ಕಲಬುರಗಿಯಲ್ಲಿ ಬಿಜೆಪಿ ಆಯೋಜಿಸಿದ್ದ “ಕಲಬುರಗಿ ಚಲೋ” ಪ್ರತಿಭಟನೆಯ ಪಕ್ಷದ ಎಂಎಲ್‌ಸಿ ಎನ್. ರವಿಕುಮಾರ್ ಮಾತಿನ ಭರದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು “ಪಾಕಿಸ್ತಾನಿ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಜಿಲ್ಲಾಧಿಕಾರಿ ಮುಸ್ಲಿಂ ಆಗಿರುವ ಕಾರಣಕ್ಕೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕನೂ ಆಗಿರುವ ರವಿಕುಮಾರ್ ಅವರು ಈ ದ್ವೇಷ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಿರುದ್ದ ತೀವ್ರ ಆಕ್ರೊಶ ವ್ಯಕ್ತವಾಗಿದೆ. ”ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನಿ”
ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.
ಈ ವೇಳೆ ಜಿಲ್ಲಾಧಿಕಾರಿಯ ಸ್ವಾತಂತ್ರ್ಯವನ್ನು ಪ್ರಶ್ನಿಸಿದ ಅವರು, “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳುವ ಮೂಲಕ ಅವಹೇಳನಕಾರಿ ಉಲ್ಲೇಖವನ್ನು ಮಾಡಿದ್ದಾರೆ.
ಬಿಜೆಪಿ ಎಂಎಲ್ಸಿಯಿಂದ ವಿವಾದಾತ್ಮಕ ಹೇಳಿಕೆ
ಬಿಜೆಪಿ ಆಯೋಜಿಸಿದ್ದ ʼಕಲಬುರಗಿ ಚಲೋ" ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ಮಾತಿನ ಭರದಲ್ಲಿ ಕಲಬುರ್ಗಿಯ ಡಿಸಿ ಅವರನ್ನು ಪಾಕಿಸ್ತಾನದಿಂದ ಬಂದಿದ್ದಾರ ಎಂದು ಹೇಳುವ ಮೂಲಕ ದ್ವೇಷದ ಮಾತುಗಳನ್ನಾಡಿದ್ದಾರೆ. #KalaburagiChalo #KalaburagiControversy… pic.twitter.com/9CGmN1dJIn
— eedina.com ಈ ದಿನ.ಕಾಮ್ (@eedinanews) May 26, 2025
“ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಅವರೇನು ಪಾಕಿಸ್ತಾನದಿಂದ ಬಂದಿದ್ದಾರೆಯೇ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೇ ಎಂದು ನನಗೆ ತಿಳಿದಿಲ್ಲ” ಎಂದು ರವಿಕುಮಾರ್ ಹೇಳಿದ್ದು, ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆಯನ್ನು ನೋಡಿದರೆ, “ಡಿಸಿ ಬಹುಷಃ ಪಾಕಿಸ್ತಾನದಿಂದ ಬಂದಿದ್ದಾರೆ” ಎಂದು ಮತ್ತೆ ಮಹಿಳಾ ಅಧಿಕಾರಿಯನ್ನು ಅವಹೇಳನ ಮಾಡಿದ್ದಾರೆ.
ಅವರ ಹೇಳಿಕೆಗೆ ರಾಜ್ಯದ ಪ್ರಗತಿಪರ ಸಂಘಟನೆಗಳು ಮತ್ತು ನಾಗರಿಕ ಸಮಾಜ ಸಂಘಟನೆಗಳಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವರ ಹೇಳಿಕೆಯು “ಅವಮಾನಕರ ಮತ್ತು ಕೋಮುವಾದಿ” ಹೇಳಿಕೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ರವಿಕುಮಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, ಅವರು ಅನಗತ್ಯವಾಗಿ ಉದ್ವಿಗ್ನತೆಯನ್ನು ಉಂಟುಮಾಡುತ್ತಿದ್ದಾರೆ ಮತ್ತು ಜಿಲ್ಲಾಡಳಿತವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾನುವಾರ ಆರೋಪಿಸಿದ್ದಾರೆ. “ಇದು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಮತ್ತು ಕೋಮುವಾದೀಕರಣಗೊಳಿಸುವ ಪ್ರಯತ್ನವಾಗಿದೆ. ಕರ್ತವ್ಯ ನಿರ್ವಹಿಸುವ ಅಧಿಕಾರಿಯ ವಿರುದ್ಧ ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ” ಎಂದು ಪಾಟೀಲ್ ಹೇಳಿದ್ದಾರೆ. ”ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನಿ”
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ
ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ

