Homeಮುಖಪುಟಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ...

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

- Advertisement -
- Advertisement -

ವಕ್ಫ್‌ (ತಿದ್ದುಪಡಿ) ಕಾಯ್ದೆಯಿಂದ ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ರಾಜ್ಯ ಔಕಾಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರು ಬಹುಮತ ಸಾಧಿಸಬಹುದು ಎಂಬ ಅರ್ಜಿದಾರರ ವಾದವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ.

ವಕ್ಫ್ ಮಂಡಳಿಗಳ ಸಂಯೋಜನೆಯನ್ನು ಹಿಂದೂ, ಸಿಖ್ ಹಾಗೂ ಕ್ರೈಸ್ತ ಧಾರ್ಮಿಕ ದತ್ತಿ ಮಂಡಳಿಗಳ ಸಂಯೋಜನೆ ಜೊತೆ ಹೋಲಿಕೆ ಮಾಡುವ ಮೂಲಕ ಮುಸ್ಲಿಮರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದೆ.

ಸೈದ್ಧಾಂತಿಕವಾಗಿ ಮುಸ್ಲಿಮೇತರರು ಕೇಂದ್ರೀಯ ವಕ್ಫ್‌ ಕೌನ್ಸಿಲ್ ಮತ್ತು ಔಕಾಫ್ ಮಂಡಳಿಗಳಲ್ಲಿ ಬಹುಮತ ಸಾಧಿಸುತ್ತಾರೆ ಎಂಬ ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿರುವ ಅರ್ಜಿದಾರರ ವಾದವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅಲ್ಲಗಳೆದ್ದಾರೆ.

ಈ ಸಂಬಂಧ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಜಂಟಿ ಸಂಸದೀಯ ಸಮಿತಿಗೆ ಭರವಸೆ ನೀಡಿದ ಪತ್ರದ ಪ್ರತಿ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ಪ್ರತಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಮುಂದೆ ಪ್ರಸ್ತುತಪಡಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ಸುಮಾರು 30 ನಿಮಿಷಗಳ ಕಾಲ ವಕ್ಫ್‌ ಕೌನ್ಸಿಲ್ ಮತ್ತು ಮಂಡಳಿಗಳು ತಮ್ಮ ಅಲ್ಪಸಂಖ್ಯಾತ ಸ್ಥಾನವನ್ನು ಕಳೆದುಕೊಳ್ಳುತ್ತಿವೆ ಎಂಬ ಮುಸ್ಲಿಮರಲ್ಲಿರುವ ಆತಂಕವನ್ನು ಎತ್ತಿ ತೋರಿಸಿದ್ದಾರೆ. ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ರ ಮೂಲಕ ಕನಿಷ್ಠ ಸೈದ್ಧಾಂತಿಕವಾಗಿ ಈ ಎರಡು ಸಂಸ್ಥೆಗಳಲ್ಲಿ ಮುಸ್ಲಿಮೇತರರನ್ನು ಬಹುಮತವನ್ನಾಗಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಸರ್ಕಾರ ಹಿಂದೂ, ಸಿಖ್ ಮತ್ತು ಕ್ರೈಸ್ತ ಧರ್ಮಗಳ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಆ ಧರ್ಮಗಳಲ್ಲಿ ನಂಬಿಕೆ ಇಲ್ಲದವರನ್ನು ಸದಸ್ಯರಾಗಿ ಮಾಡಲು ಪ್ರಯತ್ನಿಸಿದರುವಾಗ, ಮುಸ್ಲಿಮರ ವಕ್ಫ್‌ ಮಂಡಳಿಗಳಿಗೆ ಮಾತ್ರ ಏಕೆ ಈ ನಿಯಮ? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಸರ್ಕಾರದ ಈ ಕ್ರಮವನ್ನು ಧರ್ಮಾಧಾರಿತ ತಾರತಮ್ಯ ಎಂದು ಕರೆದ ಸಿಬಲ್, ಇದು ಸಂವಿಧಾನದ ವಿಧಿ 15 ರ ಅಡಿಯಲ್ಲಿ ಖಾತರಿಪಡಿಸಲಾದ ತಾರತಮ್ಯ ವಿರೋಧಿ, ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ತುಷಾರ್ ಮೆಹ್ತಾ, “ಹಿಂದೂ ಧಾರ್ಮಿಕ ದತ್ತಿ ಮಂಡಳಿ ಸದಸ್ಯರು ದೇವಸ್ಥಾನಗಳಿಗೆ ಹೋಗುತ್ತಾರೆ ಮತ್ತು ಪೂಜಾಕ್ರಮಗಳ ಮೇಲ್ವಿಚಾರಣೆ ನಡೆಸುತ್ತಾರೆ ಎಂದಿದ್ದಾರೆ.

ದತ್ತಿ ಆಯುಕ್ತರು ಹಿಂದೂಯೇತರರಾಗಿರಬಹುದು, ಅವರು ಅರ್ಚಕರನ್ನು (ಪೂಜಾರಿಗಳನ್ನು) ನೇಮಿಸಬಹುದು ಮತ್ತು ಆಚರಣೆಗಳನ್ನು ಮಾಡದಿದ್ದಕ್ಕಾಗಿ ಅಥವಾ ಅನೈತಿಕ ಚಟುವಟಿಕೆಗಳಿಗಾಗಿ ಅವರನ್ನು ತೆಗೆದುಹಾಕಬಹುದು. ಅರ್ಚಕರ ನೇಮಕಾತಿಯನ್ನು ಜಾತ್ಯತೀತ ಚಟುವಟಿಕೆ ಎಂದು ಕರೆಯುವ ಮೂಲಕ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ಮಹ್ತಾ ಹೇಳಿದ್ದಾರೆ.

ಹಿಂದೂ ವೈಯಕ್ತಿಕ ಕಾನೂನುಗಳನ್ನು 1956ರಲ್ಲಿ ಕ್ರೋಡೀಕರಿಸಲಾಗಿದೆ. ಆದರೆ, ಮುಸ್ಲಿಮರು ಶರಿಯಾ ಕಾನೂನಿನಿಂದ ನಿಯಂತ್ರಿಸಲ್ಪಡುವುದನ್ನು ಮುಂದುವರೆಸಿದ್ದಾರೆ. ಈ ತಾರತಮ್ಯವನ್ನು ಎತ್ತಿ ತೋರಿಸುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 1996ರಲ್ಲಿ ಅಂತಹ ಹೋಲಿಕೆ ಸಾಧ್ಯವಿಲ್ಲ, ವೈಯಕ್ತಿಕ ಕಾನೂನು ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸುಧಾರಣೆಗಳು ಕ್ರಮೇಣ ನಡೆಯುವ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು ಎಂದು ವಿವರಿಸಿದ್ದಾರೆ.

ವಕ್ಫ್ ಮಂಡಳಿಗಳನ್ನು ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳು, ಧರ್ಮ ಮತ್ತು ಆಚರಣೆಗಳೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ವಕ್ಫ್ ಮಂಡಳಿಗಳು ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದ್ದಾಗಿವೆ. ಅದು ಜಾತ್ಯತೀತ ಚಟುವಟಿಕೆಯಾಗಿದೆ. ಸರ್ಕಾರ ಶಾಸನದ ಮೂಲಕ ಅದನ್ನು ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಅರ್ಜಿದಾರರು ವಕ್ಫ್ ತಿದ್ದುಪಡಿ ಕಾಯ್ದೆ, 2025 ಅನ್ನು ಜಾರಿಗೆ ತರುವ ಸಂಸತ್ತಿನ ಶಾಸಕಾಂಗ ಸಾಮರ್ಥ್ಯವನ್ನು ಪ್ರಶ್ನಿಸಿಲ್ಲ ಎಂದು ತುಷಾರ್ ಮೆಹ್ತಾ ಹೇಳಿದ್ದಾರೆ.

ಪ್ರಾಚೀನ ಸ್ಮಾರಕಗಳನ್ನು ವಕ್ಫ್ ವ್ಯಾಪ್ತಿಯಿಂದ ಹೊರತರುವ ಕುರಿತು ಜೆಪಿಸಿ ಭಾರತೀಯ ಪುರಾತತ್ವ ಇಲಾಖೆಯೊಂದಿಗೆ ಸಮಾಲೋಚಿಸಿದೆ. ಸಂರಕ್ಷಿತ ಮತ್ತು ಪ್ರಾಚೀನ ಸ್ಮಾರಕಗಳಲ್ಲಿ ವರ್ಷಗಳಿಂದ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿಲ್ಲವಾದರೂ, ಈ ಸ್ಮಾರಕಗಳನ್ನು ವಕ್ಫ್‌ಗಳಾಗಿ ನಿರ್ವಹಿಸುವ ವಕ್ಫ್ ಮಂಡಳಿಗಳು ಅಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಏಕಪಕ್ಷೀಯವಾಗಿ ಅನುಮತಿಸಿವೆ. ಇದು ಸ್ಮಾರಕಗಳ ಸಂರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂದು ಮೆಹ್ತಾ ವಾದಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ, ವಕ್ಫ್ ಮಂಡಳಿಗಳು ಪ್ರಾಚೀನ ಸ್ಮಾರಕಗಳ ದುರಸ್ತಿ ಮತ್ತು ಪುನಃಸ್ಥಾಪನೆ ಕಾರ್ಯಗಳನ್ನು ಕೈಗೊಳ್ಳದಂತೆ ಎಎಸ್‌ಐ ನಿರ್ಬಂಧಿಸಿವೆ ಎಂದು ಮೆಹ್ತಾ ಹೇಳಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್‌: ಮಾವೋವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಸವರಾಜು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...