Homeಮುಖಪುಟಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

ಭಾರತದ ಪ್ರಮುಖ ಸ್ಥಳಗಳ ಮೇಲೆ 15 ಲಕ್ಷ ಸೈಬರ್ ದಾಳಿ ನಡೆಸಿದ ಪಾಕಿಸ್ತಾನಿ ಹ್ಯಾಕರ್‌ಗಳು!

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ದೇಶಾದ್ಯಂತ ಪ್ರಮುಖ ವೆಬ್‌ಸೈಟ್‌ಗಳು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಗುರಿಯಾಗಿಸಿಕೊಂಡು 15 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿಗಳನ್ನು ನಡೆಸಿದ ಏಳು ಅಡ್ವಾನ್ಸ್ಡ್ ಪರ್ಸಿಸ್ಟೆಂಟ್ ಥ್ರೆಟ್ (ಎಪಿಟಿ) ಗುಂಪುಗಳನ್ನು ಭಾರತೀಯ ಸೈಬರ್ ಏಜೆನ್ಸಿಗಳು ಗುರುತಿಸಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾರತದ ಪ್ರಮುಖ ಸ್ಥಳಗಳ

ಕೆಲವು ಪಾಕಿಸ್ತಾನಿ ಗುಪ್ತಚರ ಕಾರ್ಯಾಚರಣೆಗಳು (ಪಿಐಒಗಳು) ‘ಡ್ಯಾನ್ಸ್ ಆಫ್ ಹಿಲರಿ’ ಮತ್ತು ‘ಕಾಲ್ಸ್ ಫ್ರಮ್ ಮಿಲಿಟರಿ’ ಎಂಬ ಸಂಕೇತನಾಮ ಹೊಂದಿರುವ ಮಾಲ್‌ವೇರ್‌ಗಳ ಮೂಲಕ ಭಾರತದಲ್ಲಿ ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರು ಬಳಸುವ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮಧ್ಯಪ್ರಾಚ್ಯ ಪ್ರದೇಶದಿಂದ ಈ ದಾಳಿಗಳು ನಡೆದಿರುವುದರಿಂದ 15 ಲಕ್ಷ ಸೈಬರ್ ದಾಳಿ ಪ್ರಯತ್ನಗಳಲ್ಲಿ ಕೇವಲ 150 ಮಾತ್ರ ಯಶಸ್ವಿಯಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

“ಭಾರತ-ಪಾಕಿಸ್ತಾನ ಎರಡೂ ಕಡೆಯಿಂದ ಯಾವುದೇ ಗುಂಡಿನ ದಾಳಿ ನಡೆಸದಿರುವ ಒಪ್ಪಂದಕ್ಕೆ ಬಂದ ನಂತರ ಭಾರತದಲ್ಲಿ ಸರ್ಕಾರಿ ವೆಬ್‌ಸೈಟ್‌ಗಳ ಮೇಲಿನ ಸೈಬರ್ ದಾಳಿಗಳು ಕಡಿಮೆಯಾಗಿವೆ ಎಂದು ನಮ್ಮ ತನಿಖೆಯಲ್ಲಿ ಕಂಡುಬಂದಿದೆ. ಅದಾಗ್ಯೂ, ಸಂಪೂರ್ಣವಾಗಿ ನಿಂತಿಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಇಂಡೋನೇಷ್ಯಾ, ಮೊರಾಕೊ ಮತ್ತು ಮಧ್ಯಪ್ರಾಚ್ಯ ದೇಶಗಳಿಂದ ಈ ದಾಳಿಗಳು ಮುಂದುವರೆದಿವೆ.” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಾಳಿಯ ಸ್ವರೂಪದ ವಿವರಗಳನ್ನು ನೀಡಿದ ಅಧಿಕಾರಿ, ದಾಳಿಕೋರರು ಮಾಲ್‌ವೇರ್ ಅಭಿಯಾನಗಳನ್ನು ಬಳಸಿದ್ದಾರೆ. ಇದರಲ್ಲಿ ‘ಡಿಸ್ಟ್ರಿಬ್ಯೂಟೆಡ್ ಡಿನೈಯಲ್-ಆಫ್-ಸರ್ವಿಸ್ (DDoS) ದಾಳಿಗಳು’ ಮತ್ತು ‘GPS ವಂಚನೆ’ ಸೇರಿವೆ ಎಂದು ಅವರು ಹೇಳಿದ್ದಾರೆ.

ಈ ದಾಳಿಯ ಮೂಲಕ ಭಾರತೀಯ ವೆಬ್‌ಸೈಟ್‌ಗಳ ವಿರೂಪಗೊಳಿಸುವಿಕೆಯ ಪ್ರಕರಣಗಳು ಸಹ ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಅಂತಹ ಅನೇಕ ದಾಳಿಗಳನ್ನು ತಡೆಯಲಾಗಿದ್ದು, ದೇಶದ ನಿರ್ಣಾಯಕ ಮೂಲಸೌಕರ್ಯವನ್ನು ಉಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರಮುಖ ಸ್ಥಳಗಳ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಮುರ್ಷಿದಾಬಾದ್ ಹಿಂಸಾಚಾರ | ಎಸ್‌ಐಟಿ, ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...