Homeಮುಖಪುಟ''ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ" | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

”ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” | ಆಪರೇಷನ್ ಸಿಂಧೂರ ಹೇಳಿಕೆಗಳ ಬಗ್ಗೆ ಎನ್‌ಡಿಎ ನಾಯಕರಿಗೆ ಪ್ರಧಾನಿ ಸಲಹೆ

- Advertisement -
- Advertisement -

ಸಾರ್ವಜನಿಕ ಹೇಳಿಕೆಗಳಲ್ಲಿ ಸಂಯಮ ಕಾಯ್ದುಕೊಳ್ಳುವಂತೆ ಎನ್‌ಡಿಎ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಭಾನುವಾರ ನಡೆದ ಎನ್‌ಡಿಎ ನಾಯಕರ ಸಭೆಯಲ್ಲಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತಮ ಆಡಳಿತದ ಮೇಲೆ ಕೇಂದ್ರೀಕರಿಸಿ ನಡೆದ ಸಭೆಯಲ್ಲಿ ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು. ”ಎಲ್ಲೆಂದರಲ್ಲಿ

ಪಕ್ಷದ ನಾಯಕರು ಮಾಡಿದ ಅನಗತ್ಯ ಹೇಳಿಕೆಗಳ ಬಗ್ಗೆ ಪ್ರಧಾನಿ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ ವಿವೇಚನಾರಹಿತ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

“ಎಲ್ಲೆಂದರಲ್ಲಿ, ಏನೇನೊ ಮಾತನಾಡದಿರಿ” ಎಂದು ಅವರು ಹೇಳಿದ್ದಾಗಿ ವರದಿಯಾಗಿದ್ದು, ಶಿಸ್ತುಬದ್ಧ ಸಂವಹನದ ಅಗತ್ಯವನ್ನು ಈ ವೇಳೆ ಅವರು ಒತ್ತಿ ಹೇಳಿದ್ದಾರೆ ಎಂದು ಅದು ತಿಳಿಸಿದೆ.

ಆಪರೇಷನ್ ಸಿಂಧೂರ ಬಗ್ಗೆ ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ಸಲಹೆ ಬಂದಿದೆ ಎಂದು ವರದಿ ಉಲ್ಲೇಖಿಸಿದೆ. ಈ ನಾಯಕರ ಈ ಹೇಳಿಕೆಯು ಪಕ್ಷಕ್ಕೆ ಮುಜುಗರವನ್ನುಂಟು ಮಾಡಿದೆ ಎಂದು ವರದಿಯಾಗಿದೆ.

“ಆಪರೇಷನ್ ಸಿಂಧೂರ” ವಿಷಯದ ಕುರಿತು ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿಯ ಭಾಗವಹಿಸುವಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಪಾಕಿಸ್ತಾನದ ಕೋರಿಕೆಯ ಮೇರೆಗೆ ಕದನ ವಿರಾಮದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಈ ಹಿಂದೆ ಬಿಜೆಪಿ ನಾಯಕರು ಆಪರೇಷನ್ ಸಿಂಧೂರ ಮತ್ತು ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಇದು ಪಕ್ಷವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.

ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ, ಆಪರೇಷನ್ ಸಿಂಧೂರ್ ಕುರಿತಾದ ಪತ್ರಿಕಾಗೋಷ್ಠಿಯ ಸಮಯದಲ್ಲಿ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುವ ಅಧಿಕಾರಿಗಳಲ್ಲೊಬ್ಬರಾದ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಮಾನಕರ ಹೇಳಿಕೆಗಳನ್ನು ನೀಡಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಯಿತ್ತು.

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಹೇಳಿದ್ದರು. ಅದೇ ರೀತಿ, ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ಸಶಸ್ತ್ರ ಪಡೆಗಳು ಪ್ರಧಾನಿ ನರೇಂದ್ರ ಮೋದಿಗೆ ತಲೆಬಾಗಬೇಕು ಎಂದು ಸೂಚಿಸುವ ಮೂಲಕ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದರು. ಹಿರಿಯ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಶಾ ಅವರ ಹೇಳಿಕೆಗಳಿಂದ ದೂರವಿದ್ದು, ಅವರನ್ನು “ನಗುವ ವಸ್ತು” ಎಂದು ಕರೆದಿದ್ದರು.

ಬಿಜೆಪಿ ಸಚಿವರ ಈ ಹೇಳಿಕೆಗಳು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದವು. ಕಾಂಗ್ರೆಸ್ ಈ ಹೇಳಿಕೆಗಳನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಘೋಷಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...