Homeಕರ್ನಾಟಕಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

ಪಂಜಾಬ್‌ನಲ್ಲಿ ಧರ್ಮಸ್ಥಳದ ಯುವತಿ ಸಾವು ಪ್ರಕರಣ: ಆರೋಪಿ ಪ್ರೊಫೆಸರ್ ಪೊಲೀಸ್‌ ವಶಕ್ಕೆ

- Advertisement -
- Advertisement -

ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿದ್ದ ಧರ್ಮಸ್ಥಳದ ಯುವತಿ ಆಕಾಂಕ್ಷಾ ಎಸ್‌ ನಾಯರ್ ಅನುಮಾನಾಸ್ಪಾದ ಸಾವು ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಂಜಾಬ್ ಪೊಲೀಸರು, ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಆರೋಪಿ ಎನ್ನಲಾಗಿರುವ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಅವರನ್ನು ಮೇ 19ರಂದು ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಧರ್ಮಸ್ಥಳ ಗ್ರಾಮದ ಬೋಲಿಯಾರ್ ನಿವಾಸಿ 22 ವರ್ಷದ ಆಕಾಂಕ್ಷಾ ಎಸ್‌ ನಾಯರ್ ತನ್ನ ಪದವಿ ಪ್ರಮಾಣಪತ್ರ ಪಡೆಯಲು ಮೇ 16ರಂದು ದೆಹಲಿಯಿಂದ ಪಂಜಾಬ್‌ಗೆ ತೆರಳಿದ್ದರು. ಮೇ 17ರಂದು ಆಕೆ, ಪಂಜಾಬ್‌ನ ಜಲಂಧರ್‌ನ ಫಾಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕಟ್ಟಡದ ನಾಲ್ಕನೇ ಅಂತಸ್ಥಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಆಕಾಂಕ್ಷಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮೇ 19ರಂದು ಮಧ್ಯಾಹ್ನದ ಬಳಿಕ ನಡೆಸಲಾಗಿದೆ. ನಂತರ ಸರ್ಕಾರಿ ಆಸ್ಪತ್ರೆಯು ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ಮೇ 20 ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗಿದೆ. ಅಲ್ಲಿಂದ ಬೆಂಗಳೂರಿಗೆ ಮೃತದೇಹ ತರಲು ಆಕಾಂಕ್ಷಾ ಕೆಲಸ ಮಾಡುತ್ತಿದ್ದ ಕಂಪನಿಯು ಉಚಿತ ವಿಮಾನದ ವ್ಯವಸ್ಥೆ ಮಾಡಿದೆ.

ಮೇ 20ರಂದು ರಾತ್ರಿ 8 ಗಂಟೆಗೆ ದೆಹಲಿಯಿಂದ ಹೊರಡುವ ಸ್ಪೈಸ್ ಜೆಟ್ ವಿಮಾನದ ಮೂಲಕ ಮೃತದೇಹವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ. ರಾತ್ರಿ 11 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಾಧ್ಯತೆ ಇದೆ.

ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಧರ್ಮಸ್ಥಳದ ಬೋಲಿಯಾರ್‌ನಲ್ಲಿರುವ ಮನೆಗೆ ಮೃತದೇಹ ಕೊಂಡೊಯ್ದು, ಮೇ 21ರ ಬೆಳಿಗ್ಗೆ ಅಂತ್ಯ ಸಂಸ್ಕಾರ ನೆರವೇರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ”

“ನನ್ನ ಮಗಳು ಧೈರ್ಯವಂತೆ, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ ಎಂದು ಸಾವಿಗೀಡಾದ ಆಕಾಂಕ್ಷಾ ಅವರ ತಾಯಿ ಸುದ್ದಿ ಸಂಸ್ಥೆ ವಾರ್ತಾಭಾರತಿ ಜೊತೆ ಮಾತನಾಡುವಾಗ ಹೇಳಿದ್ದಾರೆ.

ಆಕಾಂಕ್ಷಾಗೆ ವಿವಾಹಿತ ಅಧ್ಯಾಪಕರೊಬ್ಬರ ಜೊತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ನನಗನಿಸುವಂತೆ ಅಧ್ಯಾಪಕರೇ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ರೂಮ್‌ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಏನೋ ಅಚಾತುರ್ಯ ನಡೆದಿದೆ. ಹಾಗಾಗಿ ನನ್ನ ಮಗಳು ಈ ರೀತಿ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಯಾವ ಮುಖ ಇಟ್ಟು ಸಾಧನಾ ಸಮಾವೇಶ ನಡೆಸುತ್ತಿದೆ: ರೈತ ಮುಖಂಡ ಚಾಮರಸಮಾಲೀ ಪಾಟೀಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...