Homeದಲಿತ್ ಫೈಲ್ಸ್ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರಿನಲ್ಲಿ ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವಿಗೀಡಾಗಿದ್ದು, ಒಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇ 19, ಸೋಮವಾರ ದುರಂತ ನಡೆದಿದೆ. ಮಲಗುಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ನಾಲ್ವರು ಯುವಕರು ಆಸ್ವಸ್ಥಗೊಂಡಿದ್ದರು. ಈ ಪೈಕಿ ಸರವಣನ್ ಮತ್ತು ವೇಣುಗೋಪಾಲ್ ಎಂಬ ಇಬ್ಬರು ಅದೇ ದಿನ ಸಾವೀಗೀಡಾಗಿದ್ದರು.

ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹರಿ ಕೃಷ್ಣನ್ ಎಂಬ ಮತ್ತೊಬ್ಬ ಯುವಕ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಮೂರಕ್ಕೇರಿದೆ. ನಾಲ್ಕನೇ ವ್ಯಕ್ತಿ ಚಿನ್ನಸ್ವಾಮಿ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಿರುಪ್ಪೂರು ಪೊಲೀಸರ ಪ್ರಕಾರ, ಜಿಲ್ಲೆಯ ಕರೈಪುದೂರ್‌ನಲ್ಲಿರುವ ಬಟ್ಟೆಗಳಿಗೆ ಬಣ್ಣ ಬಳಿಯುವ ಖಾಸಗಿ ಕಾರ್ಖಾನೆಯ ಏಳು ಅಡಿ ಆಳದ ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಐವರು ದಲಿತ ಯುವಕರು ಯಾವುದೇ ರಕ್ಷಣಾತ್ಮಕ ಸಾಧನಗಳಿಲ್ಲದೆ ಇಳಿದಿದ್ದರು. ಈ ವೇಳೆ ಇಕ್ಕಟ್ಟಾದ ಜಾಗದಲ್ಲಿ ವಿಷಕಾರಿ ಮೀಥೇನ್ ಅನಿಲ ಸೇವಿಸಿ ಅವರು ಅಸ್ವಸ್ಥಗೊಂಡಿದ್ದರು.

ತಕ್ಷಣ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗ ಮಧ್ಯೆ ಸರವಣನ್ ಮತ್ತು ವೇಣುಗೋಪಾಲ್ ಕೊನೆಯುಸಿರೆಳೆದಿದ್ದರು. ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ಸಂಬಂಧ ಕಾರ್ಖಾನೆ ಮಾಲೀಕ ನವೀನ್, ವ್ಯವಸ್ಥಾಪಕ ಧನಬಾಲ್, ಮೇಲ್ವಿಚಾರಕ ಬಾಲಸುಬ್ರಮಣಿಯಂ ಮತ್ತು ವಾಹನ ಮಾಲೀಕ ಚಿನ್ನಸಾಮಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 125ಎ (ಜೀವಕ್ಕೆ ಅಪಾಯ ಉಂಟು ಮಾಡುವುದು) ಮತ್ತು 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) (ಗಂಭೀರ ಅಪರಾಧಗಳು) ಮತ್ತು 2013ರ ಮಲ ಹೊರುವ ಪದ್ದತಿ ನಿಷೇಧ ಮತ್ತು ಕಾರ್ಮಿಕರ ಪುನರ್ವಸತಿ ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

‘ಎಸ್‌ಸಿ-ಎಸ್‌ಟಿ ಕಾಯ್ದೆ’ಯನ್ನು ತಮಿಳುನಾಡು ಸರ್ಕಾರ ದುರ್ಬಲಗೊಳಿಸುತ್ತಿದೆ: ದಲಿತ ಸಂಘಟನೆಗಳಿಂದ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...