Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...