Homeಮುಖಪುಟ'ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸುತ್ತಿದೆ': ಸುಪ್ರೀಂ ಕೋರ್ಟ್

‘ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸುತ್ತಿದೆ’: ಸುಪ್ರೀಂ ಕೋರ್ಟ್

- Advertisement -
- Advertisement -

 

ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮದ (ಟಿಎಎಸ್‌ಎಂಎಸಿ) ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವನ್ನು (ಇಡಿ) ಗುರುವಾರ (ಮೇ.22) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಮುಂದಿನ ತನಿಖೆಗೆ ತಡೆ ನೀಡಿದೆ.

“ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ದೇಶದ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದೆ. ನಿಗಮದ ವಿರುದ್ಧ ಅಪರಾಧ ಆರೋಪ  ಹೇಗೆ ಸಾಧ್ಯ?” ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಇಡಿ ಪರ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಪ್ರಶ್ನಿಸಿದ್ದಾರೆ.

ಟಿಎಎಸ್‌ಎಂಎಸಿ ಪ್ರಧಾನ ಕಛೇರಿಯ ಮೇಲೆ ಇಡಿ ದಾಳಿ ನಡೆಸಿದ್ದರ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಮತ್ತು ಟಿಎಎಸ್‌ಎಂಎಸಿ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಗುರುವಾರ ವಿಚಾರಣೆ ನಡೆಸಿದೆ.

ಸರ್ಕಾರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “2014-21ರ ನಡುವೆ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಗಳ ಸಂಬಂಧ ಮದ್ಯದಂಗಡಿ ನಿರ್ವಾಹಕರ ವಿರುದ್ಧ ರಾಜ್ಯ ಸರ್ಕಾರ 41 ಎಫ್‌ಐಆರ್‌ಗಳನ್ನು ದಾಖಲಿಸಿದೆ. ಆದಾಗ್ಯೂ, 2025 ರಲ್ಲಿ ಇಡಿ ಟಿಎಎಸ್‌ಎಂಎಸಿ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿ ಅಧಿಕಾರಿಗಳ ಫೋನ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

“ಇದು ಮದ್ಯದಂಗಡಿಗಳಿಗೆ ಪರಾವನಿಗೆ ನೀಡುವ ನಿಗಮ. ಮಳಿಗೆಗಳನ್ನು ನೀಡಿದ ಕೆಲವರು ವಾಸ್ತವವಾಗಿ ಹಣವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದ್ದರಿಂದ, ಸರ್ಕಾರ 2014-21ರ ಅವಧಿಯಲ್ಲಿ ಹಲವು ವ್ಯಕ್ತಿಗಳ ವಿರುದ್ಧ 41 ಎಫ್‌ಐಆರ್‌ಗಳನ್ನು ದಾಖಲಿಸಿದೆ, ನಿಗಮದ ವಿರುದ್ಧ ಅಲ್ಲ. ಇಡಿ 2025ರಲ್ಲಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿಗಮದ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದೆ. ಎಲ್ಲರ ಪೋನ್‌ಗಳನ್ನು ಕದ್ದಾಲಿಸಿದೆ” ಎಂದು ಹೇಳಿದ್ದಾರೆ.

ಈ ಹಂತದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ ಅವರು, “ನಿಗಮದ ವಿರುದ್ಧ ಅಪರಾಧ ಆರೋಪ ಹೇಗೆ ಸಾಧ್ಯ?” ಎಂದು ಇಡಿ ಪರ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಪ್ರಶ್ನಿಸಿದ್ದಾರೆ. “ನೀವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಬಹುದು, ಆದರೆ ನಿಗಮದ ವಿರುದ್ಧ ಕ್ರಿಮಿನಲ್ ಪ್ರಕರಣ ಹೇಗೆ? ನಿಮ್ಮ ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ” ಎಂದು ಕಿಡಿಕಾರಿದ್ದಾರೆ.

“ತಪ್ಪಿತಸ್ಥರ ವಿರುದ್ದ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣ ದಾಖಲಿಸಿರುವಾಗ ಇಡಿ ಹೇಗೆ ಮಧ್ಯದಲ್ಲಿ ಪ್ರವೇಶಿಸಿದೆ? ಇಡಿ ಪ್ರಕರಣದಲ್ಲಿ ಮಧ್ಯಪ್ರವೇಶಿಸುವ ಬಗ್ಗೆ ಅಫಿಡವಿಟ್ ಸಲ್ಲಿಸಿದೆಯಾ? ಇಡಿ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದೆ” ಎಂದು ಸಿಜೆಐ ಖಾರವಾಗಿ ಹೇಳಿದ್ದಾರೆ.

ಪ್ರಕರಣ ಸಂಬಂಧ ಇಡಿಗೆ ನೋಟಿಸ್ ಜಾರಿ ಮಾಡಲು ಪೀಠ ಆದೇಶಿಸಿದೆ. ಅರ್ಜಿದಾರರ ವಿರುದ್ದದ ಮುಂದಿನ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಲಾಗುವುದು ಎಂದು ಪೀಠವು ಆದೇಶದಲ್ಲಿ ತಿಳಿಸಿದೆ. ಇಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಪ್ರತಿಕ್ರಿಯೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಟಿಎಎಸ್‌ಎಂಎಸಿ ಅಧಿಕಾರಿಗಳು ಮದ್ಯದ ಬಾಟಲಿಗಳ ಬೆಲೆ ಏರಿಕೆ, ಟೆಂಡರ್ ಬದಲಾವಣೆ, ಲಂಚ ಪಡೆಯುವುದು ಸೇರಿದಂತೆ ವಿವಿಧ ರೀತಿಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. 1,000 ಕೋಟಿ ರೂಪಾಯಿಗೂ ಹೆಚ್ಚಿನ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ಮಾರ್ಚ್ 6 ರಿಂದ ಮಾರ್ಚ್ 8 ರವರೆಗೆ ಟಿಎಎಸ್‌ಎಂಎಸಿ ಪ್ರಧಾನ ಕಚೇರಿಗೆ ದಾಳಿ ನಡೆಸಿದ್ದ ಇಡಿ ಶೋಧ ನಡೆಸಿತ್ತು.

ರಾಜ್ಯ ಸರ್ಕಾರ ಅಥವಾ ಟಿಎಎಸ್‌ಎಂಎಸಿ ಹಲವು ವರ್ಷಗಳಿಂದ ಟಿಎಎಸ್‌ಎಂಎಸಿ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಸುಮಾರು 41-46 ಎಫ್ಐಆರ್‌ಗಳಲ್ಲಿ ಇರುವ ಆರೋಪಗಳ ಆಧಾರದ ಮೇಲೆ ಇಡಿ ಹಣ ವರ್ಗಾವಣೆಯನ್ನು ಶಂಕಿಸಿದೆ.

ಮಾರ್ಚ್‌ನಲ್ಲಿ ಟಿಎಎಸ್‌ಎಂಎಸಿ ಕೇಂದ್ರ ಕಚೇರಿ ಮೇಲೆ ಇಡಿ ನಡೆಸಿದ ದಾಳಿ ಮತ್ತು ನಂತರ ಶೋಧ ಕಾರ್ಯವನ್ನು ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದೆ. ರಾಜ್ಯ ಸರ್ಕಾರ ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವಾಗ ಇಡಿ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ರಾಜ್ಯದ ಅಧಿಕಾರವನ್ನು ಅತಿಕ್ರಮಿಸಿದೆ ಎಂದು ಆರೋಪಿಸಿದೆ.

ಇಡಿ ದಾಳಿಯ ಕಾನೂನುಬದ್ಧತೆಯನ್ನು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆದರೆ, ಹೈಕೋರ್ಟ್ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...