Homeಮುಖಪುಟನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

- Advertisement -
- Advertisement -

ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ವಕೀಲ ಮತ್ತು ಅರ್ಜಿದಾರರಾದ ಮ್ಯಾಥ್ಯೂಸ್ ಜೆ ನೆಡುಂಪರ ಅವರು ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ನೆಡುಂಪರ ಅವರ ವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ನೇತೃತ್ವದ ಪೀಠವು ದೋಷಗಳನ್ನು ಸರಿಪಡಿಸಿದರೆ, ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಬಹುದು ಎಂದು ಹೇಳಿದೆ. “(ಅರ್ಜಿಯಲ್ಲಿನ) ದೋಷಗಳನ್ನು ಸರಿಪಡಿಸಿದರೆ ಅದನ್ನು ನಾಳೆ ಪಟ್ಟಿ ಮಾಡಬಹುದು” ಎಂದು ಸಿಜೆಐ ಅವರಿಗೆ ಹೇಳಿದರು. ಇದಕ್ಕೂ ಮೊದಲು ಮೇ 14 ರಂದು, ಸುಪ್ರೀಂಕೋರ್ಟ್ ತುರ್ತು ವಿಚಾರಣೆಗಾಗಿ ಅವರ ಅರ್ಜಿಯನ್ನು ಪಟ್ಟಿ ಮಾಡಲು ನಿರಾಕರಿಸಿತ್ತು.

ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಆಗಿರುವ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸುಪ್ರೀಂಕೋರ್ಟ್‌ನಿಂದ ನಿರ್ದೇಶನವನ್ನು ಕೋರಿ ನೆಡುಂಪರ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮೇ 8 ರಂದು, ಸುಪ್ರೀಂಕೋರ್ಟ್ ನೇಮಿಸಿದ ಆಂತರಿಕ ಸಮಿತಿಯು ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧ ನಗದು ಪತ್ತೆ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದ ನಂತರ, ಸಿಜೆಐ ಸಂಜೀವ್ ಖನ್ನಾ (ಈಗ ನಿವೃತ್ತರಾಗಿದ್ದಾರೆ) ಗುರುವಾರ ಕೇಂದ್ರಕ್ಕೆ ಅವರ ದೋಷಾರೋಪಣೆಯನ್ನು ಶಿಫಾರಸು ಮಾಡುವ ಪತ್ರವನ್ನು ಕಳುಹಿಸಿದ್ದರು.

ವರ್ಮಾ ನ್ಯಾಯಾಧೀಶ ಸ್ಥಾನದಿಂದ ಹೊರಬರಲು ನಿರಾಕರಿಸಿದ್ದರಿಂದ, ಆಂತರಿಕ ಸಮಿತಿಯಿಂದ ವರದಿಯನ್ನು ಸ್ವೀಕರಿಸಿದ ನಂತರ, ಮಾಜಿ ಸಿಜೆಐ ವರ್ಮಾ ಅವರ ಹೆಸರನ್ನು ದೋಷಾರೋಪಣೆಗೆ ಶಿಫಾರಸು ಮಾಡಲು ನಿರ್ಧರಿಸಿದ್ದರು.

“ನ್ಯಾಯಮೂರ್ತಿ ವರ್ಮಾ ಅವರನ್ನು ದೋಷಾರೋಪಣೆಯ ನಂತರ ರಾಜೀನಾಮೆ ನೀಡುವಂತೆ ಕೇಳಲಾಯಿತು. ಆದರೆ ಅವರು ನಿರಾಕರಿಸಿದ್ದಾರೆ” ಎಂದು ಸುಪ್ರಿಂಕೋರ್ಟ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ಇದಕ್ಕೂ ಮೊದಲು, ಮಾಜಿ ಸಿಜೆಐ, ಆಂತರಿಕ ಕಾರ್ಯವಿಧಾನದ ಪ್ರಕಾರ, ಮೇ 3 ರ ಮೂವರು ಸದಸ್ಯರ ಸಮಿತಿ ವರದಿಯ ಪ್ರತಿಯನ್ನು ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಬರೆದ ಪತ್ರವನ್ನು ಅದರೊಂದಿಗೆ ನ್ಯಾಯಮೂರ್ತಿ ವರ್ಮಾ ಅವರಿಂದ ಸ್ವೀಕರಿಸಿದ ಮೇ 6 ರ ಪತ್ರ/ಪ್ರತಿಕ್ರಿಯೆಯೊಂದಿಗೆ ಲಗತ್ತಿಸಿದ್ದಾರೆ.

ಮಾರ್ಚ್ 14 ರಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ನಡೆದ ನಗದು ಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸುಪ್ರೀಂಕೋರ್ಟ್ ನೇಮಿಸಿದ ಮೂವರು ನ್ಯಾಯಾಧೀಶರ ತನಿಖಾ ಸಮಿತಿಯು ಮೇ 4 ರಂದು ಸಿಜೆಐಗೆ ವರದಿಯನ್ನು ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನ ಮೂವರು ಸದಸ್ಯರ ಆಂತರಿಕ ಸಮಿತಿಯ ದೋಷಾರೋಪಣೆಯ ನಂತರ, ಸಿಜೆಐ ಖನ್ನಾ ಅವರು ನ್ಯಾಯಮೂರ್ತಿ ವರ್ಮಾ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದರು.

ಸುಪ್ರೀಂಕೋರ್ಟ್‌ನ ಸಮಿತಿಯು ಸಾಕ್ಷ್ಯಗಳ ಸರಣಿಯನ್ನು ಕೂಲಂಕಷವಾಗಿ ವಿಶ್ಲೇಷಿಸಿದ ನಂತರ ಮತ್ತು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥರು ಸೇರಿದಂತೆ 45 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿದ ನಂತರ ನ್ಯಾಯಮೂರ್ತಿ ವರ್ಮಾ ಅವರ ವಿರುದ್ಧ ದೋಷಾರೋಪಣೆ ಮಾಡುವ ತೀರ್ಮಾನಕ್ಕೆ ಬಂದಿತ್ತು. ಅದಾಗ್ಯೂ, ನ್ಯಾಯಮೂರ್ತಿ ವರ್ಮಾ ಅವರು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...