Homeಮುಖಪುಟಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

ಪ್ರಧಾನಿ ಮೋದಿಗೆ ಅವಮಾನ ಆರೋಪ: ದಲಿತ ರ‍್ಯಾಪರ್ ವೇಡನ್ ವಿರುದ್ಧ ಗೃಹ ಸಚಿವಾಲಯ, ಎನ್ಐಎಗೆ ದೂರು

- Advertisement -
- Advertisement -

ಬಲಂಪಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಕೇರಳದ ಜನಪ್ರಿಯ ದಲಿತ ರ‍್ಯಾಪರ್ ‘ವೇಡನ್’ (ಹಿರಂದಾಸ್ ಮುರಳಿ) ವಿರುದ್ದ ಪಾಲಕ್ಕಾಡ್‌ನ ಬಿಜೆಪಿ ಮುಖಂಡರೊಬ್ಬರು ದೂರು ದಾಖಲಿಸಿದ್ದಾರೆ.

ವೇಡನ್ ಅವರ ಹಾಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವಂತಿದೆ, ವಿಭಜನೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿದ್ದಾರೆ.

ಪಾಲಕ್ಕಾಡ್ ಪುರಸಭೆಯ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾಗಿರುವ ವಿ.ಎಸ್. ಮಿನಿಮೋಲ್ ಅವರು ವೇಡನ್ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಎನ್‌ಐಎಗೆ ಪತ್ರ ಬರೆದಿದ್ದಾರೆ.

ವೇಡನ್ ಅವರ ಹಾಡಿನಲ್ಲಿ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡುವಂತಹ ಅಂಶವಿದೆ. ಹಿಂದೂ ಸಮುದಾಯದೊಳಗೆ ಜಾತಿ ಆಧಾರಿತ ವಿಭಜನೆಗೆ ಕಾರಣವಾಗುವ ಪ್ರಚೋದನಕಾರಿ ಭಾಷೆಯನ್ನು ಬಳಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಧಾನಿ ಬಗ್ಗೆ ವೇಡನ್ ಆಧಾರರಹಿತ, ಆಕ್ಷೇಪಾರ್ಹ ಮತ್ತು ಅಗೌರವದ ಹೇಳಿಕೆಗಳನ್ನು ನೀಡಿದ್ದಾರೆ. ಇದು ಅವರ ವೈಯಕ್ತಿಕ ಮತ್ತು ರಾಜಕೀಯ ಇಮೇಜ್‌ಗೆ ಕಳಂಕ ತರುವುದಲ್ಲದೆ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಕುಂದಿಸುತ್ತದೆ” ಎಂದು ಮಿನಿಮೋಲ್ ಎರಡು ದಿನಗಳ ಹಿಂದೆ ಸಲ್ಲಿಸಲಾದ ದೂರಿನಲ್ಲಿ ಹೇಳಿದ್ದಾರೆ.

ಲೈವ್ ಕಾರ್ಯಕ್ರಮದಲ್ಲಿ ವೇಡನ್ ಮೋದಿ ಅವರನ್ನು ನೇರವಾಗಿ ಉಲ್ಲೇಖಿಸಿದ್ದಾರೆ. ಇದು ಪ್ರಧಾನ ಮಂತ್ರಿ ಕಚೇರಿಗೆ ತೋರಿದ ಅಗೌರವ ಮಾತ್ರವಲ್ಲದೆ, ಸಾರ್ವಜನಿಕ ದ್ವೇಷವನ್ನು ಪ್ರಚೋದಿಸುವ ಸಾಧ್ಯತೆಯಿದೆ ಎಂದು ಮಿನಿಮೋಲ್ ತಿಳಿಸಿದ್ದಾರೆ.

ಕೊಚ್ಚಿ ಬಳಿಯ ತ್ರಿಪುನಿತುರದಲ್ಲಿ ಏಪ್ರಿಲ್ 28ರಂದು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೇಡನ್ ಅವರನ್ನು ಬಂಧಿಸಿದ್ದು ಸೇರಿದಂತೆ ಅವರಿಗೆ ಸಂಬಂಧಿಸಿತ ಇತರ ಪ್ರಕರಣಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚುವರಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾದರೂ, ವೇಡನ್ ದೊಡ್ಡ ಸಂಗೀತ ಕಚೇರಿಗಳನ್ನು ಆಯೋಜಿಸುವುದನ್ನು ಮುಂದುವರೆಸಿದ್ದಾರೆ. ಅಲ್ಲಿ ಅವರು ಪ್ರೇಕ್ಷಕರಲ್ಲಿ ಹಿಂಸೆ ಮತ್ತು ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಾನನಷ್ಟ, ಗುಂಪು ದ್ವೇಷ ಹರಡುವಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವೇಡನ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಿನಿಮೋಲ್ ಕೋರಿದ್ದಾರೆ. ಸಂಬಂಧಿತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳಡಿಯೂ ಪ್ರಕರಣ ದಾಖಲಿಸುವಂತೆ ವಿನಂತಿಸಿದ್ದಾರೆ.

ಈ ಆರೋಪಗಳಿಗೆ ಸಂಬಂಧಿಸಿದಂತೆ ವೇಡನ್ ಮತ್ತು ಅವರ ತಂಡ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಸಂಘ ಪರಿವಾರದ ನಾಯಕರು ಇತ್ತೀಚೆಗೆ ವೇಡನ್ ವಿರುದ್ಧ ಮಾಡಿದ ಟೀಕೆಗಳನ್ನು ಅನುಸರಿಸಿ ಆರೋಪಗಳನ್ನು ಮಾಡಲಾಗಿದೆ.

ಬುಧವಾರ ಪಾಲಕ್ಕಾಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಐಕ್ಯವೇದಿಕೆಯ ನಾಯಕಿ ಕೆ.ಪಿ ಶಶಿಕಲಾ, ವೇಡನ್ ಅವರ ಅನುಚಿತವಾಗಿ ಉಡುಗೆ ತೊಟ್ಟ ವರ್ತನೆಗಳು ಸಾಮಾಜಿಕ ಅವಮಾನ ಎಂದು ಟೀಕಿಸಿದ್ದರು ಮತ್ತು ಅವುಗಳನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದರು. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ರ‍್ಯಾಪ್ ಸಂಗೀತದ ಪ್ರಸ್ತುತತೆಯನ್ನು ಪ್ರಶ್ನಿಸಿದ್ದರು.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ವೇಡನ್, ಶಶಿಕಲಾ ಅವರ ಜಾತಿವಾದಿ ಹೇಳಿಕೆಗಳು ನನ್ನನ್ನು ‘ಒಬ್ಬ ಉಗ್ರಗಾಮಿ, ಪ್ರತ್ಯೇಕತಾವಾದಿ ಅಥವಾ ತೊಂದರೆ ಕೊಡುವವ’ ಎಂದು ಬಿಂಬಿಸುವ ಪ್ರಯತ್ನಗಳಾಗಿವೆ ಎಂದು ಹೇಳಿದ್ದರು.

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...