Homeಕರ್ನಾಟಕಕೋಮು ದ್ವೇಷ ಭಾಷಣ: ಹರೀಶ್ ಪೂಂಜಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಕೋಮು ದ್ವೇಷ ಭಾಷಣ: ಹರೀಶ್ ಪೂಂಜಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

ಕೋಮು ದ್ವೇಷ ಭಾಷಣ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಗುರುವಾರ (ಮೇ.22) ಮಧ್ಯಂತರ ತಡೆ ನೀಡಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ (ಮೇ 3ರಂದು) ಹರೀಶ್ ಪೂಂಜಾ ಸ್ಥಳೀಯ ಬ್ಯಾರಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 353 (2) ರ ಅಡಿಯಲ್ಲಿ ಮೇ 4ರಂದು ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರ ರಜಾ ಕಾಲದ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ ಎಂದು ವರದಿಗಳು ಹೇಳಿವೆ.

“ಅರ್ಜಿದಾರರ (ಹರೀಶ್ ಪೂಂಜಾ) ವಿರುದ್ಧ ದಾಖಲಿಸಲಾಗಿರುವ ಇತರ ಮೂರು ಎಫ್‌ಐಆರ್‌ಗಳಿಗೆ ಈ ನ್ಯಾಯಾಲಯದ ಸಮನ್ವಯ ಪೀಠ ನೀಡಿರುವ ತಡೆಯಾಜ್ಞೆಯನ್ನು ಪರಿಗಣಿಸಿ, ಅವರು ಮನವಿ ಮಾಡಿದಂತೆ ಮುಂದಿನ ವಿಚಾರಣೆಯ ದಿನಾಂಕ ಜೂನ್ 18ರವರೆಗೆ ಈ ಪ್ರಕರಣಕ್ಕೆ ತಡೆಯಾಜ್ಞೆ ನೀಡುವುದು ಸೂಕ್ತವಾಗಿದೆ” ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು livelaw.in ವರದಿ ಮಾಡಿದೆ. 

ಆಪಾದಿತ ಹೇಳಿಕೆಗಳನ್ನು ನೀಡಿದ ನಂತರ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅರ್ಜಿದಾರರ (ಹರೀಶ್ ಪೂಂಜಾ) ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಅದಲ್ಲದೆ, ಅರ್ಜಿದಾರರ ವಿರುದ್ಧ ದಾಖಲಾಗಿರುವ ಅಪರಾಧಗಳನ್ನು ದೃಢೀಕರಿಸಲು ಯಾವುದೇ ಪ್ರಾಥಮಿಕ ಸಾಕ್ಷ್ಯಗಳಿಲ್ಲ ಎಂದಿದ್ದಾರೆ.

ಪೊಲೀಸರು ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಸಿರುವುದರಿಂದ ಎಫ್‌ಐಆರ್ ರದ್ದತಿ ಕೋರಿರುವ ಹರೀಶ್ ಪೂಂಜಾ ಅರ್ಜಿಯು ಸಮರ್ಥನೀಯವಲ್ಲ. ಆದ್ದರಿಂದ ಅರ್ಜಿಯನ್ನು ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.

ಕೋಮು ದ್ವೇಷ ಭಾಷಣ ಮಾಡಿದ ಪ್ರದೇಶದಲ್ಲಿ ಧರ್ಮವನ್ನು ಲೆಕ್ಕಿಸದೆ ಎಲ್ಲಾ ಜನರು ದೇವಸ್ಥಾನದ ಕಾರ್ಯಕ್ರಮಕ್ಕೆ ಸಹಕರಿಸಿದ್ದಾರೆ. ಕಾರ್ಯಕ್ರಮಕ್ಕೆ ಶಾಮಿಯಾನ ಹಾಕಲೂ ಅಲ್ಪಸಂಖ್ಯಾತ ಸಮುದಾಯದ ಜನರು ಜಾಗ ನೀಡಿದ್ದಾರೆ. ಈ ಮೂಲಕ ಸೌಹಾರ್ದತೆಯಿಂದ ನಡೆದುಕೊಂಡಿದ್ದಾರೆ. ಅರ್ಜಿದಾರರು (ಹರೀಶ್ ಪೂಂಜಾ) ಬಂದು ಅಲ್ಲಿ ದ್ವೇಷ ಭಾಷಣ ಮಾಡುವುದರಿಂದ ಜನರನ್ನು ಪ್ರಚೋದಿಸಿದಂತಾಗುತ್ತದೆ ಎಂದ ಸರ್ಕಾರದ ಪರ ವಕೀಲರು, ಇಂತಹ ಘಟನೆಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಲು ನ್ಯಾಯಾಲಯಗಳಿಗೆ ಸೂಚಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಾರೆ.

ಹರೀಶ್ ಪೂಂಜಾ ದ್ವೇಷ ಭಾಷಣವನ್ನು ಉಲ್ಲೇಖಿಸಿದ ದೂರುದಾರರ ಪರ ವಕೀಲರು “ನಮ್ಮದು ಸಂವಿಧಾನ ಆಧಾರಿತ ದೇಶವೇ ಹೊರತು, ಧರ್ಮಾರ್ಧಾರಿತ ದೇಶವಲ್ಲ. ಆದ್ದರಿಂದ ಇಂತಹ ಮನೋಭಾವದ ಕುರಿತು ಕಾನೂನು ತನ್ನದೇ ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಪ್ರಕರಣದ ವಿಚಾರಣೆ ನಡೆಯಲಿ. ಆರೋಪಪಟ್ಟಿ ಸಲ್ಲಿಸಲಾಗಿರುವುದರಿಂದ ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಾಕಷ್ಟು ಪುರಾವೆಗಳಿವೆ” ಎಂದು ವಾದಿಸಿದ್ದಾರೆ.

ಸೌಜನ್ಯ: livelaw.in

ಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ ಸಮುದಾಯದ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...