ಅಜೀಂ ಪ್ರೇಮ್‌ಜಿ ಫೌಂಡೇಶನ್ (ಎಪಿಎಫ್) 2024-25ರ ಶೈಕ್ಷಣಿಕ ವರ್ಷದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಲಾಗಿದ್ದ ಬಾಲಕಿಯರ ವಿದ್ಯಾರ್ಥಿ ವೇತನವನ್ನು ಈಗ ಕರ್ನಾಟಕ ಸೇರಿದಂತೆ 18 ರಾಜ್ಯಗಳಿಗೆ 2025-26ರ ಶೈಕ್ಷಣಿಕ ವರ್ಷಕ್ಕೆ ವಿಸ್ತರಿಸಲಾಗಿದೆ.
ಸರ್ಕಾರಿ ಶಾಲೆ ಅಥವಾ ಕಾಲೇಜಿನಿಂದ 10 ಮತ್ತು 12 ನೇ ತರಗತಿಗಳನ್ನು ಪೂರ್ಣಗೊಳಿಸಿದ ಮತ್ತು ಉತ್ತಮ ಉನ್ನತ ಶಿಕ್ಷಣ ಸಂಸ್ಥೆ, ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನಲ್ಲಿ ಪ್ರವೇಶ ಪಡೆದ ಹುಡುಗಿಯರು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಪೌಂಡೇಷನ್‌ನಿಂದ ಈ ವರ್ಷ 2.5 ಲಕ್ಷ ಹುಡುಗಿಯರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದ್ದು, ವಾರ್ಷಿಕ ವಿದ್ಯಾರ್ಥಿವೇತನದ ಮೊತ್ತವು ವರ್ಷಕ್ಕೆ 750 ಕೋಟಿ ರೂ.ಗಳಾಗಿದ್ದು, ಮುಂದಿನ ಮೂರು ವರ್ಷಗಳವರೆಗೆ ಅದರ ಮೊತ್ತ ಸುಮಾರು 2,250 ಕೋಟಿ ರೂ.ಗಳಷ್ಟಾಗುತ್ತದೆ ಎಂದು ತಿಳಿಸಿದೆ.
ವಿದ್ಯಾರ್ಥಿ ವೇತನವು ಆನ್‌ಲೈನ್ ಆಧಾರಿತವಾಗಿರುವುದರಿಂದ, ಪ್ರತಿಷ್ಠಾನವು ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಪೋರ್ಟಲ್ ಅನ್ನು ತೆರೆಯುತ್ತದೆ. ವಿದ್ಯಾರ್ಥಿ ವೇತನ ವಿಸ್ತರಣೆಯನ್ನು ಘೋಷಿಸಿರುವ ಫೌಂಡೇಶನ್‌ನ ಸಿಇಒ ಅನುರಾಗ್ ಬೆಹರ್, “ಇದು ಅರ್ಹತೆ ಆಧಾರಿತ ವಿದ್ಯಾರ್ಥಿವೇತನವಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳ ಹುಡುಗಿಯರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಇದು ಪ್ರೋತ್ಸಾಹಿಸುತ್ತದೆ. ಒಂದು ವೇಳೆ ಫಲಾನುಭವಿ ಕೋರ್ಸ್‌ನಿಂದ ಹೊರಗುಳಿದರೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತದೆ.” ಎಂದು ಹೇಳಿದ್ದಾರೆ
ಪ್ರಾಯೋಗಿಕ ಯೋಜನೆಯನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿತ್ತು.
ಈಗ, ವಿದ್ಯಾರ್ಥಿವೇತನವನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರ, ಯುಪಿ ಮತ್ತು ಉತ್ತರಾಖಂಡಗಳಿಗೆ ವಿಸ್ತರಿಸಲಾಗುವುದು.
ಪ್ರಾಯೋಗಿಕ ಅವಧಿಯಲ್ಲಿ, ಅಜೀಂ ಪ್ರೇಮ್‌ಜಿ ಫೌಂಡೇಶನ್ 1.10 ಲಕ್ಷ ಅರ್ಜಿಗಳನ್ನು ಸ್ವೀಕರಿಸಿತು ಮತ್ತು 25,000 ಅರ್ಹರು ಎಂದು ಕಂಡುಬಂದಿದೆ. ಆ ಹುಡುಗಿಯರಿಗಾಗಿ ಈ ವರ್ಷ 75 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಪೌಂಡೇಷನ್ ಒಪ್ಪಿಕೊಂಡಿದೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ
ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ


We are proud that our people citizens of Karnataka coastal districts are brave and they are ready to sacrifice anything for the general public.