ್ಕರಸು (34), ಎನ್. ರಿಶ್ವಂತ್ ಅಲಿಯಾಸ್ ಶಬರಿರಾಜನ್ (32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹೆರಾನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39) ಮತ್ತು ಎಂ. ಅರುಣ್‌ಕುಮಾರ್ ಅನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ ಬೆಳಿಗ್ಗೆ ಘೋಷಿಸಿತ್ತು. ಮಧ್ಯಾಹ್ನದ ನಂತರ ಶಿಕ್ಷೆ ಪ್ರಕಟಿಸಿದೆ.

2016 ಮತ್ತು 2018ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಪ್ರಕರಣಗಳ ಸಂಬಂಧ ಈ ಅಪರಾಧಿಗಳ ಮೇಲೆ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

“ಅಪರಾಧಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆ ಉಲ್ಲೇಖಿಸಿರುವ ಅವರ ವಕೀಲರು, ಶಿಕ್ಷೆ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಕೋರಿದ್ದಾರೆ. ಆದರೆ, ಗಂಭೀರ ಅಪರಾಧಕ್ಕಾಗಿ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಐಪಿಸಿ ಸೆಕ್ಷನ್ 376 ಡಿ ಅಡಿಯಲ್ಲಿ ಅಪರಾಧಿಗಳಿಗೆ ಗರಿಷ್ಠ 20 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು” ಎಂದು ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಬಿಐ ಪರ ವಾದ ಮಂಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕ ವಿ. ಸುರೇಂದ್ರ ಮೋಹನ್ ಹೇಳಿದ್ದರು.

“ಪ್ರಕರಣದ ವಿಚಾರಣೆ ವೇಳೆ ಒಟ್ಟು ಎಂಟು ಸಂತ್ರಸ್ತರು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಗಳ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಎಲ್ಲಾ 48 ಸಾಕ್ಷಿಗಳು ಕೂಡ ನ್ಯಾಯಾಲಯದ ಮುಂದೆ ಹಾಜರಾಗಿ ಆರೋಪಿಗಳ ವಿರುದ್ಧ ತಮ್ಮ ಸಾಕ್ಷ್ಯ ಹೇಳಿದ್ದರು” ಎಂದು ಸುರೇಂದ್ರ ಮೋಹನ್ ತಿಳಿಸಿದ್ದಾರೆ.

ಫೆಬ್ರವರಿ 24, 2019ರಂದು 19 ವರ್ಷದ ಸಂತ್ರಸ್ತೆಯೊಬ್ಬರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮೇ 21, 2019ರಂದು ಕೊಯಮತ್ತೂರು ಮಹಿಳಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದಾಗ್ಯೂ, ಕಾರ್ಯವಿಧಾನದ ವಿಳಂಬದ ಕಾರಣ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ಈ ಪ್ರಕರಣವನ್ನು ಕೊಯಮತ್ತೂರಿನ ಇಂಟಿಗ್ರೇಟೆಡ್ ಕೋರ್ಟ್ ಕಾಂಪ್ಲೆಕ್ಸ್‌ಗೆ ವರ್ಗಾಯಿಸಿ, ಅಲ್ಲಿ ಪ್ರತ್ಯೇಕ ನ್ಯಾಯಾಲಯ ಕೊಠಡಿಯನ್ನು ಸ್ಥಾಪಿಸುವಂತೆ ನಿರ್ದೇಶಿಸಿತ್ತು.

ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ತೀರ್ಪು ಪ್ರಕಟವಾಗುವ ಸಮಯದಲ್ಲಿ ಕೊಯಮತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿ ಭಾರೀ ಜನಸಮೂಹ ಜಮಾಯಿಸಿತ್ತು. ಅಪರಾಧಿಗಳ ಕುಟುಂಬ ಸದಸ್ಯರು ಕೋರ್ಟ್ ಕ್ಯಾಂಪಸ್‌ನಲ್ಲಿ ಹಾಜರಿದ್ದರು.

ಇದಕ್ಕೂ ಮೊದಲು, ಬೆಳಿಗ್ಗೆ 8:30ಕ್ಕೆ ಸೇಲಂ ಕೇಂದ್ರ ಕಾರಾಗೃಹದಿಂದ ಅಪರಾಧಿಗಳನ್ನು ಸಂಪೂರ್ಣ ಭದ್ರತಾ ವ್ಯವಸ್ಥೆಗಳೊಂದಿಗೆ ನ್ಯಾಯಾಲಯಕ್ಕೆ ಕರೆತರಲಾಯಿತು. ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ಸದಸ್ಯರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿ ತೀರ್ಪನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ತಮಿಳುನಾಡಿನಾಡನ್ನು ಬೆಚ್ಚಿ ಬೀಳಿಸಿದ ಈ ಪ್ರಕರಣವು ಫೆಬ್ರವರಿ 2019ರಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತರನ್ನು ಬೆದರಿಸಲು ಅಶ್ಲೀಲ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದೆ.

ಆರಂಭದಲ್ಲಿ ಪೊಲ್ಲಾಚಿ ಪೂರ್ವ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣವನ್ನು ಮಾರ್ಚ್ 12, 2019 ರಂದು ಸಿಬಿ-ಸಿಐಡಿಗೆ ಹಸ್ತಾಂತರಿಸಲಾಗಿತ್ತು. ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಏಪ್ರಿಲ್ 25, 2019ರಂದು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ತನಿಖೆ ವೇಳೆ, ಅಪರಾಧಿಗಳ ಗುಂಪಿನ ಯಾರಾದರು ಒಬ್ಬ ವ್ಯಕ್ತಿ ಕಾಲೇಜು ಹುಡುಗಿ ಅಥವಾ ಮಹಿಳೆಯನ್ನು ಪ್ರೀತಿಯ ನಾಟಕವಾಡಿ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಅವರನ್ನು ಏಕಾಂತದ ಸ್ಥಳಗಳಿಗೆ ಕರೆಸಿ ಅಲ್ಲಿ ಲೈಂಗಿಕ ದೌರ್ಜನ್ಯಕ್ಕೆ ನಡೆಸುತ್ತಿದ್ದ ಮತ್ತು ಹಲ್ಲೆ ಮಾಡುತ್ತಿದ್ದ. ಈ ವೇಳೆ ಕೃತ್ಯವನ್ನು ರಹಸ್ಯವಾಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಗುಂಪಿನ ಸದಸ್ಯರು, ನಂತರ ಆ ವಿಡಿಯೋ ಬಳಸಿಕೊಂಡು ಸಂತ್ರಸ್ತರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬುವುದು ಬಯಲಾಗಿತ್ತು.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...