Homeಮುಖಪುಟ70 ವರ್ಷದ ಬಿಜೆಪಿ ನಾಯಕ ನೃತ್ಯಗಾತಿಯೊಂದಿಗೆ ಇರುವ ಅಶ್ಲೀಲ ವೀಡಿಯೊ ವೈರಲ್: ಹುದ್ದೆಯಿಂದ ವಜಾ

70 ವರ್ಷದ ಬಿಜೆಪಿ ನಾಯಕ ನೃತ್ಯಗಾತಿಯೊಂದಿಗೆ ಇರುವ ಅಶ್ಲೀಲ ವೀಡಿಯೊ ವೈರಲ್: ಹುದ್ದೆಯಿಂದ ವಜಾ

- Advertisement -
- Advertisement -

ಬಲ್ಲಿಯಾ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನರ್ತಕಿಯೊಬ್ಬಳೊಂದಿಗೆ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡು ತ್ವರಿತವಾಗಿ ವೈರಲ್ ಆದ ನಂತರ ಭಾರತೀಯ ಜನತಾ ಪಕ್ಷವು ಹಿರಿಯ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬನ್ಸ್ ದಿಹ್ ದ ನಾಯಕ ಬಬ್ಬನ್ ಸಿಂಗ್ ರಘುವಂಶಿ ಅವರನ್ನು ತಮ್ಮ ಹುದ್ದೆಯಿಂದ ತೆಗೆದುಹಾಕಿದೆ.

ಮದುವೆ ಸಂಭ್ರಮಾಚರಣೆಯೊಂದರಂತೆ ಕಂಡುಬರುವ ಈ ಕ್ಲಿಪ್‌ನಲ್ಲಿ, ಬನ್ಸ್‌ದಿಹ್ ವಿಧಾನಸಭಾ ಕ್ಷೇತ್ರದ ಮಾಜಿ ಬಿಜೆಪಿ ಅಭ್ಯರ್ಥಿ ರಘುವಂಶಿ ಅವರು ಮಹಿಳಾ ನೃತ್ಯಗಾರ್ತಿಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಅಸಭ್ಯ ವರ್ತನೆಯಲ್ಲಿ ತೊಡಗಿರುವುದನ್ನು ತೋರಿಸಲಾಗಿದೆ. ಮಹಿಳೆ ತನ್ನ ತೊಡೆಯ ಮೇಲೆ ಕುಳಿತಿರುವಾಗ ಅವರು ಆ ಮಹಿಳೆಯನ್ನು ಮುಟ್ಟುತ್ತಿರುವುದು ಕಂಡುಬಂದಿದೆ.

ರಾಸ್ರಾದ ಕಿಸಾನ್ ಸಹಕಾರಿ ಗಿರಣಿಯಲ್ಲಿ ಉಪಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದ 70 ವರ್ಷದ ರಘುವಂಶಿ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಾಕರಿಸಿದ್ದಾರೆ. ಈ ವೀಡಿಯೊ ತಿರುಚಲ್ಪಟ್ಟಿದೆ ಮತ್ತು ಪಕ್ಷದೊಳಗಿನ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಇದು ನನ್ನ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶಪೂರ್ವಕ ಪಿತೂರಿ. ಈ ವಿಡಿಯೋ ಕಟ್ಟುಕಥೆ. ಇದರ ಹಿಂದೆ ಶಾಸಕ ಕೇತಕೀ ಸಿಂಗ್ ಅವರ ಕುಟುಂಬದ ಸದಸ್ಯರಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಬನ್ಸ್‌ದಿಹ್‌ನ ಪ್ರಸ್ತುತ ಬಿಜೆಪಿ ಶಾಸಕ ಕೇತಕೀ ಸಿಂಗ್ ಅವರ ಕುಟುಂಬವು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಬಿಹಾರದ ದುರ್ಗಿಪುರ ಗ್ರಾಮದ ಮುಖ್ಯಸ್ಥರ ವಿವಾಹ ಮೆರವಣಿಗೆಯ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದರು. ಈ ಕಾರ್ಯಕ್ರಮದಲ್ಲಿ ಸಿಂಗ್ ಅವರ ಕುಟುಂಬವೂ ಭಾಗವಹಿಸಿತ್ತು ಎಂದು ಅವರು ಹೇಳಿದ್ದಾರೆ. “ನನ್ನನ್ನು ಕೆಣಕಲು ಅವರು ಇದನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾರೆ. ನಾನು ಎಂದಿಗೂ ಅಂತಹ ಕೆಲಸಗಳನ್ನು ಮಾಡಿಲ್ಲ. ನಾನು ಈಗ ವೃದ್ಧನಾಗಿದ್ದೇನೆ” ಎಂದು ರಘುವಂಶಿ ಹೇಳಿದರು.

ಏತನ್ಮಧ್ಯೆ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಆಜಾದ್ ಅಧಿಕಾರ್ ಸೇನೆಯ ಅಧ್ಯಕ್ಷ ಅಮಿತಾಭ್ ಠಾಕೂರ್ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಬಲ್ಲಿಯಾ ಪೊಲೀಸ್ ವರಿಷ್ಠಾಧಿಕಾರಿಗೆ ಬರೆದ ಪತ್ರದಲ್ಲಿ, ಠಾಕೂರ್  ಅವರು, ಈ ದೃಶ್ಯಗಳನ್ನು “ಅತ್ಯಂತ ಅಶ್ಲೀಲ” ಮತ್ತು “ನಾಚಿಕೆಗೇಡಿನ” ಎಂದು ಕರೆದಿದ್ದಾರೆ ಮತ್ತು ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ತನಿಖೆಗೆ ಆದೇಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದರು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಬಲ್ಲಿಯಾ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ, ಪಕ್ಷವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಾಯಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗುರುವಾರ ಪಿಟಿಐಗೆ ತಿಳಿಸಿದ್ದಾರೆ.

ಪಕ್ಷದ ಹಿರಿಯ ನಾಯಕರಿಗೆ ಈ ವಿಷಯದ ಬಗ್ಗೆ ತಿಳಿಸಲಾಗಿದೆ ಮತ್ತು ಸೂಕ್ತ ಪರಿಗಣನೆಯ ನಂತರ ರಘುವಂಶಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಮದುವೆಗೆ ಒಪ್ಪಿಗೆ: ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...