- Advertisement -
- Advertisement -
ತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ (ಮೇ. 21) ಕಾರ್ಖಾನೆಯ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಮಧುಗಿರಿ ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23), ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್ (32) ಸಾವಿಗೀಡಾಗಿದ್ದು, ತರೂರು ಗ್ರಾಮದ ಮಂಜಣ್ಣ (42), ಯುವರಾಜ್ (32) ಅವರಿಗೆ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವರದಿಗಳು ಹೇಳಿವೆ.
ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್ ಬಯೋ’ ಎಂಬ ಕಾರ್ಖಾನೆಯಲ್ಲಿ ದುರಂತ ನಡೆದಿದೆ. ಅದೇ ಕಾರ್ಖಾನೆಯ ನಾಲ್ವರು ಕಾರ್ಮಿಕರು ಸಂಪ್ ಸ್ಚಚ್ಛತೆಗೆ ಇಳಿದಿದ್ದರು ಎಂದು ತಿಳಿದು ಬಂದಿದೆ.
ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ


