Homeದಲಿತ್ ಫೈಲ್ಸ್ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಭದೋಹಿ ಸಮೀಪದ ಹಳ್ಳಿಯೊಂದರಲ್ಲಿ ದಲಿತ ರೈತ ಹಾಗೂ ಅವರ ಪತ್ನಿಯನ್ನು ಕೋಲು ಮತ್ತು ಕಬ್ಬಿಣದ ರಾಡ್‌ಗಳಿಂದ ಥಳಿಸಿ ಜಾತಿ ಆಧಾರಿತ ನಿಂದನೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಊಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಚ್ ಗ್ರಾಮದಲ್ಲಿ, ದಲಿತರು ಭೋಗ್ಯಕ್ಕೆ ಪಡೆದಿದ್ದ ಭೂಮಿಯಲ್ಲಿ ಪ್ರಬಲ ಜಾತಿ ಜನರು ದನಗಳನ್ನು ಮೇಯಿಸುತ್ತಿದ್ದ ಆರೋಪದ ಮೇಲೆ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ದೂರುದಾರ ದೀಪಕ್ ಕುಮಾರ್ ಪಾಸಿ, ಭೂಹೀನ ದಲಿತ ರೈತರಾಗಿದ್ದಾರೆ. ಸ್ಥಳೀಯ ಗ್ರಾಮಸ್ಥರ ಹೊಲದಲ್ಲಿ ಭೋಗ್ಯದ ಆಧಾರದ ಮೇಲೆ ಉದ್ದು ಬೆಳೆಯುತ್ತಾರೆ.

ದೀಪಕ್, ತನ್ನ ಹೊಲದಲ್ಲಿ ಮತ್ತೊಬ್ಬ ಗ್ರಾಮಸ್ಥರ ದನ ಮೇಯುವುದನ್ನು ಆಕ್ಷೇಪಿಸಿದಾಗ, ಅವರ ಪತ್ನಿ ಸುಮಿತ್ರಾ, ಅಣ್ಣ ಮತ್ತು ತಾಯಿಯ ಮೇಲೆ ಹಲ್ಲೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

“ರಾಜಾರಾಮ್ ಯಾದವ್ ತಮ್ಮ ಹೊಲದಲ್ಲಿ ದನಗಳು ಮೇಯುತ್ತಿರುವ ಬಗ್ಗೆ ದೀಪಕ್ ದೂರು ನೀಡಿದಾಗ, ರಾಜಾರಾಮ್ ಕೋಪಗೊಂಡರು. ಅವರು ದೀಪಕ್ ಮೇಲೆ ಜಾತಿ ನಿಂದನೆ ಮಾಡಿ, ಇತರರ ಸಹಾಯದಿಂದ ಕೋಲು ಮತ್ತು ಕಬ್ಬಿಣದ ಸರಳುಗಳಿಂದ ಹೊಡೆದರು” ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಮನ್ಯು ಮಾಂಗ್ಲಿಕ್ ಹೇಳಿದ್ದಾರೆ.

ದೂರಿನ ಪ್ರಕಾರ, ದಾಳಿಕೋರರು ಸುಮಿತ್ರಾಳ ಕೂದಲನ್ನು ಹಿಡಿದು ಹೊಲದಾದ್ಯಂತ ಎಳೆದೊಯ್ದು, ಹೊಡೆದು, ಬಟ್ಟೆ ಬಿಚ್ಚಿದರು. ದೀಪಕ್ ಮತ್ತು ಸುಮಿತ್ರಾ ಅವರ ಗಾಯಗಳು ಗಂಭೀರವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕುಟುಂಬದ ಇತರ ನಾಲ್ವರು ಸದಸ್ಯರನ್ನು ಚಿಕಿತ್ಸೆ ಬಳಿಕ ಬಿಡುಗಡೆ ಮಾಡಲಾಗಿದೆ.

ದೀಪಕ್ ಅವರ ದೂರಿನ ಆಧಾರದ ಮೇಲೆ, ಪೊಲೀಸರು ರಾಜಾರಾಮ್ ಯಾದವ್, ದಿಲಜೀತ್ ಯಾದವ್, ಅರವಿಂದ್ ಯಾದವ್, ರಾಜೇಂದ್ರ ಯಾದವ್, ಪಾರ್ವತಿ ದೇವಿ ಮತ್ತು ತಾರಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ಪಹಲ್ಗಾಮ್‌ನಲ್ಲಿ ಮಹಿಳೆಯರಿಗೆ ವೀರೋಚಿತ ಗುಣಗಳಿರಲಿಲ್ಲ’: ಭಯೋತ್ಪಾದಕ ದಾಳಿಯಲ್ಲಿ ಸಂಗಾತಿಗಳನ್ನು ಕಳೆದುಕೊಂಡವರ ಕುರಿತು ಬಿಜೆಪಿ ಸಂಸದನ ಅಸೂಕ್ಷ್ಮ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...