Homeಕರ್ನಾಟಕರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ಅವರು ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ರಾಜಕಾಲುವೆ ಒತ್ತುವರಿ ಎಷ್ಟೆ

“ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿಗೆ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳ ಬೇಸ್ಮೆಂಟ್‌ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾನ್ಯತಾ ಟೆಕ್‌ಪಾರ್ಕ್‌ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್‌ಪಾರ್ಕ್‌ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಹೆಚ್‌ಬಿಆರ್‌ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಸೂಚನೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಾಯಿ ಲೇಔಟ್ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3ಕೋಟಿ ಪಾವತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಹಾದೇವಪುರದ ಪಣತ್ತೂರು ಗಾರ್ಡನ್‌ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆಯಾಗುತ್ತಿದೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ 19ರ ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ ಎಷ್ಟೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...