Homeಕರ್ನಾಟಕಬೆಂಗಳೂರು | ಆಫ್ರಿಕನ್ ಪ್ರಜೆಯ ಬಂಧನ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಬೆಂಗಳೂರು | ಆಫ್ರಿಕನ್ ಪ್ರಜೆಯ ಬಂಧನ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

- Advertisement -
- Advertisement -

ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 40 ವರ್ಷದ ಆಫ್ರಿಕನ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬೆಂಗಳೂರು | ಆಫ್ರಿಕನ್ ಪ್ರಜೆಯ

ಆರೋಪಿಯನ್ನು ಡೇನಿಯಲ್ ಅರಿಂಜೆ ಒಕ್ವೋಶಾ ಎಂದು ಗುರುತಿಸಲಾಗಿದ್ದು, ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಅವರಿಂದ 4 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರೋಪಿ ಡಿಸೆಂಬರ್ 2023 ರಲ್ಲಿ ವ್ಯಾಪಾರ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿ ಸೋಲದೇವನಹಳ್ಳಿಯಲ್ಲಿ ತನ್ನ ಸ್ನೇಹಿತನೊಂದಿಗೆ ಬಾಡಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿದಾರರೊಬ್ಬರ ನೀಡಿದ ಸುಳಿವು ಆಧರಿಸಿ ಬಂಧನ ಮಾಡಲಾಗಿದೆ ಎಂದು ವರದಿ ಹೇಳಿದೆ.

ಸುಳಿವಿನ ಆಧಾರದಲ್ಲಿ ಒಕ್ವೋಶಾ ಅವರ ಮನೆ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಲಾಯಿತು. ಅದಾಗ್ಯೂ, ಮಾದಕವಸ್ತು ಮಾರಾಟದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಅವರ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಆರೋಪಿಗಳು ಇತರ ರಾಜ್ಯಗಳಲ್ಲಿರುವ ತಮ್ಮ ಸಹವರ್ತಿಗಳಿಂದ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಸ್ಥಳೀಯ ಸಂಪರ್ಕಗಳಿಂದ ಡ್ರಗ್ಸ್ ಅನ್ನು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಅವರು ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ದಂಧೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಆರೋಪಿಯಿಂದ 1.48 ಕೆಜಿ ಬಿಳಿ ಬಣ್ಣದ ಎಂಡಿಎಂಎ ಹರಳುಗಳು ಮತ್ತು 1.1 ಕೆಜಿ ಕಂದು ಬಣ್ಣದ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 4 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬೆಂಗಳೂರು | ಆಫ್ರಿಕನ್ ಪ್ರಜೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...