Homeಮುಖಪುಟಮಣಿಪುರ: ಗುಂಡಿನ ಚಕಮಕಿಯಲ್ಲಿ 10 ಮಿಲಿಟೆಂಟ್ ಗಳು ಸಾವು

ಮಣಿಪುರ: ಗುಂಡಿನ ಚಕಮಕಿಯಲ್ಲಿ 10 ಮಿಲಿಟೆಂಟ್ ಗಳು ಸಾವು

- Advertisement -
- Advertisement -

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್‌ನ ಒಂದು ಘಟಕವು ಕನಿಷ್ಠ 10 ಮಂದಿ ಮಿಲಿಟೆಂಟ್ ಗಳನ್ನು ಹೊಡೆದುರುಳಿಸಲಾಗಿದೆ. ಅವರಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಭಾರತೀಯ ಸೇನೆ ತಿಳಿಸಿದೆ.

ಇಂಡೋ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂಡೆಲ್ ಜಿಲ್ಲೆಯ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಮಿಲಿಟೆಂಟ್ ಗಳ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಘಟಕವು ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೇನೆಯ ಪೂರ್ವ ಕಮಾಂಡ್ ಎಕ್ಸ್‌ನಲ್ಲಿರುವ ಪೋಸ್ಟ್‌ನಲ್ಲಿ ತಿಳಿಸಿದೆ.

ಮಿಲಿಟೆಂಟ್ ಗಳು ಸೈನಿಕರ ಮೇಲೆ ಗುಂಡು ಹಾರಿಸಿದರು, ಅದಕ್ಕೆ ಅವರು ಪ್ರತಿದಾಳಿ ನಡೆಸಿದರು ಮತ್ತು ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಕೊಲ್ಲಲ್ಪಟ್ಟರು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೋಸ್ಟ್ ತಿಳಿಸಿದೆ.

ಸೇನೆಯ ಪೂರ್ವ ಕಮಾಂಡ್ ಎಕ್ಸ್‌ ಪೋಸ್ಟ್‌ನಲ್ಲಿ, “ಇಂಡೋ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂಡೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಕಾರ್ಯಕರ್ತರ ಚಲನವಲನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, ಅಸ್ಸಾಂ ರೈಫಲ್ಸ್ ಘಟಕವು ಮೇ 14ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು” ಎಂದು ಹೇಳಿದೆ.

“ಕಾರ್ಯಾಚರಣೆಯ ಸಮಯದಲ್ಲಿ ಶಂಕಿತ ಕಾರ್ಯಕರ್ತರು ಸೈನಿಕರ ಮೇಲೆ ಗುಂಡು ಹಾರಿಸಿದರು. ಅವರು ತ್ವರಿತವಾಗಿ ಪ್ರತಿಕ್ರಿಯಿಸಿದರು. ನಂತರದ ಗುಂಡಿನ ಚಕಮಕಿಯಲ್ಲಿ 10 ಮಂದಿ ಮಿಲಿಟೆಂಟ್ ಗುಂಪಿನ ಕಾರ್ಯಕರ್ತರನ್ನು ಹೊಡೆದುರುಳಿಸಲಾಯಿತು ಮತ್ತು ಗಣನೀಯ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ” ಎಂದು ಅದು ಹೇಳಿದೆ.

ಮಣಿಪುರದಾದ್ಯಂತ ಮಿಲಿಟೆಂಟ್ ಸಂಘಟನೆಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಕಾರ್ಯಾಚರಣೆಯ ಮಧ್ಯೆ ಈ ಕಾರ್ಯಾಚರಣೆ ನಡೆದಿದೆ. ಕಳೆದ ವಾರ ಮೇ 10ರಂದು ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕನಿಷ್ಠ 13 ಮಿಲಿಟೆಂಟ್ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ನಿಷೇಧಿತ ದಂಗೆಕೋರ ಗುಂಪುಗಳ “ಸಕ್ರಿಯ” ಸದಸ್ಯರಾಗಿದ್ದರು ಮತ್ತು ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 10ರಂದು ಬಂಧಿಸಲ್ಪಟ್ಟವರಲ್ಲಿ ಕಾಂಗ್ಲೈ ಪಾಕ್ ಕಮ್ಯುನಿಸ್ಟ್ ಪಾರ್ಟಿ – ಪೀಪಲ್ಸ್ ವಾರ್ ಗ್ರೂಪ್ [ಕೆಸಿಪಿ (ಪಿಡಬ್ಲ್ಯೂಜಿ)] ಬಣದ ಇಬ್ಬರು ಸಕ್ರಿಯ ಸದಸ್ಯರಾಗಿದ್ದಾರೆ. ಕಿರಣ್ ಮೈತೇಯಿ ಅಲಿಯಾಸ್ ಬೊಯಿನಾವೊ (29) ಮತ್ತು ಇನೋಚಾ ಸಿಂಗ್ (45) ಸೇರಿದ್ದಾರೆ, ಇಬ್ಬರೂ ಇಂಫಾಲ್ ಪಶ್ಚಿಮ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...