Homeಮುಖಪುಟಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಮಧ್ಯಪ್ರದೇಶದ ಆದಿವಾಸಿ ಯುವಕನ ಕಸ್ಟಡಿ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 25 ವರ್ಷದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪದ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಗುರುವಾರ ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮಧ್ಯಪ್ರದೇಶದ ಆದಿವಾಸಿ 

ಕಳ್ಳತನದ ಆರೋಪ ಹೊರಿಸಿ ದೇವ ಪಾರ್ಧಿ ಮತ್ತು ಅವರ ಚಿಕ್ಕಪ್ಪ ಗಂಗಾರಾಮ್ ಪಾರ್ಧಿ ಅವರನ್ನು ಪೊಲೀಸರು ಬಂಧಿಸಿದ್ದರು. ಅದೇ ದಿನ ರಾತ್ರಿ ದೇವ ಪಾರ್ಧಿ ಅವರ ಕುಟುಂಬಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಮೃತ ದೇವ ಪಾರ್ಧಿ ಅವರಿಗೆ ಜುಲೈನಲ್ಲಿ ವಿವಾಹ ನಿಶ್ಚಯವಾಗಿತ್ತು.

ಪೊಲೀಸ್ ಕಸ್ಟಡಿಯಲ್ಲಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ಹೇಳಿಕೊಂಡರೂ, ಕುಟುಂಬವು ಪೊಲೀಸರ ವಿವರಣೆಯನ್ನು ತಿರಸ್ಕರಿಸಿದೆ. ಪೊಲೀಸರಿಂದ ಬಂಧನಕ್ಕೆ ಒಳಗಾದ ಇಬ್ಬರನ್ನೂ ಕಸ್ಟಡಿಯಲ್ಲಿ ಚಿತ್ರಹಿಂಸೆಗೆ ಒಳಪಡಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ.

ಗುರುವಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ವಿಭಾಗೀಯ ಪೀಠವು ರಾಜ್ಯ ಪೊಲೀಸರು ತನಿಖೆಯನ್ನು “ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ” ನಡೆಸುತ್ತಿಲ್ಲ ಎಂದು ಹೇಳಿದೆ.

ತನಿಖೆಯನ್ನು ರಾಜ್ಯ ಪೊಲೀಸರ ಬಳಿ ಬಿಟ್ಟರೆ ಆರೋಪಿಗಳು ಪ್ರಾಸಿಕ್ಯೂಷನ್ ಅನ್ನು “ಪ್ರಭಾವಿಸುತ್ತಾರೆ”, ಅವರು “ತಮ್ಮದೇ ಆದ ಸಹ ಪೊಲೀಸರನ್ನು ರಕ್ಷಿಸುತ್ತಿದ್ದಾರೆ” ಎಂದು ಪೀಠ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ದೇವ ಪಾರ್ಧಿಯವರ “ಕಸ್ಟಡಿ ಸಾವಿನ ಬಗ್ಗೆ ನ್ಯಾಯಯುತ, ಪಾರದರ್ಶಕ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ” ಮತ್ತು ದೂರು ದಾಖಲಿಸಲು ತಕ್ಷಣವೇ ನಿರ್ದೇಶಿಸುವಂತೆ ನ್ಯಾಯಾಲಯ ಸಿಬಿಐಗೆ ಸೂಚಿಸಿತು.

ಪೊಲೀಸ್ ಅಧಿಕಾರಿಗಳು ಕಸ್ಟಡಿ ಸಾವಿಗೆ ಕಾರಣರೆಂದು ಕಂಡುಬಂದರೆ, ಅವರನ್ನು ಒಂದು ತಿಂಗಳೊಳಗೆ ಬಂಧಿಸಬೇಕು ಎಂದು ಪೀಠ ಇದೇ ವೇಳೆ ಆದೇಶಿಸಿದೆ. ಆರೋಪಿಗಳನ್ನು ಬಂಧಿಸಿದ 90 ದಿನಗಳ ಒಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆಯೂ ಅದು ಸಿಬಿಐಗೆ ನಿರ್ದೇಶಿಸಿದೆ.

ಏಪ್ರಿಲ್‌ನಲ್ಲಿ ದೇವ ಪಾರ್ಧಿಯವರ ಸಾವಿನ ಕಾರಣದ ಬಗ್ಗೆ ಸುಪ್ರೀಂಕೋರ್ಟ್ ಅನುಮಾನಗಳನ್ನು ವ್ಯಕ್ತಪಡಿಸಿತ್ತು ಮತ್ತು ಮಧ್ಯಪ್ರದೇಶ ಪೊಲೀಸರು ತಮ್ಮ ಅಧಿಕಾರಿಗಳನ್ನು “ರಕ್ಷಿಸುತ್ತಿದ್ದಾರೆ” ಎಂದು ಟೀಕಿಸಿತ್ತು. ಮಧ್ಯಪ್ರದೇಶದ ಆದಿವಾಸಿ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಆಕ್ಷೇಪಾರ್ಹ’ ಪೋಸ್ಟ್‌ ಆರೋಪ – ಗುಜರಾತ್‌ನಲ್ಲಿ ಇಬ್ಬರ ಬಂಧನ

ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಆಕ್ಷೇಪಾರ್ಹ’ ಪೋಸ್ಟ್‌ ಆರೋಪ – ಗುಜರಾತ್‌ನಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...