Homeಮುಖಪುಟಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

- Advertisement -
- Advertisement -

ಮಿಜೋರಾಂ ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂದು ಮುಖ್ಯಮಂತ್ರಿ ಲಾಲ್ದುಹೋಮ ಮಂಗಳವಾರ ಘೋಷಿಸಿದ್ದಾರೆ. ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದದಾರೆ. ಅದಾಗ್ಯೂ, ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಕೇರಳ ಆಗಿದ್ದು, 1989ರಲ್ಲೆ ರಾಜ್ಯವು 100% ಸಾಕ್ಷರತೆಯನ್ನು ಸಾಧಿಸಿದೆ ಎಂದು ಘೋಷಿಸಲಾಯಿತು.

2011 ರ ಜನಗಣತಿಯ ಪ್ರಕಾರ ಮಿಜೋರಾಂನ ಸಾಕ್ಷರತಾ ಪ್ರಮಾಣ 91.3% ರಷ್ಟಿದೆ. ಇದು ರಾಜ್ಯವನ್ನು ದೇಶದ ಮೂರನೇ ಅತ್ಯಂತ ಸಾಕ್ಷರರನ್ನಾಗಿ ಮಾಡಿದೆ. ಇದರ ನಂತರ, ಉಳಿದ ವ್ಯಕ್ತಿಗಳಿಗೆ ಶಿಕ್ಷಣ ನೀಡಲು ಕೇಂದ್ರ ಪ್ರಾಯೋಜಿತ ಯೋಜನೆಯಾದ ನ್ಯೂ ಇಂಡಿಯಾ ಲಿಟರಸಿ ಪ್ರೋಗ್ರಾಂ ಅನ್ನು ಜಾರಿಗೆ ತರಲಾಯಿತು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

ಮಿಜೋರಾಂನಲ್ಲಿ ಸಾಕ್ಷರತಾ ಪ್ರಮಾಣವು 95% ರ ಗಡಿಯನ್ನು ದಾಟಿದ್ದು, ಇದನ್ನು ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ಣ ಸಾಕ್ಷರತೆಗೆ ಸಮಾನವೆಂದು ಪರಿಗಣಿಸುತ್ತದೆ.

ಸಂಪೂರ್ಣ ಸಾಕ್ಷರ ರಾಜ್ಯವಾಗುವುದು ಮಿಜೋರಾಂನ “ಪ್ರಯಾಣದಲ್ಲಿ ಒಂದು ಐತಿಹಾಸಿಕ ಕ್ಷಣ” ಎಂದು ಲಾಲ್ದುಹೋಮ ಹೇಳಿದ್ದಾರೆ. “ಇದು ಪರಿವರ್ತನೆಯ ಮೈಲಿಗಲ್ಲು, ಇದು ನಮ್ಮ ಜನರ ಸಾಮೂಹಿಕ ಇಚ್ಛಾಶಕ್ತಿ, ಶಿಸ್ತು ಮತ್ತು ದೃಷ್ಟಿಕೋನವನ್ನು ಹೇಳುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನಿರಂತರ ಶಿಕ್ಷಣ, ಡಿಜಿಟಲ್ ಬಳಕೆ ಮತ್ತು ವೃತ್ತಿಪರ ಕೌಶಲ್ಯ ತರಬೇತಿಯ ಮೂಲಕ” ರಾಜ್ಯದಲ್ಲಿ ಉನ್ನತ ಮಟ್ಟದ ಸಾಕ್ಷರತೆಯನ್ನು ಉಳಿಸಿಕೊಳ್ಳಬೇಕು. ಎಲ್ಲಾ ಮಿಜೋಗಳಿಗೆ ಡಿಜಿಟಲ್ ಸಾಕ್ಷರತೆ, ಆರ್ಥಿಕ ಸಾಕ್ಷರತೆ ಮತ್ತು ಉದ್ಯಮಶೀಲತಾ ಕೌಶಲ್ಯದ ಹೆಚ್ಚಿನ ಗುರಿಯನ್ನು ಈಗ ನಾವು ಹೊಂದಬೇಕಿದೆ” ಎಂದು ಲಾಲ್ದುಹೋಮ ಹೇಳಿದ್ದಾರೆ.

ಕೇರಳವನ್ನು ಭಾರತದ ಮೊದಲ ಸಂಪೂರ್ಣ ಸಾಕ್ಷರ ರಾಜ್ಯ ಎಂದು 1989 ರಿಂದಲೇ ಗುರುತಿಸಲಾಗಿದೆ ಎಂಬುದು ಐತಿಹಾಸಿಕವಾಗಿ ದಾಖಲಾಗಿದೆ. ಕೇರಳವು 100% ಸಾಕ್ಷರತೆಯನ್ನು ಸಾಧಿಸಿದ ಮೊದಲ ರಾಜ್ಯವಾಗಿದ್ದು, ಇದನ್ನು ಭಾರತ ಸರ್ಕಾರ ಮತ್ತು ಇತರ ಸಂಸ್ಥೆಗಳು ಒಪ್ಪಿಕೊಂಡಿವೆ. ಅದಾಗ್ಯೂ, ಮಿಜೋರಾಂನ ಮುಖ್ಯಮಂತ್ರಿಯ ಘೋಷಣೆಯು 98.2% ಸಾಕ್ಷರತೆಯ ದರವನ್ನು ಆಧರಿಸಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದಲಿತ ಎಂಬ ಕಾರಣಕ್ಕೆ ಮುಖ್ಯ ನ್ಯಾಯಮೂರ್ತಿಗೆ ಅಗೌರವ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆಕ್ರೋಶ

ದಲಿತ ಎಂಬ ಕಾರಣಕ್ಕೆ ಮುಖ್ಯ ನ್ಯಾಯಮೂರ್ತಿಗೆ ಅಗೌರವ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...