Homeಮುಖಪುಟನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

- Advertisement -
- Advertisement -

ಗುಜರಾತ್‌ನ ದೇವಗಢ್ ಬರಿಯಾ ಮತ್ತು ಧನ್‌ಪುರ ತಾಲೂಕುಗಳಲ್ಲಿ ನಡೆದ 75 ಕೋಟಿ ರೂ.ಗಳ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ) ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಚಿವ ಬಚು ಖಬಾದ್ ಅವರ ಪುತ್ರ ಬಲವಂತ್‌ಸಿನ್ಹ ಖಬಾದ್ ಅವರನ್ನು ದಾಹೋದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಚು ಖಬಾದ್ ಪಂಚಾಯತ್ ರಾಜ್ ಮತ್ತು ಕೃಷಿ ಖಾತೆ ರಾಜ್ಯ ಸಚಿವರಾಗಿದ್ದಾರೆ.

ಬಲವಂತಸಿನ್ಹ ಮತ್ತು ಅವರ ಕಿರಿಯ ಸಹೋದರ ಕಿರಣ್ ದಾಹೋದ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹಿಂತೆಗೆದುಕೊಂಡ ಕೆಲ ದಿನಗಳ ನಂತರ ಅವರ ಬಂಧನ ಆಗಿದೆ.

ಹಗರಣದಲ್ಲಿ ಬಲವಂತಸಿನ್ಹ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಲಾಗಿದೆ ಎಂದು ದಾಹೋದ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಭಂಡಾರಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಪ್ರಾಥಮಿಕ ತನಿಖೆ ತನಿಖೆಯಲ್ಲಿ ನರೇಗಾ ಯೋಜನೆಗಳಿಗೆ ಸರಕುಗಳನ್ನು ಪೂರೈಸುವ ಬಲ್ವಂತ್‌ಸಿನ್ಹ ಖಬಾದ್ ಮಾಲೀಕತ್ವದ ಏಜೆನ್ಸಿಯು ಕೆಲವು ಮೊತ್ತಗಳಿಗೆ ಬಿಲ್‌ಗಳನ್ನು ನೀಡದೆ ಸಂಪೂರ್ಣ ಸರಕುಗಳ ಪಟ್ಟಿಯನ್ನು ತಲುಪಿಸಿದೆ ಎಂದು ತಿಳಿದುಬಂದಿದೆ. ತನಿಖೆ ಮುಂದುವರೆದಿದೆ ಮತ್ತು ದುರುಪಯೋಗದ ನಿಖರವಾದ ಮೊತ್ತವನ್ನು ನಾವು ಇನ್ನೂ ಖಚಿತಪಡಿಸಿಕೊಳ್ಳಬೇಕಾಗಿದೆ,” ಎಂದು ಭಂಡಾರಿ ಹೇಳಿದ್ದಾರೆ.

ಕಿರಣ್ ಅವರನ್ನು ಇನ್ನೂ ಬಂಧಿಸಲಾಗಿಲ್ಲ. ಹಗರಣದಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ದಾಖಲಾಗಿರುವ ಎಫ್‌ಐಆರ್‌ನಲ್ಲಿ, ನರೇಗಾ ಯೋಜನೆಗಳಿಗೆ ಸಾಮಗ್ರಿಗಳನ್ನು ಪೂರೈಸುವ ಗುತ್ತಿಗೆಯನ್ನು ಬಿಡ್ ಗೆಲ್ಲದ ಕಂಪನಿಗಳಿಗೆ ನೀಡಲಾಗಿದೆ. ಅವರ ಬಿಲ್ ಹಣವನ್ನೂ ಪಾವತಿಸಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಕೆಲ ಯೋಜನೆಗಳಿಗೆ ಬಿಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಗರಣವು ವಿಶೇಷವಾಗಿ ದೇವಗಢ ಬರಿಯಾದ ಕುವಾ ಗ್ರಾಮದ ಜನರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಬೆಳಕಿಗೆ ಬಂತು ಎಂದು ವರದಿಗಳು ಹೇಳಿವೆ.

ಈ ಪ್ರಕರಣ ಸಂಬಂಧ ದಾಹೋದ್ ಜಿಲ್ಲಾ ಪೊಲೀಸರು ಈ ಹಿಂದೆ ಐವರನ್ನು ಬಂಧಿಸಿದ್ದರು. ಅವರಲ್ಲಿ ನರೇಗಾ  ಶಾಖೆಯ ಇಬ್ಬರು ಲೆಕ್ಕಪರಿಶೋಧಕರಾದ ಜಯವೀರ್ ನಾಗೋರಿ ಮತ್ತು ಮಹಿಪಾಲ್‌ಸಿನ್ಹ ಚೌಹಾಣ್. ಗ್ರಾಮ ರೋಜ್‌ಗಾರ್ ಸೇವಕರಾದ ಕುಲದೀಪ್ ಬರಿಯಾ ಮತ್ತು ಮಂಗಲ್‌ಸಿನ್ಹ ಪಟೇಲಿಯಾ ಹಾಗೂ ತಾಂತ್ರಿಕ ಸಹಾಯಕ ಮನೀಶ್ ಪಟೇಲ್ ಸೇರಿದ್ದಾರೆ.

ಹಗರಣದ ತನಿಖೆಗೆ ವಿಶೇಷ ತಂಡ ರಚಿಸುವಂತೆ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಅವರು ಒತ್ತಾಯಿಸಿದ್ದಾರೆ. 30 ವರ್ಷಗಳ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವು ಮೊದಲ ಆದ್ಯತೆಯಾಗಿದೆ. ದಾಹೋದ್‌ನಲ್ಲಿ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಪದೇ ಪದೇ ದೂರುಗಳು ಬಂದರೂ ಸರ್ಕಾರ ಕ್ರಮ ಕೈಗೊಂಡಿರಲಿಲ್ಲ. ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿಲ್ಲ. ಆದರೂ, ಬಿಲ್ ಪಾಸ್ ಮಾಡಲಾಗಿದೆ. ಕಾಂಗ್ರೆಸ್ ಈ ವಿಷಯವನ್ನು ಲಿಖಿತವಾಗಿ ಮತ್ತು ಮೌಖಿಕವಾಗಿ ಹಾಗೂ ವಿಧಾನಸಭೆಯಲ್ಲಿ ಪ್ರಶ್ನೆಗಳ ಮೂಲಕ ಪದೇ ಪದೇ ಪ್ರಶ್ನಿಸಿದೆ ಎಂದು ಚಾವ್ಡಾ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...