Homeಅಂತರಾಷ್ಟ್ರೀಯ'ನಾವು ಪಾಕಿಸ್ತಾನದ ಭಾಗವಲ್ಲ': ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

- Advertisement -
- Advertisement -

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’, ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. “ನಾವು ಪಾಕಿಸ್ತಾನದ ಭಾಗವಲ್ಲ , ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ ಮೀರ್ ಯಾರ್ ಬಲೂಚ್ ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೇ 14ರಂದು ಸರಣಿ ಪೋಸ್ಟ್‌ಗಳನ್ನು ಹಾಕಿರುವ ಮೀರ್ ಯಾರ್” ಪಾಕಿಸ್ತಾನ ಸೈನ್ಯ ಬಲೂಚ್ ನೆಲವನ್ನು ತೊರೆದಾಗ ಬಲೂಚಿಸ್ತಾನದ ಸ್ವಾತಂತ್ರ್ಯದ ದಿನಾಂಕವನ್ನು ಘೋಷಿಸಲಾಗುತ್ತದೆಯೇ? ಎಂದು ಒಬ್ಬರು ಖ್ಯಾತ ಪತ್ರಕರ್ತರು ಕೇಳಿದರು. ಅದಕ್ಕೆ ನಾನು “ಬ್ರಿಟಿಷರು ಬಲೂಚಿಸ್ತಾನ್ ಮತ್ತು ಉಪಖಂಡವನ್ನು ತೊರೆದಾಗಲೇ, ಅಂದರೆ ಆಗಸ್ಟ್ 11, 1947 ರಂದು ನಾವು ಸ್ವಾತಂತ್ರ್ಯ ಘೋಷಿಸಿಕೊಂಡಿದ್ದೇವೆ ಎಂಬುವುದಾಗಿ ಉತ್ತರಿಸಿದ್ದೇನೆ” ಎಂದು ಹೇಳಿದ್ದಾರೆ.

“ಆತ್ಮೀಯ ಭಾರತೀಯರೇ, ದೇಶಭಕ್ತ ಮಾಧ್ಯಮಗಳೇ, ಯೂಟ್ಯೂಬ್ ಒಡನಾಡಿಗಳೇ, ಭಾರತವನ್ನು ರಕ್ಷಿಸಲು ಹೋರಾಡುವ ಬುದ್ಧಿಜೀವಿಗಳೇ, ಬಲೂಚ್‌ಗಳನ್ನು ‘ಪಾಕಿಸ್ತಾನದ ಸ್ವಂತ ಜನರು’ ಎಂದು ಕರೆಯಬೇಡಿ. ನಾವು ಪಾಕಿಸ್ತಾನಿಗಳಲ್ಲ, ನಾವು ಬಲೂಚಿಸ್ತಾನಿಗಳು. ಪಾಕಿಸ್ತಾನದ ಸ್ವಂತ ಜನರು ಪಂಜಾಬಿಗಳು, ಅವರು ಎಂದಿಗೂ ವಾಯು ಬಾಂಬ್ ದಾಳಿ, ಬಲವಂತದ ಸ್ಥಳಾಂತರ ಮತ್ತು ನರಮೇಧವನ್ನು ಎದುರಿಸಿಲ್ಲ” ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಉಂಟಾದಾಗ ಬಲೂಚಿಸ್ತಾನ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿತ್ತು.

“ಬಲೂಚಿಸ್ತಾನ ಪ್ರಜಾಸತ್ತಾತ್ಮಕ ಗಣರಾಜ್ಯದ ಜನರು ಭಾರತದ ಜನರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ” ಎಂದು ಆ ವೇಳೆ ಮೀರ್ ಯಾರ್ ಪೋಸ್ಟ್ ಹಾಕಿದ್ದರು.

“ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ. ಆದರೆ, ಬಲೂಚಿಸ್ತಾನ ಮತ್ತು ಅದರ ಜನರು ಭಾರತ ಸರ್ಕಾರಕವನ್ನು ಬೆಂಬಲಿಸುತ್ತಿದ್ದಾರೆ. ಪ್ರೀತಿಯ ನರೇಂದ್ರ ಮೋದಿಯವರೇ ನೀವು ಒಬ್ಬಂಟಿಯಲ್ಲ, ನಿಮಗೆ 60 ಮಿಲಿಯನ್ ಬಲೂಚ್ ದೇಶಭಕ್ತರ ಬೆಂಬಲವಿದೆ” ಎಂದು ಬರೆದುಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಪೋಸ್ಟ್ ಟ್ಯಾಗ್ ಮಾಡಿದ್ದರು.

ಬಲೂಚಿಸ್ತಾನದ ಜನರು ಸುದೀರ್ಘ ಸಮಯದಿಂದ ಸ್ವತಂತ್ರ ರಾಷ್ಟ್ರದ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿದ್ದಾರೆ. ಇದಕ್ಕಾಗಿ ಬಂಡಾಯದ ಪಡೆಯನ್ನೂ ಕಟ್ಟಿದ್ದಾರೆ. ಪಾಕಿಸ್ತಾನದ ವಿರುದ್ದ ಅವರು ಭಾರತವನ್ನು ಬೆಂಬಲಿಸುತ್ತಿದ್ದಾರೆ.

ಈ ಎಲ್ಲದರ ನಡುವೆ ಅಲ್ಲಿ ಮಾನವ ಹಕ್ಕುಗಳ ತೀವ್ರ ಉಲ್ಲಂಘನೆಯ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ. ಜನರನ್ನು ಬಲವಂತದಿಂದ ಸ್ಥಳಾಂತರಿಸುವುದು, ಹತ್ಯೆಗಳು ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ನಿಗ್ರಹಿಸುವುದು ಇವುಗಳಲ್ಲಿ ಸೇರಿವೆ. ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿ ಗುಂಪುಗಳು ಇದರಲ್ಲಿ ಭಾಗಿಯಾಗಿರುವ ಆರೋಪಗಳನ್ನು ಎದುರಿಸುತ್ತಿವೆ.

ನಾಗರಿಕರು ದೀರ್ಘಕಾಲದ ಸಂಘರ್ಷದ ಹೊರೆಯನ್ನು ಇನ್ನೂ ಹೊರುತ್ತಿದ್ದಾರೆ. ಸೀಮಿತ ಮಾಧ್ಯಮ ಪ್ರಸಾರ ಮತ್ತು ಕಾನೂನು ಸಹಾಯದ ಕೊರತೆಯನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ.

‘ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ವ್ಯಾಪಾರ ಅಸ್ತ್ರ ಬಳಸಿದೆ’: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...