Homeಮುಖಪುಟಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್

ಪಾಕಿಸ್ತಾನಕ್ಕೆ ಐಎಂಎಫ್ ಸಾಲ | ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದಂತೆ ಎಂದ ರಾಜನಾಥ್ ಸಿಂಗ್

- Advertisement -
- Advertisement -

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯಿಂದ ಪಾಕಿಸ್ತಾನಕ್ಕೆ ನೀಡಲಾಗುವ ಯಾವುದೇ ಹಣಕಾಸಿನ ನೆರವು “ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ” ಮತ್ತು ಅದನ್ನು ಮರುಪರಿಶೀಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. ಐಎಂಎಫ್‌ ಮೇ 9 ರಂದು ಪಾಕಿಸ್ತಾನಕ್ಕೆ ತನ್ನ ಬೇಲ್‌ಔಟ್ ಪ್ಯಾಕೇಜ್‌ನ ಭಾಗವಾಗಿ ಅನುಮೋದಿಸಿದ ಹೊಸ $1 ಬಿಲಿಯನ್ ಹಣಕಾಸು ನೆರವು ಕಾರ್ಯಕ್ರಮದ ಬಗ್ಗೆ ಉಲ್ಲೇಖಿ ಅವರು ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನಕ್ಕೆ ಐಎಂಎಫ್ ಸಾಲ

ಐಎಂಎಫ್‌ನ ನಿಧಿಯ ಬಹುಪಾಲು ಭಾಗವನ್ನು ಪಾಕಿಸ್ತಾನ ದುರುಪಯೋಗಪಡಿಸಿಕೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೊಂಡಿದ್ದಾರೆ.

“ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ ಪಡೆದ $1 ಬಿಲಿಯನ್ ನಿಧಿಯ ಹೆಚ್ಚಿನ ಭಾಗವನ್ನು ಪಾಕಿಸ್ತಾನ ಭಯೋತ್ಪಾದಕ ಮೂಲಸೌಕರ್ಯಕ್ಕಾಗಿ ಖರ್ಚು ಮಾಡುತ್ತದೆ ಎಂದು ನಾನು ನಂಬುತ್ತೇನೆ…” ಎಂದು ಭುಜ್‌ನ ವಾಯುಪಡೆಯ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದ್ದಾರೆ.

“ಇದನ್ನು ಅಂತರರಾಷ್ಟ್ರೀಯ ಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ [ಭಯೋತ್ಪಾದನೆಗೆ] ಪರೋಕ್ಷ ಹಣಕಾಸು ಎಂದು ಪರಿಗಣಿಸಲಾಗುವುದಿಲ್ಲವೇ?. ಈ ಪ್ರಶ್ನೆಯನ್ನು ನಾನು ಜಗತ್ತಿಗೆ ಕೇಳಲು ಬಯಸುತ್ತೇನೆ.” ಎಂದು ಅವರು ಹೇಳಿದ್ದಾರೆ.

“ಇಂದು ಪಾಕಿಸ್ತಾನಕ್ಕೆ ನೀಡುವ ಯಾವುದೇ ಜಾಗತಿಕ ನೆರವು ಅಥವಾ ನಿಧಿ ಭಯೋತ್ಪಾದನಾ ನಿಧಿಗಿಂತ ಕಡಿಮೆಯಿಲ್ಲ ಎಂದು ನಾನು ನಂಬುತ್ತೇನೆ. ಪಾಕಿಸ್ತಾನಕ್ಕೆ ಐಎಂಎಫ್‌ ನೀಡಿರುವ $1 ಬಿಲಿಯನ್ ಸಹಾಯವನ್ನು ಮರುಪರಿಶೀಲಿಸಬೇಕೆಂದು ಭಾರತವು ಬಯಸುತ್ತದೆ.” ಎಂದು ಅವರು ಹೇಳಿದ್ದಾರೆ.

ಭಾರತವು ಐಎಂಎಫ್‌ಗೆ ನೀಡುವ ಹಣವನ್ನು ಪಾಕಿಸ್ತಾನ ಅಥವಾ ಯಾವುದೇ ದೇಶದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಸೃಷ್ಟಿಸಲು ಬಳಸುವುದನ್ನು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಹಣಕಾಸನ್ನು ಪಾಕಿಸ್ತಾನವು ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ಭಾರತವು ಮೇ 9 ರಂದು ಕಳವಳ ವ್ಯಕ್ತಪಡಿಸಿತ್ತು.

ಮೇ 10 ರಂದು, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಐಎಂಎಫ್ ನಿಧಿಯು ಭಾರತದೊಂದಿಗಿನ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ ಎಂದು ಹೇಳಿದ್ದರು. ಪಾಕಿಸ್ತಾನಕ್ಕೆ ಐಎಂಎಫ್ ಸಾಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...